NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾಧ್ಯವೆಲ್ಲ ಸಾಧ್ಯ!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ.45ರಷ್ಟು ಹೆಚ್ಚಳ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ಸಾರಿಗೆ ನೌಕರರ ಪರವಾಗಿ 2023ರ ಮಾರ್ಚ್‌ ತಿಂಗಳಿನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದರು.

2023ರ ಮಾ.8ರಿಂದ ಸಾರಿಗೆ ನೌಕರರ ವಿವಿಧ ಸಂಘಟನೆಗಳ ಸಭೆಯನ್ನು ಅಂದಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಹಾಗೂ ಎಂಡಿಗಳ ಅಧ್ಯಕ್ಷತೆಯಲ್ಲಿ ಕರೆದು, ಆ ಸಭೆಗಳಲ್ಲಿ ಕೇವಲ ಶೇ.8-10ರಷ್ಟು ಮತ್ತು ಮಾ.15ರಂದು ನಡೆದಿದ್ದ ಸಭೆಯಲ್ಲಿ ಶೇ.14ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದರು.

ಅದರ ಜತೆಗೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದರು. ಅದನ್ನು ಗಮನಿಸಿದ ವಕೀಲ ಶಿವರಾಜು ಅವರು ಇದು ಒಂದು ರೀತಿ ಸಾರಿಗೆ ನೌಕರರಿಗೆ ಸೂಕ್ತವಾದ ವೇತನ ಹೆಚ್ಚಳ ಮಾಡುವುದಕ್ಕೆ ಮೀನಮೇಷ ಎಣಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದರು.

ಅಲ್ಲದೆ ಈ ಹಿನ್ನೆಲೆಯಲ್ಲೇ ವಕೀಲರು ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು. ಅದಕ್ಕೂ ಮೊದಲು ಮೂಲ ವೇತನಕ್ಕೆ ಬಿಡಿಎ ಮರ್ಜ್‌ ಮಾಡಬೇಕು ಆ ಬಳಿಕ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಆ ಸಂಬಂಧ ಸಾರಿಗೆ ನಿಗಮಗಳ ಎಂಡಿಗಳಿಗೆ ಮತ್ತು ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು 2023ರ ಮಾ.21ರವರೆಗೂ ಹೈ ಕೋರ್ಟ್‌ ಅವಕಾಶ ಕೂಡ ನೀಡಿತ್ತು.

ಮೂಲ ವೇತನಕ್ಕೆ ಬಿಡಿಎ ಮರ್ಜ್‌ ಮಾಡಿ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು, ಅದರ ಜತೆಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮಾಡುವ ಮೂಲಕ ಭವಿಷ್ಯದಲ್ಲಿ ಸಾರಿಗೆ ನೌಕರರು ವೇತನಕ್ಕಾಗಿ ಹೋರಾಟಕ್ಕೆ ಇಳಿಯ ಬಾರದು ಎಂಬ ದೃಷ್ಟಿಯಿಂದ ಈ ಪ್ರಯತ್ನ ಮಾಡುತ್ತಿದ್ದೇವೆ ಎಂದು ವಕೀಲ ಶಿವರಾಜು ಅಂದೇ ಹೇಳಿದ್ದರು.

ಆದರೆ, ವಕೀಲರು ಹೈಕೋರ್ಟ್‌ಗೆ ಅರ್ಜಿ ಹಾಕಿ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಕೇಳಿದರೆ ಅದನ್ನು ಹಿಯ್ಯಾಳಿಸಿದ ಕೆಲ ಸಂಘಟನೆಗಳ ಮುಖಂಡರು ಅವರನ್ನು ಲೇವಡಿ ಮಾಡಿದ್ದರು. ಇದರಿಂದ ಬೇಸರಗೊಂಡ ವಕೀಲರು ತಮ್ಮ ಅರ್ಜಿಯನ್ನು ಅರ್ಧಕ್ಕೆ ಕೈಬಿಟ್ಟು ಹೋದರು.

ಅದೆ ನೋಡಿ ಈಗ ಅಂದು ವಕೀಲ ಶಿವರಾಜು ಅವರು ಕೇಳಿದ್ದ ಶೇ.45ರಷ್ಟು ವೇತನ ಹೆಚ್ಚಳವಾಗಿದ್ದರೆ ಇಂದು ಸಾರಿಗೆ ನೌಕರರು ಬಹುತೇಕ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಪಡೆಯುತ್ತಿದ್ದರು. ಅಂದು ಅವರನ್ನು ಹಿಯ್ಯಾಳಿಸಿದ್ದರ ಪರಿಣಾಮ ಇಂದು ಬಹುತೇಕ ಎಲ್ಲ ಅಧಿಕಾರಿಗಳು-ನೌಕರರು ಸರಾಸರಿ ಶೇ.45ರಷ್ಟು ವೇತನ ಪಡೆಯುವಂತಾಗಿದೆ.

ಅಂದರೆ 2023ರ ಮಾರ್ಚ್‌ನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದ ವಕೀಲರನ್ನು ಸಾರಿಗೆಯ ಸಮಸ್ತ ನೌಕರರು ಬೆಂಬಲಿಸಿದ್ದರೆ ಇಂದು ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಪಡೆದುಕೊಂಡು ನೆಮ್ಮದಿಯಿಂದ ಇರಬಹುದಾಗಿತ್ತು. ಆದರೆ ಅಂದು ಶೇ.45ರಷ್ಟು ವೇತನ ಹೆಚ್ಚಳವಾದರೆ ನೌಕರರು ಎಲ್ಲಿ ಇಟ್ಟುಕೊಳ್ಳುತ್ತಾರೆ? ಅವರು ಕೆಲಸ ಮಾಡುತ್ತಾರಾ? ಎಂದು ಯಾರೋ ಜರಿದಿದ್ದರ ಪರಿಣಾಮ ಇಂದು ಸಾರಿಗೆ ನೌಕರರು ಕಷ್ಟಕ್ಕೆ ಸಿಲುಕುವಂತಾಗಿದೆ.

ಹೀಗಾಗಿ ಇನ್ನಾದರೂ ಸಮಸ್ತ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರು ನಾವು ಬೇರೆಬೇರೆ ಎಂದು ಭೇದಭಾವ ಮಾಡದೆ ಒಗ್ಗಟ್ಟಿನಿಂದ ದೃಢನಿರ್ಧಾರ ತೆಗೆದುಕೊಂಡು ಈ ಅಧಿಕಾರಿಗಳು- ನೌಕರರಲ್ಲದ ಸಂಘಟನೆಗಳನ್ನು ದೂರವಿಟ್ಟು ಸರ್ಕಾರಕ್ಕೆ ಈಗಾಗಲೇ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಿಕೊಳ್ಳುವತ್ತ ಚಿಂತನೆ ನಡೆಸಬೇಕು ಎಂಬುವುದು ನಮ್ಮ ಕಳಕಳಿ ಎಂದು ಪ್ರಜ್ಞಾವಂತ ನೌಕರರು ಎಲ್ಲರಲ್ಲೂ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...