NEWSಕೃಷಿದೇಶ-ವಿದೇಶನಮ್ಮರಾಜ್ಯ

ದೆಹಲಿ ರೈತ ಹೋರಾಟ ಬೆಂಬಲಿಸಿ ಫ್ರೀಡಂ ಪಾರ್ಕ್‌ನಲ್ಲಿ ಸರದಿ ಉಪವಾಸ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಕರ್ನಾಟಕದ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ.ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ ಇಂದು ಆರಂಭವಾಗಿದ್ದು, ಸಂಜೆ 5ಗಂಟೆ ತನಕ ನಡೆಸಲಾಯಿತು.

ದೆಹಲಿ ಹೋರಾಟದ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ ಬೆಂಬಲಿಸಿ. ಇಂದಿನಿಂದ ಉಪವಾಸ ಸತ್ಯಾಗ್ರಹ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆರಂಭಿಸಲಾಗಿದೆ. ರೈತರ ಕಷ್ಟ ನೀಗಿಸಿ ಅನ್ನದ ಋಣ ತೀರಿಸಿ ಎಂದು ಘೋಷಣೆ ಕೂಗುತ್ತಾ ಉಪವಾಸ ಆರಂಭಿಸಿದರು. ಒಂದೊಂದು ಜಿಲ್ಲೆಯ ರೈತರು ಪ್ರತಿನಿತ್ಯ ಸರದಿ ಉಪವಾಸ ನಡೆಸುತ್ತಾರೆ. ನಾಳೆ ಕಲಬುರಗಿ ರೈತರಿಂದ ನಡೆಯಲಿದೆ.

ಡಿ.8ರಂದು ಮೈಸೂರು ಜಿಲ್ಲೆ, 9ರಂದು ಧಾರವಾಡ, 10ರಂದು ಹಾಸನ ಜಿಲ್ಲೆ, 11ರಂದು ಗದಗ ಜಿಲ್ಲೆ. 12ರಂದು ಚಾಮರಾಜನಗರ ಜಿಲ್ಲೆ, 13ರಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ, 14ರಂದು ಬೆಳಗಾವಿ, 15ರಂದು ದಾವಣಗೆರೆ ಜಿಲ್ಲೆಗಳ ರೈತರಿಂದ ಸರದಿ ಉಪವಾಸ ಬೆಳಗ್ಗೆಯಿಂದ ಸಂಜೆ 5 ತನಕ ಮುಂದುವರೆಯುತ್ತದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಜಗಜಿತ್ ಸಿಂಗ್ ದಲೈವಾಲ ಅವರು ನವೆಂಬರ್ 26ರಿಂದ ದೇಶದ ರೈತರ ಹಿತಕ್ಕಾಗಿ ಉಪವಾಸ ನಡೆಸುತ್ತಿರುವುದು 11 ದಿನಕ್ಕೆ ಕಾಲಿಟ್ಟಿದೆ. ಈಗ ಪರಿಸ್ಥಿತಿ ಗಂಭೀರವಾಗಿದೆ. ದಲೈವಾಲರ ಉಪವಾಸ ಬೆಂಬಲಿಸಿ ಕರ್ನಾಟಕದ ರೈತ ಸಂಘಟನೆಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಿರಂತರ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಚಳವಳಿ ನಿರತ ಮುಖಂಡರ ಜತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ರೈತರನ್ನು ಉಳಿಸಬೇಕು ಎಂದು ಒತ್ತಾಯಿಸಿದರು

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು. ಡಾ.ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಫಸಲ್ ಬಿಮಾ ಬೆಳೆ ವಿಮೆ ಯೋಜನೆ ತಿದ್ದುಪಡಿಯಾಗಬೇಕು ಎಂದು ದೆಹಲಿ ಗಡಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ.

ಅಲ್ಲಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ದೇಶದ್ರೋಹಿಗಳು, ಕಳ್ಳಕಾಕರ ರೀತಿಯಲ್ಲಿ ಮಧ್ಯರಾತ್ರಿ ಬಂಧಿಸಿ ದೇಶದ ರೈತರಿಗೆ ಅಪಮಾನ ಮಾಡಿದ್ದಾರೆ. ನೂರಾರು ರೈತರು ಕನೋರಿ ಬಾರ್ಡರ್ನಲ್ಲಿ ಉಪವಾಸ ಕುಳಿತಿದ್ದಾರೆ. ಈ ಸತ್ಯಾಗ್ರಹ 11ನೇ ದಿನ ಮುಂದುವರೆದಿದೆ.

ಈ ನಡುವೆ ಸರ್ಕಾರ ರೈತರ ಹಕ್ಕನ್ನು ದಮನ ಮಾಡಲು ಯತ್ನಿಸುತ್ತಿದೆ. ಸರ್ಕಾರದ ವರ್ತನೆಯನ್ನು ಖಂಡಿಸುತ್ತೆನೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ.ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಉಪವಾಸ ಸತ್ಯಾಗ್ರಹದಲ್ಲಿ ಬಸವರಾಜ್ ಪಾಟೀಲ್, ತುಮಕೂರು ಶಿವಕುಮಾರ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ರಮೇಶ್ ಹೂಗಾರ್, ರಾಜುಗುಂದಗಿ. ರೇವಣ್ಣ, ಮಾರ್ಬಳ್ಳಿ ನೀಲಕಂಠಪ್ಪ, ವರಕೊಡು ನಾಗೇಶ್, ಸೂರಿ, ಹೆಗ್ಗೂರು ರಂಗರಾಜು, ಶೇಖರಪ್ಪ, ಗಿರೀಶ, ಕಮಲಮ್ಮ, ಅಂಬಳೆ ಮಂಜುನಾಥ್, ಸತೀಶ್, ಪ್ರಕಾಶ್, ವಕೀಲ ಅಮರೇಶ್ ಇನ್ನು ಮುಂತಾದವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ