Please assign a menu to the primary menu location under menu

NEWSನಮ್ಮರಾಜ್ಯ

ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ

KSRTC MD ಅನ್ಬುಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಇದೇ ನ.8ರಂದು ಬೆಳಗ್ಗೆ 11.30 ಗಂಟೆಗೆ ಕೇಂದ್ರ ಕಚೇರಿಯಲ್ಲಿ ಸಭೆಯನ್ನು ನಿಗದಿಪಡಿಸಿದೆ.

ನಿಗಮದಲ್ಲಿ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಮಾತ್ರ ಚರ್ಚಿಸಲು ನಿಗಮದ ಎಲ್ಲ ನೋಂದಾಯಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಭೆ ನಿಗದಿಪಡಿಸಲಾಗಿದೆ.

ಈ ಸಭೆಗೆ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಬೇಕು ಎಂದು ನಿಗಮದ ನಿರ್ದೇಶಕರು (ಸಿ&ಜಾ) ಸೂಚನೆ ನೀಡಿದ್ದಾರೆ.

ಇನ್ನು ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ಅಕ್ಟೋಬರ್‌ 9ರಂದು ನಿಗಮದ ನೋಂದಾಯಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲು ಇದು ಮೊದಲ ಹೆಜ್ಜೆಯಾಗಿದೆ.

ಹೀಗಾಗಿ ಸಭೆಯಲ್ಲಿ ಭಾಗವಹಿಸುವ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ನಿಗಮದ ಅಧಿಕಾರಿಗಳು/ನೌಕರರ ಹಿತದೃಷ್ಟಿಯಿಂದ ಅವರ ಜೇಬಿಗೆ ಕತ್ತರಿ ಬೀಳದ ರೀತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ಸೂಚನೆಗಳನ್ನು ಕೊಡಬೇಕು. ಅದನ್ನು ಬಿಟ್ಟು ಮತ್ತೆತ್ತಿದರೆ ನೌಕರರಿಂದ ಕೊಡುಗೆ (contribution) ಪಡೆದು ಜಾರಿ ಮಾಡಿ ಎಂಬುದನ್ನು ಬಿಡಬೇಕು ಎಂದು ಸಮಸ್ತ ನೌಕರರು ಮನವಿ ಮಾಡಿದ್ದಾರೆ.

ಇನ್ನು ಸಭೆ ಸಂಬಂಧ ನಿನ್ನೆ ಅಂದರೆ ನ.6ರಂದು ಪದಾಧಿಕಾರಿಗಳು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಪದಾಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟ.

ಅಧ್ಯಕ್ಷರು, ಕರ್ನಾಟಕ ರಸ್ತೆ ಸಾರಿಗೆ ಮಜ್ಯೂರ್ ಸಂಘ ಒಕ್ಕೂಟ, ಅಧ್ಯಕ್ಷರು, KSRTC ‍‍& BMTC ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್‌ಗೆ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ಕೊಡುವಂತೆ ಕೋರಿದ್ದಾರೆ.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?