ಬೆಳಗಾವಿ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪವೂ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಸುವರ್ಣ ವಿಧಾನಸೌಧದ ಇಂದಿನಿಂದ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನ ಪರಿಷತನಲ್ಲಿ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ತಿಳಿಸಿದರು.
ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.
ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.
ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾAಶದಿAದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾAಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
Related
You Might Also Like
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ
ಹುಬ್ಬಳ್ಳಿ: ಉದ್ದೇಶ ಪೂರ್ವಕವಾಗಿ ವಾಹನ ತಪಾಸಣೆ ನಡೆಸಿ ನನ್ನನ್ನು ಅಮಾನತು ಮಾಡುವ ಸಂಚು ರೂಪಿಸಲಾಗಿದೆ ಎಂದು ಮನನೊಂದ ನಿರ್ವಾಹಕರೊಬ್ಬರು ಡ್ಯೂಟಿ ಮೇಲೆ ಇದ್ದಾಗಲೇ ವಿಸ ಸೇವಿಸಿ ಆತ್ಮಹತ್ಯೆಗೆ...
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ
ಬೆಂಗಳೂರು: ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದ್ದು, ಡೆಂಗ್ಯೂ, ಉಸಿರಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಕ್ರಿಯಾ ಆಸ್ಪತ್ರೆ ಮತ್ತು ಅದ್ವಿಕಾ...
ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ
ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ...
ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ,...
ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ?
ಆರೋಗ್ಯ ಮಾಹಿತಿ: ಜ್ವರದ ಸಮಯದಲ್ಲಿ ಹೆಚ್ಚು ಬೆವರುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಈ ವೇಳೆ ಎಳನೀರು ಕುಡಿಯುವುದರಿಂದ ನೈಸರ್ಗಿಕವಾಗಿ ದೇಹಕ್ಕೆ ನೀರನ್ನು ಒದಗಿಸಿ, ನಿರ್ಜಲೀಕರಣವನ್ನು ತಡೆಯುತ್ತದೆ....
ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್ ದರ ಹೆಚ್ಚಳ: ಪಟ್ಟಿ ರಿಲೀಸ್ ಮಾಡಿದ ಸಾರಿಗೆ ಸಚಿವ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದನ್ನು ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಖಂಡಿಸಿ ಸರ್ಕಾರದ ವಿರುದ್ಧ...
KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ
ಬೆಂಗಳೂರು: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು. ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ...
APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿಯೋಗ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ‘ಶಕ್ತಿ’ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ತಿಳಿದುಕೊಳ್ಳಲು ಆಂಧ್ರಪ್ರದೇಶ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು...
ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ
ಪಿರಿಯಾಪಟ್ಟಣ್ಣ: ರೈತರ ಮಕ್ಕಳಿಗಾಗಿ ಜನವರಿ 19ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರಿಗೆ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ...
NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ TA, ATI, TI, ATSಗಳು
ಡ್ಯೂಟಿ ಮೇಲೆ ವಂದ ಮಾಡಲಿಕ್ಕೂ ಪರದಾಟ ವಾರಗಟ್ಟಲೇ ಮನೆಯಿಂದ ಹೊಗುಳಿಯುವ ಶಿಕ್ಷೆ ಅನಾರೋಗ್ಯಕ್ಕೊಳಗಾದ ಕುಟುಂಬದವರ ನೋಡಲಾಗದ ಪರಿಸ್ಥಿತಿ 8ಗಂಟೆ ಬದಲಿಗೆ 12-14 ಗಂಟೆಗಳ ಕಾಲ ಡ್ಯೂಟಿ ಹುಬ್ಬಳ್ಳಿ:...
KSRTC 4 ಸಾರಿಗೆ ನಿಗಮಗಳ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಡಿಸೇಲ್, ಅಕ್ಕಿ, ಬಟ್ಟೆಗೆ ಜಾಸ್ತಿ ಆದ್ರೆ ದುಡ್ಡು ಕೊಡ್ತೀರಾ.. ಮಟನ್ 100 ರೂ. ಇದ್ದದ್ದು 500 ರೂ. ಆದ್ರೆ ತಗೋತೀರ ಆದರೆ, ಅದೇ ಒಂದು ಸರ್ಕಾರ...