NEWSನಮ್ಮಜಿಲ್ಲೆಸಂಸ್ಕೃತಿ

ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಕರೆ ನೀಡಿದರು.

ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ವೀರ ವಿನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ರಕ್ಷಣೆಗೆ ಪಣತೊಡಬೇಕು ಅದು ಹೇಗೆ ಎಂದರೆ, ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದಾಗ ಮನೆಯಲ್ಲಿದ್ದ ಒನಕೆಯನ್ನೇ ಆಯುಧವನ್ನಾಗಿಸಿ ಎದುರಾಳಿ ಸೈನಿಕರ ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ ಓಬವ್ವನಂತೆ ಎಂದು ತಿಳಿಸಿದರು.

ಇನ್ನು ಅಂತಹ ವೀರ ವನಿತೆ ಒನಕೆ ಓಬವ್ವ ಅವರ ಕಾಯಕ ನಿಷ್ಠೆ, ಧೈರ್ಯ ನಾಡಿನ ಮಹಿಳೆಯರಿಗೆ ಆದರ್ಶವಾಗಿದೆ. ನಿಜ ಜೀವನದಲ್ಲಿ ಧೈರ್ಯ, ಸಾಹಸವನ್ನು ಮಹಿಳೆಯರು ಅಳವಡಿಸಿಕೊಂಡಲ್ಲಿ ಕರ್ತವ್ಯ ನಿಷ್ಠೆ, ಕಾಯಕ ನಿಷ್ಠೆಯಿಂದ ಧೈರ್ಯವಾಗಿ ಸಮಾಜದಲ್ಲಿ ಬದುಕಬಹುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಮಾತನಾಡಿ, ಓಬವ್ವ ಅವರ ಧೈರ್ಯ ಹಾಗೂ ಸಾಹಸದಿಂದ ಹತ್ತಾರು ಸೈನಿಕರನ್ನು ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ್ದಕ್ಕಾಗಿ ವೀರವನಿತೆ ಓಬವ್ವ ಎಂದು ಕರೆಯುತ್ತಾರೆ. ಮಹಿಳೆಯರ ಧೈರ್ಯಕ್ಕೆ ಒಂದು ಸ್ಫೂರ್ತಿ ವೀರವನಿತೆ ಓಬವ್ವ, ಎಲ್ಲರು ಅವರು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ, ಗೌರವಿಸಲಾಯಿತು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ