NEWSದೇಶ-ವಿದೇಶನಮ್ಮರಾಜ್ಯ

ಮೂರನೇ ಮಗುವಿಗೂ ಮಾತೃತ್ವ ರಜೆ ತೆಗೆದು ಕೊಳ್ಳಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಹಿಳೆಯರು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನವಾಗಿ ದುಡಿಯುತ್ತಿದ್ದಾರೆ. ಈ ನಡುವೆ ಅವರಿಗೆ ಮಾತೃತ್ವದ ಸಮಯದಲ್ಲಿ ರಜೆ ಕೊಡುವುದಕ್ಕೆ ಹಲವಾರು ತೊಡಕುಗಳು ಎದುರಾಗುತ್ತವೆ. 2 ಮಕ್ಕಳವರಗೆ ಮಾತ್ರ ಮಾತೃತ್ವ ರಜೆ ತೆಗೆದುಕೊಳ್ಳಲು ಅವಕಾಶವಷ್ಟೆ ಎಂದು ಹೇಳುವುದು.

ಇನ್ನು ಬೇರೆ ಬೇರೆ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಲಾಖೆಗಳಲ್ಲೇ ಒಂದೊಂದು ನಿಯಮವನ್ನು ಮಾಡಿಕೊಳ್ಳಲಾಗಿದೆ. ಇದೆಲ್ಲವನ್ನು ಮೀರಿ 2025ರ ಮೇ 23ರಂದು ಸುಪ್ರೀ ಕೋರ್ಟ್‌ ಈ ಮಾತೃತ್ವ ರಜೆಯನ್ನು ಮೂರನೇ ಮಗುವಿಗೂ ತೆಗೆದುಕೊಳ್ಳಬಹುದು ಎಂದು ಮಹತ್ವದ ಆದೇಶ ನೀಡಿದೆ.

ಹೌದು! ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡುವ ಮೂಲಕ ಸ್ತ್ರೀಯರ ಗೌರವಕ್ಕೆ ಕುಂದು ಬರುವ ರೀತಿ ನಡೆದುಕೊಳ್ಳವವರಿಗೆ ನೀತಿಪಾಠ ಕಲಿಸಿದೆ.

ತಮಿಳುನಾಡಿನಲ್ಲಿ ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ 2 ಮಕ್ಕಳಿಗೆ ಮಾತ್ರ ಮಾತೃತ್ವದ ರಜೆ ನೀಡಲಾಗುತ್ತದೆ. ಇದರ ಆಧಾರದಲ್ಲಿ, ಸರ್ಕಾರಿ ಶಿಕ್ಷಕಿಯೊಬ್ಬರಿಗೆ 3ನೇ ಮಗುವಿಗೆ ಮಾತೃತ್ವ ರಜೆ ನೀಡಬೇಕು ಎಂದು ಆದೇಶಿಸಲು ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿತ್ತು. ಅದರ ಆದೇಶವನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ಶಿಕ್ಷಕಿಯ 3ನೇ ಮಗು 2ನೇ ಮದುವೆಯಿಂದ ಆಗಿರುವುದನ್ನು ಗಮನಿಸಿರುವ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ಮತ್ತು ಉಜ್ಜಲ್‌ ಭುಯಾನ್‌ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ‘ಮಹಿಳೆಯರ ಸಂತಾನೋತ್ಪತ್ತಿ ಆಯ್ಕೆಯಲ್ಲಿ ರಾಜ್ಯದ ಅನಗತ್ಯ ಹಸ್ತಕ್ಷೇಪ ಇರಬಾರದು. ಅವರ ಭಾವನಾತ್ಮಕ ಮತ್ತು ದೈಹಿಕ ಯೋಗಕ್ಷೇಮಕ್ಕೆ ಇದರಿಂದ ಅಡ್ಡಿಯಾಗುವುದರಿಂದ ಮಹಿಳೆಯರ ಘನತೆಗೆ ಹಾನಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಈಗ ಮಹಿಳೆಯರು ಉದ್ಯೋಗ ಕ್ಷೇತ್ರದ ಗಣನೀಯ ಭಾಗವಾಗಿದ್ದಾರೆ. ಅವರನ್ನು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳಬೇಕು. ಸ್ತ್ರೀಯರಿಗೆ ಸಾಮಾಜಿಕ ನ್ಯಾಯ ಒದಗಿಸಲು, ಹೆರಿಗೆ ಸಮಯದಲ್ಲಿ ಕುಂದಿದ ಶಕ್ತಿಯನ್ನು ಮರುಪೂರಣಗೊಳಿಸಲು, ಮಗುವಿನ ಪಾಲನೆ ಮಾಡಲು, ಕೆಲಸದ ವಿಷಯದಲ್ಲಿ ತಮ್ಮ ದಕ್ಷತೆಯನ್ನು ಹಿಂದಿನಂತೆ ಕಾಯ್ದುಕೊಳ್ಳಲು ಅನುವು ಮಾಡಿಕೊಡಲು ಮಾತೃತ್ವ ರಜೆ ನೀಡಲಾಗುತ್ತದೆ ಎಂದು ಹೇಳಿದೆ.

Megha
the authorMegha

Leave a Reply

error: Content is protected !!
Latest news
ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ