NEWSನಮ್ಮಜಿಲ್ಲೆನಮ್ಮರಾಜ್ಯ

ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಎಂಟೂ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಾದ್ಯಂತ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಎಂಟೂ ವಲಯಗಳಲ್ಲಿ ಇದುವರೆಗೆ 17,423 ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವ್ಯಾಪಾರ ವಲಯಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ನಗರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಾಪಾರ ವಲಯ(Vending Zones)ಗಳನ್ನು ಗುರುತಿಸುವ ಕೆಲಸ ಆಯಾ ವಲಯ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿದ್ದು, ಶೀಘ್ರವಾಗಿ ವ್ಯಾಪರ ವಲಯಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿ: ನಗರದ ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳನ್ನು ಅಳವಡಿಸಿಕೊಂಡು ಮಾರಾಟ ಮಾಡುವುಂತಿಲ್ಲ. ಈ ನಿಟ್ಟಿನಲ್ಲಿ ಎಲ್ಲೆಲ್ಲಿ ಶಾಶ್ವತ ಪೆಟ್ಟಿಗೆಗಳನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆ ಅಲ್ಲಿ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು. ಪಾದಚಾರಿಗಳ ಓಡಾಟಕ್ಕೆ ಯಾವುದೇ ಸಮಸ್ಯೆಯಾಗಂತೆ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ ಮಾಡಿ: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಂದ ಕೂಡಲೇ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತ  ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತ  ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಸ್ನೇಹಲ್, ಗಿರೀಶ್, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಎಲ್ಲ ವಲಯ ಮುಖ್ಯ ಅಭಿಯಂತರರು ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್ ನಲ್‌ಜಲ್ ಮಿತ್ರ ತರಬೇತಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಚಾಲನೆ ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ BMTC ಘಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕನ ಕುಟುಂಬ ಪರನಿಂತ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್‌ ... KKRTC: ತಡರಾತ್ರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೋರಿದ 15ಕ್ಕೂ ಹೆಚ್ಚು ದರೋಡೆಕೋರರು- ತಪ್ಪಿದ ಭಾರಿ ಅನಾಹುತ! KSRTC: ವೇತನ ಹೆಚ್ಚಳ ಸಂಬಂಧ ಗೌಪ್ಯ ಸಭೆಗೆ ಸಜ್ಜಾದ ಅಧಿಕಾರಿಗಳು-ಸಿಬ್ಬಂದಿ ವರ್ಗ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಮುನಿಯಪ್ಪ ಬಸ್‌ ಪಾಸ್‌ ತೋರಿಸದೆ ನಿರ್ವಾಹಕರಿಗೆ ಅವಾಜ್‌ ಹಾಕಿ ಬಸ್‌ ನಿಲ್ಲಿಸಿ ಗಲಾಟೆ ಮಾಡಿದ ಕಿರಾತಕ ! 2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌