Vijayapatha - ವಿಜಯಪಥ > NEWS > Crime > ಸಾರಿಗೆ ಬಸ್-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ
ಸಾರಿಗೆ ಬಸ್-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ
HardikrajdDecember 3, 2024
ತಿರುವನಂತಪುರಂ: ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮಡಿಕಲ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.
ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು.
ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಕಾರು ಸಂಪೂರ್ಣ ನಜ್ಜಗುಜ್ಜಾಗಿದ್ದು ಘಟನೆಯ ತೀವ್ರತೆಯನ್ನು ತೋರುತ್ತಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related
Hardikrajd
Leave a reply