Please assign a menu to the primary menu location under menu

CrimeNEWSಆರೋಗ್ಯ

ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ, ತಜ್ಞ ವೈದ್ಯರ ತಂಡದಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಗಾಯಾಳುಗಳ ಕುಟುಂಬಕ್ಕೆ ಸಚಿವರು ಧೈರ್ಯತುಂಬಿದ್ದು ಚಿಕಿತ್ಸೆಗೆ ಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿ ಸಂತೈಸಿದರು.

ಈ ಸಂದರ್ಭದಲ್ಲಿ ಸಚಿವರಾದ ಸಂತೋಷ್ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಕೆಎಂಸಿಆರ್‌ಐ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ, ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಇದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್