KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ಅಧಿಕಾರಿಗಳಿಗೆ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶಿಸಿದ್ದಾರೆ.
ಈ ಸಂಬಂಧ ಸಂಸ್ಥೆಯ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾಂಶುಪಾಲರು, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಅತೀ ಜರೂರು ಮಾಹಿತಿಯೊಂದನ್ನು ಸಂಸ್ಥೆಯ ಕಾರ್ಮಿಕ ಮತ್ತು ಕಲ್ಯಾಣ ಇಲಾಖೆ ಇಂದು ಡಿ.20ರಂದು ಹೊರಡಿಸಿದೆ.
ನಿಗಮದ ಎಲ್ಲ ಅಧಿಕಾರಿಗಳ ಗಮನಕ್ಕೆ ತರಬಯಸುವುದೇನೆಂದರೆ 19.12.2024 ರಂದು ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರ ಆದೇಶದಂತೆ ವಿಡಿಯೋ ಸಂವಾದನದಲ್ಲಿ ವಿವರವಾಗಿ ಚರ್ಚಿಸಿದಂತೆ ನಿಗಮದ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಬೀದರ, ಕಲಬುರಗಿ, ಯಾದಗಿರಿ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರುನಲ್ಲಿರುವ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಹಾಗೂ ವಿಜಯಪುರ, ಹೊಸಪೇಟೆಗಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳ ಜತೆಯಲ್ಲಿ ನಗದು ರಹಿತ ಒಡಂಬಡಿಕೆಯನ್ನು ಮಾಡಿಕೊಳ್ಳಲು ಉಲ್ಲೇಖಿತ ಪತ್ರದನ್ವಯ ತಮ್ಮಗೆ ಈಗಾಗಲೇ ಸೂಚಿಸಲಾಗಿದೆ.
ಅಲ್ಲದೆ ಮುಂದಿನ ದಿನಗಳಲ್ಲಿ ನಿಗಮದ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ನಿಗಮವು ಗುರುತಿಸುವ ಎಲ್ಲ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗಾಗಿ ಕ್ರಮಹಿಸಲು ತುರ್ತು ಮತ್ತು ಅವಶ್ಯಕ ವಾಗಿರುವುದರಿಂದ ನಿಗಮದಲ್ಲಿ ಕಾರ್ಯಾ ನಿರ್ವಹಿಸುವ ನೌಕರರು ಮತ್ತು ಅವಲಂಬಿತರ ಮಾಹಿತಿಯನ್ನು ಪಡೆದು ಕ್ರಮವಹಿಸ ಬೇಕಾಗಿದೆ.
ಆದರಂತೆ ಎಲ್ಲ ವಿಭಾಗಗಳ ವಿಭಾಗೀಯ ಕಚೇರಿ/ ಘಟಕ/ ಕಾರ್ಯಾಗಾರ/ ತರಬೇತಿ ಕೇಂದ್ರ/ ಯುನಿಟ್‌ಗಳಲ್ಲಿ ಒಬ್ಬ ಸಿಬ್ಬಂದಿ ಮೇಲ್ವಿಚಾರಕರ/ ಸಹಾಯಕ ಅವರನ್ನು ನೇಮಿಸಿ ನಗದು ರಹಿತ ಚಿಕಿತ್ಸೆಯನ್ನು ನೀಡಲು ಅವಶ್ಯವಿರುವ ಸಿಬ್ಬಂದಿಗಳ ವ್ಯಯಕ್ತಿಕ ಮಾಹಿತಿಯು ತಂತ್ರಾಂಶದಲ್ಲಿ ನಮೂದಿಸಲು ಈ ಕೆಳಕಂಡ ದಾಖಲೆಗಳನ್ನು ಕ್ರೂಡೀಕರಿಸಲು ಸೂಚಿಸಬೇಕು.
ಯಾವಯಾವ ದಾಖಲೆಗಳನ್ನು ಕ್ರೂಡೀಕರಿಸಬೇಕು: i. ಸಿಬ್ಬಂದಿಯ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರುಗಳ ಆಧಾರ್ ನಕಲು ಪ್ರತಿ.
ii. ಸಿಬ್ಬಂದಿಯ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರುಗಳ ಕೌಟಂಬಿಕ ಭಾವ ಚಿತ್ರ.
iii. ಸಿಬ್ಬಂದಿಯವರ ಅವಲಂಬಿತ ಕುಟುಂಬ ಸದಸ್ಯರುಗಳ (ತಂದೆ-ತಾಯಿ) ಆದಾಯ ಪ್ರಮಾಣ ಪತ್ರ (ಪ್ರಸ್ತುತ).
iv. ಸಿಬ್ಬಂದಿಯವರಿಂದ ಕುಟುಂಬದ ಸದಸ್ಯರುಗಳ ಸ್ವಯಂ ದೃಢೀಕರಣ ಪತ್ರ.
v. ಸಿಬ್ಬಂದಿಯವರ ದೂರವಾಣಿ ಸಂಖ್ಯೆ ಹಾಗೂ ಭವಿಷ್ಯ ನಿಧಿ ಸಂಖ್ಯೆ.
vi. ಸಿಬ್ಬಂದಿಯವರ ಪ್ರಸ್ತುತ ವೇತನ ಪಟ್ಟಿ.
ಈ ಎಲ್ಲವನ್ನು ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯವರಿಗೆ ನಗದು ರಹಿತ ಚಿಕಿತ್ಸೆಯ ಕುರಿತು ವ್ಯಯಕ್ತಿಕ ಹಾಗೂ ಕುಟುಂಬದ ಮಾಹಿತಿಯನ್ನು ನೀಡುವುದು ಅವಶ್ಯಕವೆಂದು ಬ್ಯಾನರ್‌ಗಳನ್ನು ಪ್ರದರ್ಶಿಸಿ ಘಟಕ ವ್ಯಸ್ಥಾಪಕರು/ವಿಭಾಗದ ಅಧಿಕಾರಿಗಳು ಸಿಬ್ಬಂದಿಯವರಿಗೆ ಸೂಕ್ತ ತಿಳಿವಳಿಕೆ ನೀಡಿ ಅಗತ್ಯ ಕ್ರಮವಹಿಸಲು ಈ ಮೂಲಕ ಸೂಚಿಸಲಾಗಿದೆ.
Related
You Might Also Like
KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್...
KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಈ ಕುರಿತು ಸರಕಾರ ಚರ್ಚೆ...
KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ
ಬೆಂಗಳೂರು: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಬಹು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅನುಷ್ಠಾನಕ್ಕೆ ಮುಹೂರ್ತ ನಿಗದಿಯಾಗಿದ್ದು, ಜ.6ರಂದು...
ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು...
ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ....
ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು?
ಹಾಸನ: ಹೊಸ ವರ್ಷದ ಸಂಭ್ರಮದಲ್ಲಿ ಸ್ನೇಹಿತರೊಟ್ಟಿಗೆ ಇದ್ದ ಪ್ರಿಯಕರನೊಂದಿಗೆ ಜಗಳ ಮಾಡಿದ ಪ್ರೇಯಸಿಯೊಬ್ಬಳು, ಏಕಾಏಕಿ ಚಾಕು ಇರಿದ ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ...
ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು
2025ರ ನೂತನ ವರ್ಷವನ್ನು ಅಧಿಕೃತವಾಗಿ ಹಲವು ದೇಶಗಳು ಈಗಾಗಲೇ ಸ್ವಾಗತಿಸಿವೆ. ಅದರ ಒಂದು ನೋಟ ಸಿಡ್ನಿಯು ಹೊಸ ವರ್ಷಕ್ಕೆ ಹಲೋ ಸ್ವಾಗತ ಎಂದು ಹೇಳಿ ಸಿಡ್ನಿ ಹಾರ್ಬರ್...
KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ಆರ್ಥಿಕ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ಪಡೆಯುವುದಕ್ಕೆ ಇಂದು ಸರ್ಕಾರ...
ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉದ್ದೇಬೋರನಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ದಿವ್ಯ ಮತ್ತು ಲೋಹಿತ್ ಅವರ 1 ವರ್ಷ 9ತಿಂಗಳ ಮಗು ಜನ್ವಿತಾಳನ್ನು ಅಂತಾ ರಾಷ್ಟ್ರೀಯ ವರ್ಲ್ಡ್ ಆಫ್...
BBMP ಪೂರ್ವ ವಲಯ: ಪಾದಚಾರಿ ಮಾರ್ಗ ಒತ್ತುವರಿ, ಪ್ಲೆಕ್ಸ್ ಬ್ಯಾನರ್ ತೆರವು
ಬೆಂಗಳೂರು: ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್‌ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ...
ದೆಹಲಿ ರೈತರ ಹೋರಾಟ ಬೆಂಬಲಿಸಿ ಮೈಸೂರಿನಲ್ಲಿ ಪೆಂಜಿನ ಮೆರವಣಿಗೆ ಪ್ರತಿಭಟನೆ
ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೈವಾಲ ಅವರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಇಂದು ಸಂಜೆ ಪಂಜಿನ ಪ್ರತಿಭಟನಾ ಮೆರವಣಿಗೆ...