NEWSನಮ್ಮರಾಜ್ಯಬೆಂಗಳೂರು

ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ “ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.

“ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದರು.

“ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ” ಎಂದು ಹೇಳಿದರು.

“ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ” ಎಂದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ: “ಇನ್ನು ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು ₹4000 ಕೋಟಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ” ಎಂದರು.

“ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ನಾಗರೀಕರು ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ನೀಡಲಾಗುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ, ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ”. “ಇನ್ನು ಇಂಟಿಗ್ರೇಟ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಮಾಡಲು 15 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್: “ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ನಾನು ಆಲೋಚಿಸುತ್ತಿದ್ದೇನೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು. ಇದಕ್ಕಾಗಿ ಕಾವೇರಿ ನಿಗಮದಲ್ಲಿ ₹92 ಕೋಟಿ ಹಣ ಮೀಸಲಿಡಲಾಗಿದೆ” ಎಂದು ತಿಳಿಸಿದರು.

“ಇದರ ಜತೆಗೆ ಇಂಧನ ಇಲಾಖೆ, ಲೋಕೋಪಯೋಗಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಲಿದೆ. ಈ ಕಾರ್ಯಕ್ರಮದ ಸಾರ್ವಜನಿಕ ವೀಕ್ಷಣೆಗಾಗಿ 10 ಸಾವಿರ ಆಸನಗಳ ಗ್ಯಾಲರಿಯ ವಿನ್ಯಾಸ ಕೂಡ ಸಿದ್ಧವಾಗಿದೆ. ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಗೀತೆ ರಚನೆಗೆ ಆಹ್ವಾನ ನೀಡಿದ್ದೇವೆ” ಎಂದರು.

“ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲಾ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು” ಎಂದು ಹೇಳಿದರು.

“ಹರಿಯುವ ನೀರಿನಲ್ಲಿ ಈ ಕಾರ್ಯಕ್ರಮದ ವೇದಿಕೆ ನಿರ್ಮಿಸಲಾಗುವುದು. ಈ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌