Please assign a menu to the primary menu location under menu

CrimeNEWSನಮ್ಮರಾಜ್ಯ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆಯೂ ನಡೆಯಿತು.

ಇನ್ನು ಸುವರ್ಣಸೌಧದ ಬಳಿ ತನ್ನ ಮೇಲೆ ಹಲ್ಲೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿ.ಟಿ.ರವಿ ಆಕ್ರೋಶ ಹೊರಹಾಕಿದರು. ಬಿಜೆಪಿ ನಾಯಕರೆಲ್ಲರೂ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಹಲ್ಲೆ ಮಾಡಲು ಬಂದವರು ಗೂಂಡಾಗಳು ಎಂದು ಅಸಮಾಧಾನ ಹೊರಹಾಕಿದರು.

ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಖಾನಾಪುರ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದಬಳಕೆ ಮಾಡಿದ ಆರೋಪ ಮೇಲೆ ಸಿ.ಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹೆಬ್ಬಾಳ್ಕರ್‌ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 75, 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಹಿನ್ನೆಯಲ್ಲಿ ಬಂಧಿಸಲಾಗಿದೆ.

ಘಟನೆ ಏನು?: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದು, ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು: ಸಚಿವರ ವಿರುದ್ಧ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಪ್ರಕರಣ ಸದ್ದು ಮಾಡ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಚಿವ ಹಾಗೂ ಪರಿಷತ್‌ನ ಕಾಂಗ್ರೆಸ್ ಸಭಾ ನಾಯಕ ಎನ್‌.ಎಸ್‌. ಬೋಸರಾಜು.

ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ. ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ