KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ ಬ್ಯಾಂಕ್ನಲ್ಲಿ ನಮ್ಮ ಸಂಸ್ಥೆಯ ವೇತನ ಖಾತೆದಾರರಿಗೆ Premium Payrol Package ಯೋಜನೆಯಡಿಯಲ್ಲಿ ಅಪಘಾತ ವಿಮೆ ಮತ್ತು ಇತರೇ ಸೌಲಭ್ಯಗಳನ್ನು ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಇದು ನಿಗಮದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ಸಿಬ್ಬಂದಿಗಳಿಗಾಗಿ ನಿಗಮದಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಉದ್ದೇಶದಿಂದಲೇ 29-11-2024ರಂದು ಬ್ಯಾಂಕ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಈ ಒಡಂಬಡಿಕೆ ಅನ್ವಯ ಕೆನರಾ ಬ್ಯಾಂಕ್ನ ವೇತನ ಖಾತೆದಾರರಿಗೆ 1 ಕೋಟಿ ರೂಪಾಯಿ ಅಪಘಾತ ವಿಮೆ ಮೊತ್ತವನ್ನು ಹಾಗೂ ಇತರೇ ಸೌಲಭ್ಯಗಳನ್ನು ಮಾಸಿಕ ನಿವ್ವಳ ವೇತನ ಅನುಸಾರ ಈ ಕೆಳಕಂಡಂತೆ ವಿಂಗಡಿಸಲಾಗಿದೆ.
Silver Up to Rs:50,000/-PM Gross Salary.
Gold Rs.50,000/- To Rs:1,00,000/-PM Gross Salary.
Diamond: 1,00,000/- Το 1,50,000/-
Platinum: Above Rs:1,50,000/-PM Gross Salary.
Premium Payroll Package ಯೋಜನೆಯಡಿ ದೊರಕುವ ಇತರೇ ಹೆಚ್ಚುವರಿ ಸೌಲಭ್ಯಗಳು:
1. ಖಾತೆದಾರರ ಕಟುಂಬ ಸದಸ್ಯರಿಗೆ ಉಚಿತ ಶೂನ್ಯ ಬ್ಯಾಲೆನ್ಸ್ ಖಾತೆಗಳ ಸೌಲಭ್ಯ (Silver ಖಾತೆದಾರರನ್ನು ಹೊರತುಪಡಿಸಿ.)
2. ಎಲ್ಲ ಖಾತೆದಾರರು ATM ಮೂಲಕ ಪ್ರತಿ ದಿನ 1 ಲಕ್ಷ ರೂ. ಹಣವನ್ನು ಶುಲ್ಕವಿಲ್ಲದೇ ಪಡೆಯಬಹುದು.
3. ಎಲ್ಲಾ ಖಾತೆದಾರರು ಸಂಪರ್ಕರಹಿತ NFC ಮೂಲಕ ಪ್ರತಿ ದಿನ 25.000 ರೂ..ಗಳ ವರ್ಗಾವಣೆ ಸೌಲಭ್ಯ ಹಾಗೂ ಎಲ್ಲ ಖಾತೆದಾರರಿಗೆ ಉಚಿತ 200 ಎಲೆಗಳ ಚೆಕ್ಬುಕ್ ಸೌಲಭ್ಯ
ಮೇಲ್ಕಂಡ ಸೌಲಭ್ಯಗಳ ಜತೆಗೆ ಇತರೇ ಸೌಲಭ್ಯಗಳು ವಿವರವನ್ನು Annexure-1 ರಂತೆ ಅಡಕಗೊಳಿಸಿದೆ.
ಷರತ್ತುಗಳು: 1. ಈ ಯೋಜನೆ ಅಡಿ ಅಪಘಾತ ವಿಮಾ ಸೌಲಭ್ಯವನ್ನು ಪಡೆಯಲು ಇರುವ ನಿಬಂಧನೆಗಳ ವಿವರಗಳನ್ನು ನಮೂನೆಯನ್ನು Annexure -1 ರಲ್ಲಿ ನೀಡಲಾಗಿದೆ.
2. PayRool Packge ಖಾತೆದಾರರು ಬೇರೆ ಬ್ಯಾಂಕ್ಗಳಲ್ಲಿ ತನ್ನ ವೇತನದ ಖಾತೆಯನ್ನು ತೆರೆಯಲು ಇಚ್ಛಿಸಿದಲ್ಲಿ, ಕೆನರಾ ಬ್ಯಾಂಕ್ನಿಂದ ಆಕ್ಷೇಪಣಾರಹಿತ ದೃಢೀಕರಣ ಪತ್ರವನ್ನು Annexure -2 ರಂತೆ ಪಡೆಯಬಹುದು. ನಂತರ ಅವರ ಬ್ಯಾಂಕ್ ಖಾತೆಯು ಸಾಮಾನ್ಯ ಉಳಿತಾಯ ಖಾತೆಯಾಗಿ ಬದಲಾಗುವುದು.
3. ಅಪಘಾತ ನಡೆದ ದಿನಾಂಕದ ಹಿಂದಿನ 04 ತಿಂಗಳಲ್ಲಿ ನಿರಂತರವಾಗಿ ಅವರ ವೇತನವು Pay Rool Packge ಬ್ಯಾಂಕ್ ಖಾತೆಗೆ ಜಮಾ ಆಗಿರಬೇಕು. ಒಂದು ವೇಳೆ ವೇತನವು ಜಮಾ ಆಗದೇ ಇದ್ದ ಪಕ್ಷದಲ್ಲಿ ಅವರ ಬ್ಯಾಂಕ್ ಖಾತೆಯು ಸಾಮಾನ್ಯ ಉಳಿತಾಯ ಖಾತೆಯಾಗಿ ಬದಲಾಗುವುದು ಮತ್ತು ಅವರು ಈ ಮೇಲ್ಕಂಡ ವಿಮಾ ಹಾಗೂ ಇತರೇ ಸೌಲಭ್ಯಗಳಿಗೆ ಅರ್ಹರಿರುವುದಿಲ್ಲ.
4. ಬ್ಯಾಂಕ್ನವರಿಗೆ ಅಪಘಾತ ನಡೆದ 90 ದಿನಗಳ ಒಳಗೆ ಅಪಘಾತದ ಮಾಹಿತಿಯನ್ನು ನೀಡಬೇಕಿರುತ್ತದೆ. ಕ್ಷೇಮ ಅನ್ನು ಪೂರಕ ದಾಖಲೆಗಳೊಂದಿಗೆ 180 ದಿನಗಳ ಒಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ, ಒಡಂಬಡಿಕೆ ಪತ್ರ ಹಾಗೂ Annexure-I To Annexure-7 ಅನ್ನು ನೋಡುವಂತೆ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಅಲ್ಲದೆ ಎಲ್ಲ ಇಲಾಖಾ/ ವಿಭಾಗೀಯ ನಿಯಂತ್ರಣಾಧಿಕಾರಿಯವರ ಮಾಹಿತಿಗಾಗಿ ಹಾಗೂ ಈ ಯೋಜನೆ ಕುರಿತು ಎಲ್ಲ ಸಿಬ್ಬಂದಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...
KSRTC ಆಡಳಿತ ವರ್ಗ- ಕಾರ್ಮಿಕ ಸಂಘಟನೆಗಳ ನಡುವೆ ಕೈಗಾರಿಕಾ ವಿವಾದ ಉದ್ಭವಿಸಿರುವ ಹಿನ್ನೆಲೆ ಡಿ.27ರಂದು ಸಂಧಾನ ಸಭೆ- ಇದೊಂದು ಹೈಡ್ರಾಮಾ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೇ ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಕೈ ಬಿಡುವ ಸಂಬಂಧ ಡಿ.27ರಂದು ಬೆಳಗ್ಗೆ...