ಬೀದರ್: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮರಳಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ
ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣ ಬೆಳೆಸಿದ್ದ ಮಹ್ಮದ್ ಎಂಬುವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮೆರೆತು ಹೋಗಿದ್ದರು.
ಬಳಿಕ ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ಓಡೋಡಿ ಬಂದಿದ್ದಾರೆ. ಆ ವೇಳೆ ನಿರ್ವಾಹಕ ಪ್ರಕಾಶ ಹತ್ತಿರ ಚಿನ್ನಾಭರಣ ಸುರಕ್ಷಿತವಾಗಿರುವ ವಿಷಯ ತಿಳಿದು ನಿಟ್ಟುಸಿರುಬಿಟ್ಟಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ಘಟಕದ ಬಸ್ನಲ್ಲಿ ಚಿನ್ನಾಭರಣ ಮರೆತು ಹೋಗಿದ್ದ ಪ್ರಯಾಣಿಕನಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿ ಕೊಟ್ಟ ನಿರ್ವಾಹಕರ ಮಾನವೀಯತೆಯನ್ನು ಸಹ ಪ್ರಯಾಣಿಕರು ಶ್ಲಾಘಿಸಿದ್ದಾರೆ.
ಅಲ್ಲದೆ ನಿರ್ವಾಹ ಪ್ರಕಾಶ ಅವರ ಪ್ರಮಾಣಿಕತೆ ಮೆಚ್ಚಿ ಪ್ರಯಾಣಿಕ ಮಹ್ಮದ್ ಅಜರ್ ಹಾಗೂ ಸಾರಿಗೆ ಅಧಿಕಾರಿಗಳು ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನು ಸನ್ಮಾಸಿ ಗೌರವಿಸಿದ್ದಾರೆ.