NEWSಕೃಷಿನಮ್ಮಜಿಲ್ಲೆ

ಬಗರಹುಕುಂ ಸಾಗುವಳಿ ಹೆಸರಿನಲ್ಲಿ ಸರ್ಕಾರಿ ಜಮೀನು ಬಂಡವಾಳಶಾಹಿಗ ಪಾಲು: ತಪ್ಪಿಸಲು ಸಚಿವರಿಗೆ ರೈತ ಮುಖಂಡರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಂದಾಯ ಇಲಾಖೆಯ ದಾಖಲಾತಿಗಳನ್ನು ಗಣಕೀಕರಣ ಮಾಡುವ ವೇಳೆ ಬಹಳಷ್ಟು ಕಂದಾಯ ನೌಕರರು ಸಂಬಂಧಿಕರ ಹೆಸರಿನಲ್ಲಿ ಸರ್ಕಾರಿ ಭೂಮಿಗಳ ದಾಖಲಾತಿ ಆರ್‌ಟಿಸಿ ಸೃಷ್ಟಿಸಿ. ಹಾಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲಿಬ್ಬಿಸಲು ವಾಮ ಮಾರ್ಗ ಬಳಸಿದ್ದಾರೆ ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ತನಿಖೆ ನಡೆಸಿ ನೈಜ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುೂರ್ ಶಾಂತಕುಮಾರ್ ಆಗ್ರಹಿಸಿದ್ದಾರೆ.

ಈ ಸಂಬಂಧ ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ನೀಡಿರುವ ಆದೇಶದಂತೆ ಬಗರಹುಕುಂ ಸಾಗುವಳಿ ಪತ್ರ ನೀಡಿದರೆ ನಿಜವಾಗಿ ಸಾಗುವಳಿ ಮಾಡುತ್ತಿರುವ ಲಕ್ಷಾಂತರ ರೈತರಿಗೆ ದ್ರೋಹವಾಗುತ್ತದೆ. ಈ ಬಗ್ಗೆ 18 ರಂದು ಕಂದಾಯ ಸಚಿವರನ್ನು ಭೇಟಿ ಮಾಡಿ ಒತ್ತಹಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನದಿ ಭಾಗದ ರಾಜ್ಯಗಳು ತಮಿಳುನಾಡು, ಪಾಂಡಿಚೇರಿ, ಕೇರಳ, ಕರ್ನಾಟಕ ರೈತ ಮುಖಂಡರ ಸಭೆ ಇದೇ ಅ.22 ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಕಾವೇರಿ ನೀರು ಸದ್ಬಳಕೆ. ಮೇಕೆದಾಟು ಜಲಾಶಯ ನಿರ್ಮಾಣ. ಕಾವೇರಿ ನದಿ ಕಲ್ಮಶ ತಡೆಗಟ್ಟುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇನ್ನು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಿಂಟಾಲ್ 2280 ರೂ.ಗೆ ಹೆಚ್ಚುವರಿ ರಾಜ್ಯ ಸರ್ಕಾರ 500 ಪ್ರೋತ್ಸಾಹ ಧನ ನೀಡಿ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಪಿಎಂಸಿಗಳಲ್ಲಿ ರಾಜ್ಯಾದ್ಯಂತ ರೈತರ ಸುಲಿಗೆ ನಡೆಯುತ್ತಿದೆ. ಕಾನೂನು ಬಾಹಿರವಾಗಿ ಶೇ.10 ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ರಾಜ್ಯಮಟ್ಟದ ನಿರ್ದೇಶಕರಿಗೆ ದೂರು ಸಲ್ಲಿಸಲಾಗಿದೆ. ನಿರ್ಲಕ್ಷ್ಯ ಮಾಡಿದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಇನ್ನು ಜಿಎಂ ಸೀಡ್ಸ್ ವಿರೋಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯ ಸರ್ಕಾರದ ವತಿಯಿಂದ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಗುಜರಾತ್‌ನಲ್ಲಿ ಟನ್ನ ಕಬ್ಬಿಗೆ 4,500 ನೀಡುತ್ತಿದ್ದಾರೆ. ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚು ಬೆಲೆ ನೀಡದೆ ರೈತರನ್ನ ವಂಚಿಸುತ್ತಿದೆ. ಸರ್ಕಾರ ಯಾವುದೇ ಮುಲಾಜಿಗೂ ಒಳಗಾಗದೆ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಪಿ.ಸೋಮಶೇಖರ್, ನೀಲಕಂಠಪ್ಪ, ಕಿರಗಸೂರು ಶಂಕರ, ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಪರಶಿವಮೂರ್ತಿ, ಕೆಂಡಗಣ್ಣ ಸ್ವಾಮಿ, ಕಮಲಮ್ಮ, ಕೋಟೆ ರಾಜೇಶ್, ರಂಗರಾಜು, ಅಂಬಳೆ ಮಂಜುನಾಥ್, ಪ್ರಸಾದ್ ನಾಯಕ್, ಮಹಾಲಿಂಗ ನಾಯಕ, ಕುಳ್ಳೆಗೌಡ, ಶಿವಸ್ವಾಮಿ, ಸಿದ್ದರಾಮು, ಮಹಾದೇವ ಸ್ವಾಮಿ, ಸುನೀಲ್, ಪಿ.ರಾಜು ಮುಂತಾದವರು ಇದ್ದರು.

Leave a Reply

error: Content is protected !!
LATEST
KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ