ಬೆಂಗಳೂರು: ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇಂದೂ ಕೂಡ ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಇನ್ನು ಹೊಸ 34 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಹಿರೇಬಾಗೇವಾಡಿಯ ಒಂದೇ ಕುಟುಂಬದ 8 ಮಂದಿಗೆ ತಗುಲಿದೆ. ಅದರಲ್ಲಿ 6ಮಂದಿ ಮಹಿಳೆಯರೆ ಆಗಿದ್ದಾರೆ. ಇಂದು ಬೆಳಗಾವಿಯಲ್ಲಿ 36ಕ್ಕೇರಿದೆ.
ಬೆಂಗಳೂರಿನಲ್ಲಿ ಐದು, ಮೈಸೂರಿನಲ್ಲಿ ಮೂರು, ವಿಜಯಪುರದಲ್ಲಿ ಏಳು, ಕಲಬುರಗಿ ಮತ್ತು ಗದಗದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ. ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಮರಣ ಮೃದಂಗಕ್ಕೆ ಮುಂದಾಗುತ್ತಿದೆ.
ಬೆಂಗಳೂರಿನಲ್ಲಿ ನಿನ್ನೆವರೆಗೆ 71 ಇತ್ತು ಇಂದು 5 ಮಂದಿಗೆ ಸೋಂಕು ದೃಢಪಟ್ಟಿದ್ದು, 76ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 58 ಇದ್ದು, ಇಂದು 3 ಹೊಸ ಪ್ರಕರಣ ಪಾಸಿಟಿವ್ ಆಗಿದ್ದು, 61ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.