LatestNEWSನಮ್ಮರಾಜ್ಯ

KSRTC: ಮೇ ಅಂತ್ಯದೊಳಗೆ ಸಿಎಂ ಅವರ ಸಮಯ ನಿಗದಿಪಡಿಸಿ ಸಮಸ್ಯೆ ಇತ್ಯರ್ಥ-  ವೇತನ ಹೆಚ್ಚಳದ ಸುಳಿವುಕೊಟ್ಟ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024 ಜನವರಿ 1ರಿಂದ ವೇತನ ಹೆಚ್ಚಳವಾಗಬೇಕಿರುವ ಸಂಬಂಧ ಈ ತಿಂಗಳ ಅಂತ್ಯದೊಳಗೆ ಮುಖ್ಯಮಂತ್ರಿ ಅವರ ಸಮಯ ನಿಗದಿಪಡಿಸಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಬಿ.ಎಸ್.ಸುರೇಶ ಮತ್ತು ಸಿ.ಡಿ.ವಿಶ್ವನಾಥ್ ಹಾಗೂ ಕೆಎಸ್ಆರ್ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಭೇಟಿ ಮಾಡಿ ಮೈಸೂರಿನ ಸೊಸೈಟಿಗೆ ಇಲಾಖೆಯ ಕಟ್ಟಡವನ್ನು ಒದಗಿಸಿದ್ದು, ಕಟ್ಟಡದ ಉದ್ಘಾಟನೆಗೆ ಬರಬೇಕು ಎಂದು ಕೇಳಲು ಹೋಗಿದ್ದ ಸಮಯದಲ್ಲಿ ಈ ಭರವಸೆ ನೀಡಿದ್ದಾರೆ ಎಂದು ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಭೇಟಿ ವೇಳೆ ನೌಕರರ ವೇತನ ಹೆಚ್ಚಳದ ಬಗ್ಗೆ ಸೂಕ್ಷ್ಮವಾಗಿ ಚರ್ಚಿಸಲಾಯಿತು ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ನಾನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಸಮಯ ನಿಗದಿಪಡಿಸಿ ಈ ತಿಂಗಳ ಕೊನೆಯಲ್ಲಿ ನಿಮ್ಮ ವೇತನ ಸಮಸ್ಯೆ ನಿವಾರಿಸುತ್ತೇವೆ ಎಂದು ಹೇಳಿರುವುದಾಗಿ ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ವೇತನ ಹೆಚ್ಚಳದ ಬಗ್ಗೆ  ಸುಳಿವು: ಸಾರಿಗೆ ನೌಕರರಿಗೂ  ಸರಿ ಸಮಾನ ವೇತನ ಕೊಡುತ್ತೇವೆ ಎಂದು ವೇತನ ಅಗ್ರಿಮೆಂಟ್‌ ಮಾಡದೆ, ಜತೆಗೆ ಕಳೆದ 2020ರ ಜನವರಿ 1ರಿಂದ ಆಗಿರುವ  ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಬಿಡುಗಡೆ  ಮಾಡದೆ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನೂ ಈವರೆಗೂ ಅಂದರೆ 17 ತಿಂಗಳು ಕಳೆಯುತ್ತಾ ಬಂದರೂ ಮಾಡದೆ ಬರಿ ಕಾಲ ದೂಡಿಕೊಂಡೆ ಬರುತ್ತಿದೆ ಸರ್ಕಾರ ಎಂಬ ಆರೋಪ ಕೇಳಿ ಬರುತ್ತಿದೆ.

ಈ ನಡುವೆ, ಈವರೆಗೂ ಸಿಎಂ ನೌಕರರ ಸಂಘಟನೆಗಳೊಂದಿಗೆ ಒಂದು ಸಭೆ ಕರೆದಿದ್ದು ಬಿಟ್ಟರೆ ಮತ್ತೆ ವೇತನ ಹೆಚ್ಚಳದ ಬಗ್ಗೆ ಯಾವುದೇ ಚಕಾರವೆತ್ತುತ್ತಿಲ್ಲ. ಜತೆಗೆ ಒಂದು ಬಾರಿ ಸಭೆಯನ್ನು ಮುಂದೂಡಿ ಏ.15-2025ರಂದು ತಮ್ಮ ನಿವಾಸ ಕಾವೇರಿಯಲ್ಲಿ ನಾಮ್‌ ಕೇ ವಾಸ್ತೆ ಎಂಬಂತೆ ಒಂದು ಸಭೆ ಕರೆದು ಅಷ್ಟಕ್ಕೆ ಸುಮ್ಮನಾಗಿದ್ದಾರೆ ಎಂದು ನೌಕರರು ಅಸಮಾಧಾನಗೊಂಡಿದ್ದಾರೆ.

ಈ ನಡುವೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ಕೊಡುವ ಬಗ್ಗೆ ಯಾವುದೇ ಒಂದು ಸ್ಪಷ್ಟ ನಿಲುವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆಗೆದುಕೊಂಡಿಲ್ಲ. ಇನ್ನು ಮುಷ್ಕರ ಮಾಡುತ್ತೇವೆ ಎಂದು ಸಂಘಟನೆಗಳು ಮುಂದಾದರೆ ಆಗ 38 ತಿಂಗಳ ಹಿಂಬಾಕಿ ಹಾಗೂ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ವೇತನ ಮಾಡುತ್ತೇವೆ ಎಂಬ ಹೇಳಿಕೆ ನೀಡುವ ಮೂಲಕ  ಸಂಘಟನೆಗಳ ಮುಖಂಡರ ದಾರಿಯನ್ನು ಈ ಸರ್ಕಾರ ತಪ್ಪಿಸುತ್ತಲೇ ಬಂದಿದೆ.

ಇನ್ನು ಈ ಬಗ್ಗೆ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಬೇರೆ ಬೇರೆಯಾಗಿಯೇ ಈಗಾಗಲೇ ಹತ್ತಾರು ಮನವಿ ಪತ್ರಗಳನ್ನು ಕೊಟ್ಟು ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸುತ್ತಲೇ ಬಂದಿವೆ. ಆದರೆ ಸರ್ಕಾರ ಮಾತ್ರ ದಪ್ಪ ಚರ್ಮದಂತೆ ನಡೆದುಕೊಳ್ಳುತ್ತಲೆ ಇದೆ ಎಂದು ಅಧಿಕಾರಿಗಳು ಕೂಡ ನೊಂದುಕೊಂಡಿದ್ದಾರೆ.

ಇನ್ನಾದರೂ ಸರ್ಕಾರ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗದಂತೆ ತಾವು ಕೊಟ್ಟ ಭರವಸೆಯಂತೆ ಮಾಡಿದ್ದೇವೆ ಎಂದು ಘೋಷಣೆ ಮಾಡಿ ಸಾರಿಗೆ ನೌಕರರ ಪ್ರಮುಖ ಬೇಡಿಕೆಯನ್ನು ಈಡೇರಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಬೇಕು. ಎಲ್ಲವನ್ನು ಈ ತಿಂಗಳ ಒಳಗೇ ಮಾಡಬೇಕು ಇಲ್ಲದಿದ್ದರೆ ಮೇ ತಿಂಗಳು ಕಳೆದ ಜೂನ್‌ ಆರಂಭದಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕೇಂದ್ರ ಕಚೇರಿಯಲ್ಲಿರುವ ಅಧಿಕಾರಿಗಳ ಒಂದು ಸಮೂಹ ಗೌಪ್ಯವಾಗಿ ಮುಷ್ಕರಕ್ಕೆ ಬೆಂಬಲ ನೀಡಲು ಸಮಲೋಚನೆಯಲ್ಲಿ ತೊಡಗಿದೆ ಎಂದು ಬಲ್ಲ ಮೂಲಗಳು ಕಳೆದ ವಾರದ ಹಿಂದೆಯೇ ಖಚಿತಪಡಿಸಿವೆ.

ಹೀಗಾಗಿ ಸರ್ಕಾರ ಮತ್ತು ಸಾರಿಗೆ ಆಡಳಿತ ಮಂಡಳಿಯ ನಡೆಯಿಂದ ಬೇಸತ್ತಿರುವ ಬಹುತೇಕ ಎಲ್ಲ ಅಧಿಕಾರಿಗಳು ಸಮಾಲೋಚನೆ ನಡೆಸುತ್ತಿದ್ದು, ನಾವು ಬಸ್‌ ನಿಲ್ಲಿಸದಿದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ ಎಂಬ ಚರ್ಚೆ ಶುರುವಾಗಿದೆ. ಇದರ ಬಿಸಿ ಜೂನ್‌ ಆರಂಭದಲ್ಲೇ ಸರ್ಕಾರಕ್ಕೆ ತಟ್ಟಲಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಎಚ್ಚೆತ್ತ ಸರ್ಕಾರ ಮೇ ತಿಂಗಳ ಅಂತ್ಯದಲ್ಲೇ ನೌಕರರ ವೇತನ ಸಮಸ್ಯೆ ನಿವಾರಿಸಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?