NEWSನಮ್ಮರಾಜ್ಯನಿಮ್ಮ ಪತ್ರ

ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ
  • ಸಂತಕವಿ ಕನಕದಾಸರ 537 ನೇ ಜಯಂತ್ಯೋತ್ಸವ

ಬೆಂಗಳೂರು ಗ್ರಾಮಾಂತರ: 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ ಕನಕದಾಸರು ಪ್ರಮುಖರು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್‌ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಸಂತಕವಿ ಕನಕದಾಸರ 537 ನೇ ಜಯಂತ್ಯುತ್ಸವ’ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸರ ದಾರಿಯಲ್ಲಿ ನಾವೇಲ್ಲರೂ ನಡೆಯಬೇಕಿದೆ. ಸಮಾಜದ ಸುಧಾರಣೆಗಾಗಿ ಅವರು ರಚಿಸಿದ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ. ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ದಾರ್ಶನಿಕ ಕನಕದಾಸರು ಎಂದರು.

ಇನ್ನು ಮಾನವ ಕುಲವೊಂದೇ ಎಂದು ಸಮಾಜದ ಸಮಾನತೆಗಾಗಿ ಶ್ರಮಿಸಿದರು. ಬಸವಣ್ಣ, ಸಂತ ತುಕರಾಂ, ಪುರಂದರದಾಸರು ಇವರೆಲ್ಲರೂ ಇತಿಹಾಸ ಕಂಡ ಮಹಾನ್ ವ್ಯಕ್ತಿಗಳು ಅವರ ಸಾಲಿನಲ್ಲಿ ಕನಕದಾಸರು ಸೇರುತ್ತಾರೆ ಎಂದ ಅವರು, ಪ್ರತಿಯೊಂದು ಸಮುದಾಯದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ, ಉನ್ನತ ಹುದ್ದೆಗಳನ್ನು ಪಡೆದುಕೊಂಡು ಸಮುದಾಯದ ಸರ್ವೋತೋಮುಖ ಏಳ್ಗೆಗೆ ಹೊಂದಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಮಾತನಾಡಿ, ಕನಕದಾಸರು 15 ನೇ ಶತಮಾನದ ದಾಸಶ್ರೇಷ್ಠರು. ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಲು, ಬಹಳಷ್ಟು ಅಧ್ಯಯನವನ್ನು ಮಾಡಿ ಸರಳವಾಗಿ ಅರ್ಥವಾಗುವಂತಹ ಸಾಕಷ್ಟು ಕೀರ್ತನೆಗಳನ್ನು ರಚಿಸಿದ್ದಾರೆ ಎಂದು ತಿಳಿಸಿದರು.

ಇನ್ನು ಸಮಾಜದ ಮುನ್ನಡೆಗಾಗಿ, ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಮತ್ತು ಮೂಢನಂಬಿಕೆಯ ವಿರುದ್ಧ ಬಹಳಷ್ಟು ಹೋರಾಟ ನಡೆಸಿ ಮನುಕುಲ ಒಂದೇ ಎಂಬುದನ್ನು ಪ್ರತಿಪಾದಿಸಿದವರು ಕನಕರು. ನಾವೇಲ್ಲರೂ ಜೀವನದಲ್ಲಿ ಕನಕದಾಸರ ಜೀವನಾದರ್ಶದ ಮೌಲ್ಯಗಳನ್ನು ಅಳವಡಿಕೊಂಡು ಪ್ರತಿ ದಿನವೂ ಪಾಲನೆ ಮಾಡಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಡಾ.ಹುಲಿಕುಂಟೆ ಮೂರ್ತಿ ಮಾತನಾಡಿ, ಕನಕದಾಸರನ್ನ ದಾಸಶ್ರೇಷ್ಟ ಅಷ್ಟಕ್ಕೇ ಸೀಮಿತಗೊಳಿಸಲಾಗಿದೆ. ಆದರೆ ಅವರೊಬ್ಬ ಕವಿ, ಹೋರಾಟಗಾರ ಮೋಹನ ತರಂಗಿಣಿ, ರಾಮಧಾನ್ಯ ಚರಿತ್ರೆ, ಹರಿಭಕ್ತಸಾರದಂತಹ ಮೇರು ಕೃತಿಗಳನ್ನು ರಚಿಸಿದ್ದಾರೆ ಎಂದು ನೆನಪಿಸಿದರು.

ಕನಕದಾಸರು ಒಬ್ಬ ಕನ್ನಡ ನಾಡಿನ ಪ್ರಜ್ಞೆ, 316 ಕೀರ್ತನೆಗಳನ್ನ ಬರೆದಿರುವ ಅವರು, ಸಮಾಜದಲ್ಲಿ ಬಹಳ ನೋವುಂಡವರು ಸೇವೆಯನು ಕೊಡೊ ಹರಿಯೆ ಎನ್ನುವ ಮೂಲಕ ಹರಿಯನ್ನು ಪ್ರಶ್ನಿಸಿದವರು. ಕನಕರನ್ನ ಒಂದು ಜಾತಿಗೆ ಸೀಮಿತಗೊಳಿಸದೆ ವಿಶ್ವಮಾನವನನ್ನಾಗಿ ನೋಡಬೇಕಾಗಿದೆ ಎನ್ನುವ ಮೂಲಕ ಸಂತಕವಿ ಕನಕದಾಸರ ಜೀವನ, ತತ್ವಾದರ್ಶಗಳ ಕುರಿತು ವಿವರಿಸಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ದೇವನಹಳ್ಳಿ ಟೌನ್ ನ ಬೈಪಾಸ್ ನಲ್ಲಿರುವ ಕನಕದಾಸರ ವೃತ್ತದಿಂದ ಡಾ. ಬಿ‌.ಆರ್. ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಂದಿಗೆ ದಾಸ ಶ್ರೇಷ್ಠ ಕನಕದಾಸರ ಉತ್ಸವ, ಪಲ್ಲಕ್ಕಿಗಳ ಮೆರವಣಿಗೆ ನಡೆಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ. ರಾಜಣ್ಣ, ಬಯಪ್ಪ ಅಧ್ಯಕ್ಷ ಶಾಂತಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ.ಎನ್. ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ರವಿಕುಮಾರ್, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ ರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ವೇತನ ಹೆಚ್ಚಳ ಸಂಬಂಧ ಗೌಪ್ಯ ಸಭೆಗೆ ಸಜ್ಜಾದ ಅಧಿಕಾರಿಗಳು-ಸಿಬ್ಬಂದಿ ವರ್ಗ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಮುನಿಯಪ್ಪ ಬಸ್‌ ಪಾಸ್‌ ತೋರಿಸದೆ ನಿರ್ವಾಹಕರಿಗೆ ಅವಾಜ್‌ ಹಾಕಿ ಬಸ್‌ ನಿಲ್ಲಿಸಿ ಗಲಾಟೆ ಮಾಡಿದ ಕಿರಾತಕ ! 2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ...