Please assign a menu to the primary menu location under menu

CrimeNEWSಬೆಂಗಳೂರು

BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ನಡೆದ ಸಭೆಯಲ್ಲಿ, ಟಾಟಾ ನಗರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕೂಡಲೆ ಪ್ರಸ್ತಾವನೆ ಸಿದ್ದಪಡಿಸಿ, ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಹೇಳಿದರು.

ಅವೈಜ್ಞಾನಿಕ ರಸ್ತೆ ಉಬ್ಬುಗಳಿದ್ದರೆ ತೆರವುಗೊಳಿಸಿ: ಕೆನರಾ ಬ್ಯಾಂಕ್ ಕಾಲೋನಿಯ ರಾಜಾರಾಂ ಮೋಹನ ರಾಯ್ ರಸ್ತೆಯಲ್ಲಿ ಅನಧಿಕೃತವಾಗಿ ರಸ್ತೆ ಉಬ್ಬು(ಹಂಪ್)ಗಳನ್ನು ನಿರ್ಮಿಸಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಬಗ್ಗೆ ಪ್ರತಿಕ್ರಿಯಿಸಿ, ರಸ್ತೆ ಉಬ್ಬು ಮಾಡುವಾಗ ಪೊಲೀಸ್ ಅನುಮತಿ ಪಡೆಯಲಾಗಿರುತ್ತದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿ ಕೂಡಲೆ ಸ್ಥಳ ಪರಿಶೀಲಿಸಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಲ್ಲಿ, ಅದನ್ನು ತೆರವುಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಫರ್ ಜೋನ್ ನಲ್ಲಿ ಕಟ್ಟಡಗಳ ನಿರ್ಮಿಸಿರುವವರ ಮೇಲೆ ಕ್ರಮ: ನರಸೀಪುರ ಕೆರೆಯ ಬಫರ್ ಜೋನ್ ನಲ್ಲಿ ಅನಧಿಕೃತವಾಗಿ 4 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡುತ್ತಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಬೆಸ್ಕಾಂಗೆ ನೋಟೀಸ್ ನೀಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿಬೇಕು. ಅನಂತರ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಕನ್ನಡ ನಾಮಫಲಕ ಅಳವಡಿಸಿರುವ ವರದಿ ಕೊಡಿ: ಜಕ್ಕೂರು ಹಾಗೂ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಬರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಅಳವಡಿಸಿರುವುದಿಲ್ಲ. ಅದನ್ನು ಸರಿಪಡಿಸಲು ಕೋರಿದ್ದರ ಕುರಿತು ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚನೆ ನೀಡಿದರು.

ಬಹುತೇಕ ಸಮಸ್ಯೆಗಳ ಇತ್ಯರ್ಥ: ಕಳೆದ ಬಾರಿ ನಾಗರೀಕರಿಂದ ಬಂದಂತಹ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ನಾಗರೀಕರಿಂದ 35 ದೂರುಗಳು ಬಂದಿದ್ದು, ಅವುಗಳನ್ನು ಕೂಡಾ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ನಾಗರೀಕರಿಂದ ಬಂದಂತಹ ಪ್ರಮುಖ ಅಹವಾಲುಗಳು: 1. ಶಿವನಹಳ್ಳಿ ಕೆರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಮನವಿ. 2. ರಾಮಚಂದ್ರಪುರ ಮುಖ್ಯರಸ್ತೆಯಲ್ಲಿ ರಸ್ತೆ ಅಗಲೀಕರಣ ಪೂರ್ಣಮಾಡಿಕೊಡಲು ಮನವಿ. 3. ನರಸೀಪುರ ಬಡಾವಣೆಯಲ್ಲಿ ಡ್ರೈನ್ ಬ್ಲಾಕ್ ಆಗಿದ್ದು, ಅದನ್ನು ತೆರವು ಮಾಡಲು ಮನವಿ. 4. ಭುವನೇಶ್ವರಿ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವುದನ್ನು ಸಮರ್ಪಕವಾಗಿ ನಿರ್ವಹಿಸಲು ಮನವಿ.

5. ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳನ್ನು ತೆರವುಗೊಳಿಸಿ ಹೂಳೆತ್ತಲು ಮನವಿ. 6. ದೊಡ್ಡಬೆಟ್ಟಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲು ಮನವಿ. 7. ಪ್ಲಾಸ್ಟಿಕ್ ಬ್ಯಾನ್ ಇದ್ದು, ಅದನ್ನು ಸಂಪೂರ್ಣ ನಿಯಂತ್ರಿಸಲು ಮನವಿ. 8. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಸೇವಿಸುವುದನ್ನು ತಡೆಯಲು ಮನವಿ. 9. ತಿಂಡ್ಲು ಬಳಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಅದನ್ನು ನಿಯಂತ್ರಿಸಲು ಮನವಿ.

10. ಜಿಕೆವಿಕೆ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಶೆಡ್ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ. 11. ನರಸೀಪುರ 5ನೇ ಕ್ರಾಸ್ ನಲ್ಲಿ ಚರಂಡಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ. 12. ಒಳಚರಂಡಿಗಳಲ್ಲಿ ಸ್ವಚ್ಚತೆ ಮಾಡಿ, ಕೊಳಚೆ ನೀರು ಹೋರಬರದಂತೆ ಕ್ರಮವಹಿಸಲು ಮನವಿ ಮಾಡಿದ್ದಾರೆ.

ಈ ವೇಳೆ ವಲಯ ಆಯುಕ್ತ ಕರೀಗೌಡ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ರಂಗನಾಥ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್