ಬೆಂಗಳೂರು: ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಯಲಹಂಕ ಮೇಲ್ಸೇತುವೆ ಸಮೀಪ ಬಿಎಂಟಿಸಿ ಬಸ್, ಟ್ರಕ್ ಹಾಗೂ ಇನೋವಾ ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಬಿಎಂಟಿಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ.
ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಇನ್ನು ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಸಂಬಂಧಿಕರ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದಾರೆ.
ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ (Car) ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಲಾರಿ ಚಾಲಕ ಹಾಗೂ ಕಾರಿನ ಚಾಲಕ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಭೀಕರ ಅಪಘಾತದಲ್ಲಿ ಬಸ್‍ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್‍ನಲ್ಲಿ ಏರ್‌ಪೋರ್ಟ್‌ಗೆ ಹೋಗುವ ಒಬ್ಬರೆ ಪ್ರಯಾಣಿಕರಿದ್ದಿದ್ದರಿಂದ ಹೆಚ್ಚಿನ ಅವಘಡ ಸಂಭವಿಸಿಲ್ಲ.
ಇನ್ನು ಬಿಎಂಟಿಸಿ ವೋಲ್ವೊ ಬಸ್ ಲಾರಿಗೆ ಗುದ್ದಿದ ರಭಸಕ್ಕೆ ಬಸ್‌ನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಫ್ಲೈಓವರ್ ಮೇಲೆ ಅಪಘಾತವಾಗಿ ನಿಂತಿರುವ ಇನೋವಾ ಕಾರು, ಸಿಮೆಂಟ್ ಲಾರಿ, ವೋಲ್ವೋ ಬಿಎಂಟಿಸಿ ಬಸ್‌ನ್ನು ಇದೀಗ ಕ್ರೇನ್ ಮೂಲಕ ತೆರವುಗೊಳಿಸಲಾಗುತ್ತಿದೆ.