CrimeNEWSನಮ್ಮಜಿಲ್ಲೆವಿಡಿಯೋ

KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ – ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಚಾಲಕ ಬಸ್‌ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಈ ರೀತಿ ಬೇಜವಾಬ್ದಾರಿಯ ಚಾಲಕನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ದಾವಣಗೆರೆ ಘಟಕ 1ರ KA 51 F 0067 ಸೂಪರ್ ಪ್ಲಸ್ ಎಲೆಕ್ಟ್ರಿಕ್ ಎ/ಸಿ ಬಸ್‌ ಇದಾಗಿದ್ದು, ಗುರುವಾರ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಮೊಬೈಲ್‌ನಲ್ಲಿ ಮಾತನಾಡುತ್ತಲೇ ಚಾಲಕ ಸುನೀಲ್ ಕುಮಾರ್ ಬಸ್ ಚಾಲನೆ ಮಾಡಿದ್ದಾರೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸಿಕ್ಕಿದ್ದು, ಚಾಲಕನ ಈ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ನಿರ್ಲಕ್ಷ್ಯಕ್ಕೆ ಚಾಲಕನ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ರೀತಿ ಮೊಬೈಲ್‌ ಫೋನ್‌ನಲ್ಲಿ ಮಾತನಾಡಿಕೊಂಡು ಬಸ್‌ ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್‌ನಲ್ಲಿರುವ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್‌ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.

ಚಾಲಕರನ್ನೇ ನಂಬಿ 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ಅರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ