NEWSನಮ್ಮಜಿಲ್ಲೆಬೆಂಗಳೂರು

ಇನ್ನು ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಾಣಕ್ಕೆ ಅವಕಾಶವಿಲ್ಲ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋ ಲೈಯಿಂಗ್ ಪ್ರದೇಶದಲ್ಲಿ ಇನ್ನು ಮುಂದೆ ಬೇಸ್​ಮೆಂಟ್ ಮಾಡಲು ಅವಕಾಶ ಇರುವುದಿಲ್ಲ. ಅಲ್ಲಿ ಸ್ಟಿಲ್ಟ್ ಫ್ಲೋರ್ ಮಾಡಲು ಅವಕಾಶ ನೀಡಲಾಗುತ್ತದೆ. ಬೇಸ್ ಮೆಂಟ್​ಗೆ ನೀರು ನುಗ್ಗುವುದನ್ನು ತಪ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಇನ್ನು ಮಾನ್ಯತಾ ಟೆಕ್‌ಪಾರ್ಕ್ ಬಳಿ ರಾಜಕಾಲುವೆ ಒತ್ತುವರಿಯಾಗಿದ್ದು, ಕೂಡಲೇ ತೆರವಿಗೆ ಸೂಚನೆ ನೀಡಿದ್ದೇನೆ. ಈ ಭಾಗದ ರಸ್ತೆಯಲ್ಲಿ 90 ದಿನದಲ್ಲಿ ಒಳಚರಂಡಿ ನಿರ್ಮಿಸಿ ಕೊಡುವುದಾಗಿ ಮಾನ್ಯತಾ ಟೆಕ್‌ಪಾರ್ಕ್ ಸಿಇಒ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಎಚ್​ಬಿಆರ್ ಬಡಾವಣೆ 5ನೇ ಹಂತದಲ್ಲಿ ರಾಜಕಾಲುವೆ ಸಮಸ್ಯೆ ಇದೆ.‌ ಅಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಆಗುತ್ತಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಸವನ್ನು ಚರಂಡಿಗೆ ಹಾಕುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಸಾಯಿಲೇಔಟ್​ ತಗ್ಗು ಪ್ರದೇಶ: ಬಿಡಿಎ ಜಾಗದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಆದ ಒತ್ತುವರಿ ತೆರವಿಗೆ ಸೂಚಿಸಿದ್ದೇನೆ. ಸಾಯಿ ಲೇಔಟ್ ತಗ್ಗು ಪ್ರದೇಶದಲ್ಲಿದೆ.‌ ಹಾಗಾಗಿ ಮಳೆ ಹೆಚ್ಚು ಬಂದಾಗ ಸಮಸ್ಯೆ ಆಗುತ್ತಿದೆ. ರೈಲ್ವೇ ಬ್ರಿಡ್ಜ್​​ನ ವೆಂಟ್ ಕಿರಿದಾಗಿದೆ. ಅದನ್ನು ದೊಡ್ಡದು ಮಾಡಿದರೆ ಸಮಸ್ಯೆ ಪರಿಹಾರ ಆಗುತ್ತದೆ. ಅನೇಕ ವರ್ಷಗಳಿಂದ ಈ ಸಮಸ್ಯೆ ಆಗುತ್ತಿದೆ ಎಂದರು.

ಸಿಲ್ಕ್ ಬೋರ್ಡ್ ಜಂಕ್ಷನ್​ನಲ್ಲಿ ನಾಲ್ಕು ಕಡೆಯಿಂದ ನೀರು ಬರುತ್ತದೆ. ಹೀಗಾಗಿ ನೀರು ರಸ್ತೆ ಮೇಲೆ ಬರುತ್ತಿದೆ. ಮೆಟ್ರೋ, ಬಿಬಿಎಂಪಿ, ಎನ್​ಹೆಚ್ ಮೂರು ಜನ‌ ಸೇರಿ ಕೆಲಸ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲರೂ ಕೂತು ತೀರ್ಮಾನ ಮಾಡಲು ಸೂಚಿಸಿದ್ದೇನೆ. ಗುರಪ್ಪನಪಾಳ್ಯದಲ್ಲಿ ತಡೆಗೋಡೆ ಕುಸಿದು ಬಿದ್ದಿದೆ.‌ ಹೀಗಾಗಿ ಮನೆಗಳಿಗೆ ನೀರು ನುಗ್ಗಿದೆ ಎಂದು ಹೇಳಿದರು.

ಮಹದೇವಪುರದ ಪಣತ್ತೂರು ಗಾರ್ಡನ್​​ನಲ್ಲಿ ನೀರು ಹರಿಯಲು ಸಮಸ್ಯೆ ಆಗುತ್ತಿದೆ. ರಸ್ತೆಯಲ್ಲಿ ಸುಮಾರು ನಾಲ್ಕು ಅಡಿಯಷ್ಟು ನೀರು ನಿಲ್ಲುತ್ತದೆ. ರೈಲ್ವೇ ಅಂಡರ್ ಪಾಸ್ ಅಗಲ 30 ಅಡಿ ಇದೆ. ಇದನ್ನು 30 ಅಡಿ ವಿಸ್ತರಣೆ ಮಾಡಬೇಕು. ರಸ್ತೆ ಅಗಲೀಕರಣ ಮಾಡಬೇಕು.‌ ಈಗಾಗಲೇ ಇದರ ಕಾಮಗಾರಿಗಳು ಆರಂಭವಾಗಿದ್ದು, 80% ಕಾಮಗಾರಿ ಪೂರ್ಣವಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇವೆ. 45 ದಿನಗಳಲ್ಲಿ ಪೂರ್ಣ ಕೆಲಸ ಮುಗಿಸಲು ಸೂಚನೆ ನೀಡಲಾಗಿದೆ. ಟ್ರಂಚ್ ಲೆಸ್ ತಂತ್ರಜ್ಞಾನ ಬಳಸಿ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಸರ್ವೆ ಮಾಡಿ ಪರಿಹಾರ: ಮಳೆಗೆ ಮನೆ ಹಾನಿಯಾದ ಕಡೆ ಸರ್ವೆ ಮಾಡಿ, ನಷ್ಟ ಆದವರಿಗೆ ಪರಿಹಾರ ಕೊಡಲು ಸೂಚನೆ ನೀಡಿದ್ದೇನೆ. ಒಂದು ಲಕ್ಷ ರೂಪಾಯಿ ಪರಿಹಾರ ಕೇಳುತ್ತಿದ್ದಾರೆ.‌ ಎಷ್ಟು ಪರಿಹಾರ ಕೊಡಬೇಕು ಎಂಬುದು ಸರ್ವೆ ಮಾಡಿದ ಬಳಿಕ ತೀರ್ಮಾನ ಮಾಡಲಿದ್ದೇವೆ.‌ ತಕ್ಷಣ ಸರ್ವೆ ಮಾಡಿ ಪರಿಹಾರ ಕೊಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಬಿಟಿಎಂ ಲೇಔಟ್​ನಲ್ಲಿ ವಿದ್ಯುತ್ ತಗುಲಿ ಇಬ್ಬರು ಸಾವಿಗೀಡಾಗಿದ್ದಾರೆ. ಅವರ ಕುಟುಂಬಕ್ಕೆ ಪಾಲಿಕೆಯಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗಿದೆ. ಬೆಸ್ಕಾಂನಿಂದಲೂ ಐದು ಲಕ್ಷ ರೂ. ಪರಿಹಾರ ಕೊಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರೆಡ್ ಕಾರ್ಪೆಟ್ ಬಿಜೆಪಿಯವರ ಸೃಷ್ಟಿ: ಭೇಟಿಯ ವೇಳೆ ರೆಡ್ ಕಾರ್ಪೆಟ್ ಹಾಕಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಅವರು, ಇದೆಲ್ಲವೂ ಬಿಜೆಪಿಯ ಸೃಷ್ಟಿ. ಯಾವುದೇ ರೆಡ್ ಕಾರ್ಪೆಟ್ ಹಾಕಿಲ್ಲ. ಪ್ರೊಟೊಕಾಲ್ ಪ್ರಕಾರ ಬಿಬಿಎಂಪಿ ಅಧಿಕಾರಿಗಳು ನನ್ನನ್ನು ಆಹ್ವಾನಿಸಿದ್ದಾರೆ. ಒಂದು ವೇಳೆ ರೆಡ್ ಕಾರ್ಪೆಟ್ ಹಾಕಿದ್ದರೆ ಅದು ತಪ್ಪು. ಇಂಥದ್ದೊಂದು ವಿಡಿಯೋವನ್ನು ಬಿಜೆಪಿಯೇ ಸೃಷ್ಟಿಸಿದೆ. ಭೇಟಿ ವೇಳೆ ಬಿಜೆಪಿ ಶಾಸಕರೂ ಇದ್ದರು ಎಂದರು.

ಬೆಂಗಳೂರಲ್ಲಿ ರಾಜಕಾಲುವೆ ಸುಮಾರು 860 ಕಿ.ಮೀ. ಇದೆ. 491 ಕಿ.ಮೀ. ರಾಜ ಕಾಲುವೆಯಲ್ಲಿ ಲೈನಿಂಗ್ ಕಾಮಗಾರಿ ಪೂರ್ಣವಾಗಿದೆ. 195 ಕಿ.ಮೀ. ರಾಜಕಾಲುವೆ ಕೆಲಸ ನಡೆಯುತ್ತಿದೆ. ಫೆಬ್ರವರಿ 2026ರಂದು ಕೆಲಸ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. 173 ಕಿ.ಮೀ. ರಾಜಕಾಲುವೆ ಕಾಮಗಾರಿಗಳಿಗೆ ವಿಶ್ವಬ್ಯಾಂಕ್​ನಿಂದ ಸಾಲ ಪಡೆಯಲಾಗಿದೆ. ಇದರ ಟೆಂಡರ್ ಆಗಿದೆ. 2,000 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಮೂರು ವರ್ಷದಲ್ಲಿ ಇದರ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.‌

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ