ಅಕ್ರಮ ಮಾರಾಟಕ್ಕೆ ಮದ್ಯ ಸಾಗಿಸುತ್ತಿದ್ದ ನಾಲ್ವರ ಬಂಧನ
ಪ್ರತ್ಯೇಕ ದಾಳಿಯಲ್ಲಿ 1.22 ಲಕ್ಷ ರೂ. ಮೌಲ್ಯದ ಮದ್ಯ ವಶ
ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಸಾಗಾಣಿಕೆ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ ಮದ್ಯದ ಬಾಟಲ್‌ಗಳನ್ನು ವಶಕ್ಕೆ ಪಡೆದಿರುವುದಾಗಿ ಯಲಹಂಕ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಯಲಹಂಕ ವಲಯ ಕಚೇರಿ ವ್ಯಾಪ್ತಿಯ ಶ್ರೀರಾಂಪುರ ನಗರದ ರಾಯಲ್ ಎನ್ಕ್ಲೇವ್ ಆರ್ಚ್‍ನ ಮುಂಭಾಗದ ರಸ್ತೆಯ ಅಮೃತಹಳ್ಳಿ ಹಾಗೂ ಲಕ್ಷ್ಮೀ ನಾರಾಯಣ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ವಿಶ್ವನಾಥ್ ಮತ್ತು ನರಸಮ್ಮ ಎಂಬುವರು ಅಕ್ರಮವಾಗಿ ಮಾರಾಟ ಮಾಡಲು ಮದ್ಯದ ದಾಸ್ತಾನು ಮಾಡಿ ಸಾಗಾಣಿಕೆ ಮಾಡುತ್ತಿದ್ದ ವೇಳೆ 1.22 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದು, ಆ ಇಬ್ಬರನ್ನು ಬಂಧಿಸಿದ್ದಾರೆ.
ಸಾಗಾಣಿಕೆ ಮಾಡುತ್ತಿದ್ದ ಬಜಾಜ್ ಡಿಸ್ಕವರ್ ದ್ವಿಚಕ್ರ ವಾಹನ, 180 ಮಿಲಿಯ ಎಸ್‍ಎನ್‍ಜೆ ನಂ.1 ಎಕ್ಸ್ ಓ ಸ್ಟ್ರಾಂಗ್ ಬ್ರಾಂದಿಯ 22 ಬಾಟಲಿಗಳಲ್ಲಿ ಒಟ್ಟು 3.960 ಲೀಟರ್ ಶಂಕಿತ ನಕಲಿ ಮದ್ಯದ ಹೊಂದಿದ್ದು, ಮಾರಾಟ ಮಾಡುವ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಮಾಡಿದ್ದಾಗಿ ಅಬಕಾರಿ ಅಧಿಕಾರಿ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ವರುಣೇಶ್, ರಘು. ಎನ್. ಎಂಬುವರು ಹೀರೊ ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ 180 ಮಿಲಿಯ ಡೇ ಅಂಡ್ ನೈಟ್ ಮದ್ಯದ ಒಟ್ಟು 48 ಬಾಟಲಿಗಳಲ್ಲಿ 8.640 ಲೀಟರ್ ಶಂಕಿತ ನಕಲಿ ಮದ್ಯದ ದಾಸ್ತಾನನ್ನು ಹೊಂದಿದ್ದು, ಮಾರಾಟ ಮಾಡುವ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಮಾಡಿ ಆರೋಪಿಗಳನ್ನು ಮಾಲ್ ಸಹಿತ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ಯಲಹಂಕ ವಲಯದ ಅಬಕಾರಿ ನಿರೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಅವರು ಮೊಕದ್ದಮೆ ದಾಖಲಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ ಎಂದು ಅಬಕಾರಿ ಉಪ ಆಯುಕ್ತ ಎಸ್. ಶ್ರೀನಾಥ್ ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಉತ್ತರ ವಲಯದ ಅಬಕಾರಿ ಉಪ ಆಯುಕ್ತ ಪಿ.ಎಸ್.ಶ್ರೀನಾಥ್ ಮತ್ತು ಯಶವಂತಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಜಿ.ವಿವೇಕ್ ಅವರ ಮಾರ್ಗದರ್ಶನದಂತೆ ಗಸ್ತು ಕಾರ್ಯಾಚರಣೆಯನ್ನು ಅಬಕಾರಿ ಉಪ ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ನಡೆಸಿದರು.
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...