NEWSದೇಶ-ವಿದೇಶನಮ್ಮಜಿಲ್ಲೆಬೆಂಗಳೂರು

ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ನಗರ ಸಾರಿಗೆ ಸಂಸ್ಥೆ ಅಧಿಕಾರಿಗಳು-ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಲ್ಲಿ ಹಾಗೂ ಸಾರಿಗೆಯ ಸುಧಾರಣೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವುದರಿಂದ ನಮ್ಮ BMTCಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್‌. ರಾಮಚಂದ್ರನ್ ಶ್ಲಾಘಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಅಕ್ಟೋಬರ್ 25 ರಿಂದ 27 ರವರೆಗೆ ಗುಜರಾತ್‌ ಗಾಂಧಿನಗರದಲ್ಲಿ ನಡೆದ 17ನೇ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್ ಮತ್ತು ಎಕ್ಸ್‌ಪೋ 2024ರ ಸಮಾರಂಭದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕೊಡಮಾಡುವ Award of Excellence ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ನಮ್ಮ ಸಂಸ್ಥೆಯ ಪ್ರತಿಯೊಬ್ಬ ನೌಕರನಿಗೂ ನಾನು ಈ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯಂತ ವಿನಮ್ರವಾಗಿ ಅರ್ಪಿಸುತ್ತೇನೆ. ಇದು ನಮ್ಮ ಎಲ್ಲ ಸಿಬ್ಬಂದಿಗಳ ಪ್ರಾಮಾಣಿಕ ಮತ್ತು ನಿಸ್ವಾರ್ಥ ಸೇವಾ ಸಮರ್ಪಣೆಯಿಂದಾಗಿ ಸಂದಿರುವ ಗೌರವವಾಗಿದೆ ಎಂದು ಹೇಳಿದರು.

ಇನ್ನು ಇಂದು (ಅ.27) ನಾವು ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದೇವೆ. ನಮ್ಮ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸಮರ್ಥ ನಾಯಕತ್ವದಿಂದಾಗಿ ಈ ಪುರಸ್ಕಾರಕ್ಕೆ ನಾವು ಪಾತ್ರರಾಗಿದ್ದೇವೆ ಮತ್ತು ನಮ್ಮ ಸಾರಿಗೆ ಕಾರ್ಯದರ್ಶಿ ಡಾ. ಎನ್‌.ವಿ. ಪ್ರಸಾದ್ ಅವರ ಮಾರ್ಗದರ್ಶನವೂ ಕೂಡ ಇದೆ ಎಂದರು.

ಅಲ್ಲದೆ ಮುಂದುವರಿದು ಮಾತನಾಡಿದ ಅವರು, ನಮ್ಮ KSRTC MD ಅನ್ಬುಕುಮಾರ್ ಅವರ ಬೆಂಬಲ ಮತ್ತು ನಮ್ಮ BMTC ನಿಗಮದ ಎಲ್ಲ ನೌಕರರ ಸಂಘಟನೆಗಳ ಒಳಗೊಳ್ಳುವಿಕೆಯಿಂದ ನಮ್ಮ ಸಂಸ್ಥೆಗೆ ಈ ಹೆಮ್ಮೆಯ ರಾಷ್ಟ್ರೀಯ ಪುರಸ್ಕಾರ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡರು.

ಇದೇ ವೇಳೆ ನಮ್ಮ ಜನರ ಮನೆ ಬಾಗಿಲಿಗೆ ಉತ್ತಮ ಸಾರಿಗೆ ಸೇವೆಗಳನ್ನು ಒದಗಿಸಲು ನಮ್ಮನ್ನು ನಾವು ಪುನಃ ಸಮರ್ಪಿಸಿಕೊಳ್ಳೋಣ ಎಂದು ನಿಗಮದ ಸಮಸ್ತ ಅಧಿಕಾರಿಗಳು-ನೌಕರರಿಗೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ಕರೆ ನೀಡಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನಗರ ಪ್ರದೇಶ ಸಾರಿಗೆ ವರ್ಗದಲ್ಲಿ ಸಾರ್ವಜನಿಕರ ಒಳಗೊಳ್ಳುವಿಕೆಯ ಅತ್ಯುತ್ತಮ ದಾಖಲೆ ಹೊಂದಿರುವ ನಗರ ಸಾರಿಗೆಯಾಗಿ ಗುರುತಿಸಿಕೊಂಡು ಒಂದು ಮೈಲುಗಲ್ಲನ್ನೇ ಸ್ಥಾಪಿಸಿದೆ. ಹೀಗಾಗಿ ಈ 17ನೇ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್ ಮತ್ತು ಎಕ್ಸ್‌ಪೋ 2024ರ ಸಂದರ್ಭದಲ್ಲಿ ಈ ಪ್ರಶಸ್ತಿ ನೀಡುತ್ತಿರುವುದು ನಮಗೂ ಹೆಮ್ಮೆಯ ವಿಷಯವೆಂದು ಭಾರತ ಸರ್ಕಾರದ ಕಾರ್ಯದರ್ಶಿ ಶ್ರೀನಿವಾಸ್ ಆರ್. ಕಟಿಕಿತಾಳ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಪ್ರಯಾಣದ ಪ್ರೋತ್ಸಾಹವನ್ನು ಉತ್ತೇಜಿಸುವ ಮತ್ತು ವರ್ಧಿಸುವ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ. ಹೆಚ್ಚಿನ ಜನತೆ ಸಾರ್ವಜನಿಕ ಸಾರಿಗೆಯ ಮೇಲೆ ಅವಲಂಬನೆಯೊಂದಿದ್ದು ತಮ್ಮ ಖಾಸಗಿ ವಾಹನಗಳನ್ನು ಹೆಚ್ಚಾಗಿ ಬಳಸದಂತೆ ಸಮಯಕ್ಕೆ ಸರಿಯಾಗಿ ಸೇವೆಗೆ ಆದ್ಯತೆ ನೀಡುತ್ತಿರುವ ಮೆಚ್ಚುಗೆಯ ವಿಷಯವಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ