ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-3ರನ್ನು ಜೂನ್ 9 ರಿಂದ 20 ರವರೆಗೆ ನಡೆಸಲು ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಲು ಮೇ28 ಕೊನೆ ದಿನವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ಅನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳು ಪರೀಕ್ಷೆ ಮೂರನ್ನು ತೆಗೆದುಕೊಳ್ಳಬಹುದು. ಪರೀಕ್ಷೆ-01 ಅನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳು ಪರೀಕ್ಷೆ-02 ತೆಗೆದುಕೊಂಡಿಲ್ಲದಿದ್ದರೂ ಪರೀಕ್ಷೆ-03 ಅನ್ನು ತೆಗೆದುಕೊಳ್ಳಲು ಅವಕಾಶವಿದೆ.
ಫಲಿತಾಂಶ ಪೂರ್ಣಗೊಳ್ಳದ ಎಲ್ಲ ವಿದ್ಯಾರ್ಥಿಗಳು ಮೂರನೇ ಪರೀಕ್ಷೆಗೆ ನೋಂದಾಯಿಸಿಕೊಳ್ಳಿ ಹಾಗೆಯೇ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರತಿ ವಿಷಯದಲ್ಲಿ ಪರಿಹಾರ ಭೋದನಾ ತರಗತಿಗಳನ್ನು ಕಾಲೇಜು ಹಂತದಲ್ಲಿ ನಡೆಸಲಾಗುವುದು.
ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್ ತಿಳಿಸಿದ್ದಾರೆ.
Related

Megha
 










