ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಕೊವಿಡ್-19ಗೆ ಬುಧವಾರ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇನ್ನು ಹೊಸ 17 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 277 ಮಂದಿಗೆ ಸೋಂಕು ತಗುಲಿದ್ದು, ಎಲ್ಲೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರದ 69 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಮತ್ತೆ 17 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ.
ಇದನ್ನೂ ಓದಿರಿ ಮುಂದುವರಿದ ಕೊರೊನಾ ಅಟ್ಟಹಾಸಕ್ಕೆ 10 ಮಂದಿ ಬಲಿ
ನಂಜನಗೂಡಿನ ಜ್ಯೂಬಿಲಿಯಂಟ್ ಕಾರ್ಖಾನೆಯ 9 ಮತ್ತು ಮೈಸೂರಿನಲ್ಲಿ ಒಂದು ಪಾಸಿಟಿವ್ ಬಂದಿದ್ದು, ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಒಟ್ಟು 57ಕ್ಕೇರಿಕೆಯಾದಂತ್ತಾಗಿದೆ. ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಒಂದು, ಬಾಗಲಕೋಟೆಯಲ್ಲಿ ಒಂದು, ಬೆಂಗಳೂರು ಮತ್ತು ವಿಜಯಪುರದಲ್ಲಿ ತಲಾ ಎರಡು, ಕಲಬುರಗಿಯಲ್ಲಿ ಒಂದು ಸೇರಿ ಇಂದು 17 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಈವರೆಗೆ 277ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, 75ಮಂದಿ ಗುಣಮುಖರಾಗಿದ್ದಾರೆ. 11 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಈ ವರೆಗೆ 11555 ಮಂದಿಗೆ ಸೋಂಕು, 1362 ಮಂದಿ ಗುಣಮುಖರಾಗಿದ್ದು, 396 ಮಂದಿ ಅಸುನೀಗಿದ್ದಾರೆ.
ವಿಶ್ವಾದ್ಯಂತ ಈವರೆಗೆ 2004989 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು 126830 ಜನರು ವೈರಸ್ಗೆ ಬಲಿಯಾಗಿದ್ದಾರೆ.