NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂ\ರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ಇಲ್ಲ ಅದೆಲ್ಲ ಸುಳ್ಳು ಆರೋಪ. ಅವರಿಗೂ ಹಿಡಿದು ಯಾರೋ ಕಪಾಳಕ್ಕೆ ಹೊಡೆದರು ಎಂದು ನನಗೂ ಯಾರೋ ಹೇಳಿದರು. ಅದಕ್ಕೆ ಆಧಾರ ಇದೆಯಾ ಎಂದು ಪ್ರಶ್ನಿಸಿದರು.

ಯಾರಿಗೋ ಮೋಸ ಮಾಡಿದ್ದಾರಂತೆ, ಅವರಿಗೂ ಕಪಾಳಕ್ಕೆ ಹೊಡೆದರಂತೆ ಎಂದು ನನಗೂ ಹೇಳಿದರು. ಯಾರೋ ಹೇಳಿದರು ಎಂದು ಅದನ್ನು ನಾನು ನಂಬೋಕಾಗುತ್ತಾ, ಹೇಳೋಕಾಗುತ್ತಾ? ಯಾವ ಸಚಿವರು ಹೊಡೆದು ಇಲ್ಲ ಏನೂ ಇಲ್ಲ. ಬರಿ ಹಿಟ್ ಅಂಡ್ ರನ್ ಮಾಡೋಕೆ ಆಗುತ್ತಾ ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕ ಸರ್ಕಾರ 700 ಕೋಟಿ ರೂಪಾಯಿ ಸಂಗ್ರಹ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ರಾಜಕೀಯವಾದ ಆರೋಪ. ಆರೋಪ ಸಾಬೀತು ಪಡಿಸಿದರೆ ಸಣ್ಣ ಶಿಕ್ಷೆಗೂ ಗುರಿಯಾಗುತ್ತೇವೆ ಎಂದು ಹೇಳಿದರು.

ಇನ್ನು ದೊಡ್ಡ ಹುದ್ದೆಯಲ್ಲಿರುವವರು ಆಧಾರ ಇಲ್ಲದೇ ಆರೋಪ ಮಾಡಬಾರದು. ಮಹಾರಾಷ್ಟ್ರದಲ್ಲಿ ಗ್ಯಾರಂಟಿಗಳ ಬಗ್ಗೆ ಸುಳ್ಳು ಹೇಳಿಕೆ ಕೊಟ್ಟಿದ್ದರು. ಅದಕ್ಕಾಗಿ ನಾನು ಪತ್ರ ಬರೆಯುತ್ತಿದ್ದೇನೆ ಎಂದರು.

ಅದೇನೆಂದರೆ ವಿಮಾನ, ಬಸ್‌ಗಳ ವ್ಯವಸ್ಥೆ ಮಾಡುತ್ತೇವೆ. ಗ್ಯಾರಂಟಿಗಳು ಜನತೆಗೆ ತಲುಪುತ್ತಿದೆಯಾ ಇಲ್ವ ಅಂತ ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಲಿ. ನಮ್ಮ ಪಕ್ಷದಿಂದಲೇ ವಿಶೇಷ ವಿಮಾನ ವ್ಯವಸ್ಥೆಯನ್ನು ಮಾಡುತ್ತೇವೆ. ಅಲ್ಲದೆ ಅದರ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದು ಹೇಲಿದರು.

ಇನ್ನು ಸುಳ್ಳೇ ಬಿಜೆಪಿವರ ಅಸ್ತ್ರ. ಕರ್ನಾಟಕದಲ್ಲಿ ಇದರ ರುಚಿ ಗೊತ್ತಾಗಿದೆ. ಜನ ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

error: Content is protected !!
LATEST
ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ