KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ
ಬೆಂಗಳೂರು: 2024ರ ಜನವರಿ ಒಂದರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳುಗಳ ಹಿಂಬಾಕಿ ಕೊಡುವಂತೆ ಒತ್ತಾಯಿಸಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಿಂದ ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ಸರ್ಕಾರ ಇನ್ನು ಆರು ತಿಂಗಳುಗಳ ಕಾಲ ನೌಕರರು ಯಾವುದೇ ಮುಷ್ಕರ ನಡೆಸದಂತೆ ಇಂದು ಸರ್ಕಾರ ಆದೇಶ ಹೊರಡಿಸಿದೆ.
ಈ ಮಧ್ಯೆ ವಿಧಾನಸಭೆ ಅಧಿವೇಶನ ಮುಗಿಯುತಿದ್ದಂತೆ ಸಾರಿಗೆ ಮುಷ್ಕರ ಮಾಡಲು ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ಯಾವುದೇ ಮುಷ್ಕರ ಮಾಡದಂತೆ ಬಿಎಂಟಿಸಿ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಗಳು ಇಂದು ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳು ಸೇರಿದಂತೆ 1.25 ಲಕ್ಷ ನೌಕರರಿಗೆ 2020ರ 38 ತಿಂಗಳುಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಈವರೆಗೂ ನೀಡಿಲ್ಲ. ಜತೆಗೆ 2024ರ ಜನವರಿ 1ರಿಂದ ಮತ್ತೆ ವೇತನ ಪರಿಷ್ಕರಣೆ ಆಗಬೇಕಿದ್ದು, ಅದು ಕೂಡ 12 ತಿಂಗಳುಗಳು ಕಳೆಯುತ್ತ ಬಂದರೂ ಈವರೆಗೂ ಯಾವುದೇ ಮಾತುಕತೆಗೆ ಸರ್ಕಾರ ಮುಂದಾಗಿಲ್ಲ. ಹೀಗಾಗಿ ನೌಕರರ ಪರ ಸಂಘಟನೆಗಳು ಪ್ರತಿಭಟನೆ ಮಾಡುವುದಕ್ಕೆ ಒಂದು ತಿಂಗಳ ಹಿಂದೆಯೇ ಅಣಿಯಾಗಿವೆ.
ಆದರೆ, ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಯಾವುದೇ ಕಾರಣಕ್ಕೂ ಮುಷ್ಕರ, ಪ್ರತಿಭಟನೆ, ಹರತಾಳ ಹಾಗೂ ಅಸಹಕಾರ ಚಳವಳಿಗಳನ್ನು ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಅದಷ್ಟೇ ಅಲ್ಲದೇ ಮುಂದಿನ 2025ರ ಜನವರಿ 1ರಿಂದ ಆರು ತಿಗಳುಗಳು ಯಾವುದೇ ಸಮಸ್ಯೆಗಳಿದ್ದರೂ ಸಹ ಪ್ರತಿಭಟನೆ ನಡೆಸುವಂತ್ತಿಲ್ಲ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಅಂದು ಹೊರಡಿಸಿದ್ದ ಸರ್ಕಾರ ಅಧಿಸೂಚನೆಗೆ ಸಾರಿಗೆ ಜಂಟಿ ಕ್ರಿಯಾ ಸಮಿತಿ ಆಕ್ರೋಶವನ್ನು ಹೊರಹಾಕಿದೆ. ಅಲ್ಲದೆ ಸರ್ಕಾರದ ಆದೇಶ ಮೀರಿ ಜಂಟಿ ಸಂಘಟನೆಗಳು ಮುಷ್ಕರಕ್ಕೆ ಮುಂದಾಗಿವೆ. ಆದರೆ ಒಂದು ಮನೆ 10 ಬಾಗಿಲು ಎಂಬ ಸ್ಥಿತಿ ಜತೆ ಜತೆಗೆ ನಿರ್ಮಾಣವಾಗಿದೆ.
ಇದರ ನಡುವೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಈಗಾಗಲೇ ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೂಡ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮವನ್ನು ಈವರೆಗೂ ತೆಗೆದುಕೊಂಡಿಲ್ಲ. ಇದೇ ಕಾರಣಕ್ಕೆ ಈ ಹಿಂದೆಯೂ ಸರ್ಕಾರದ ವಿರುದ್ಧ ನೌಕರರು ತಿರುಗಿಬಿದ್ದಿದ್ದರು. ಆದರೆ ಇಂದು ತಿರುಗಿ ಬೀಳುತ್ತಾರೆ ಎಂಬ ಭಯಕ್ಕೆ ಮತ್ತೆ ಈ ಆದೇಶ ಹೊರಡಿಸಿದೆ.
ಇನ್ನು ಅಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸತತವಾಗಿ 15ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆಗ ಸಾರಿಗೆ ನೌಕರರೊಡನೆ ಮಾತುಕತೆ ನಡೆಸಿದ್ದ ವಿಪಕ್ಷ ಸ್ಥಾನದಲ್ಲಿದ್ದ ಇದೇ ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿತ್ತು.
ಆದರೆ, ಅಧಿಕಾರಕ್ಕೆ ಬಂದು 2 ವರ್ಷ ಕಳೆದಿದ್ದರೂ ನೌಕರರ ಬಗ್ಗೆ ಯಾವುದೇ ಆಸಕ್ತಿ ತೋರಿಸಿಲ್ಲ. ಇನ್ನು ಇತ್ತ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಜತೆಗೆ, ಶಕ್ತಿ ಯೋಜನೆಗೆ ಹಣ ಹೊಂದಿಸುವ ಸಲುವಾಗಿ ನೌಕರರ ಹಿತಾಸಕ್ತಿಯನ್ನೂ ಸಹ ಕಡೆಗಣಿಸುತ್ತಿದೆ ಈ ಸರ್ಕಾರ ಎಂಬ ಆರೋಪ ಕೇಳಿಬಂದಿದೆ.
ಈ ಎಲ್ಲದರ ನಡುವೆಯೂ ಈಗ ಮುಷ್ಕರ ಹಾಗೂ ಪ್ರತಿಭಟನೆ ನಡೆಸುವ ಅವಕಾಶಕ್ಕೂ ಸಹ ತಡೆಯೊಡ್ಡಿದೆ. ಇನ್ನು ನಾಲ್ಕೂ ನಿಗಮಗಳ ಎಂಡಿಗಳ ಜತೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡುವ ಸಂಬಂಧ ಹಲವು ಬಾರಿ ಸಭೆ ಕರೆದಿದ್ದ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬದಲಿಗೆ ಅದನ್ನು ಮುಂದೂಡಿಕೊಂಡೆ ಬರುತ್ತಿದೆ.
ಈ ಎಲ್ಲದರ ನಡುವೆ ಮತ್ತೆ ಅಂದರೆ ಡಿ.31ರಿಂದ ಸಾರಿಗೆ ಮುಷ್ಕರ ಮಾಡಲಾಗುವುದು ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದ್ದು ಈಗಾಗಲೇ ರಾಜ್ಯದ 4 ನಿಗಮಗಳ ಬಹುತೇಕ ಎಲ್ಲ ಘಟಕಗಳಿಗೂ ಹೋಗಿ ಕರ ಪತ್ರವನ್ನು ಹಂಚುತ್ತಿದೆ. ಈ ನಡುವೆ ಇಂದು ಕಾರ್ಮಿಕ ಇಲಾಖೆ ಆಯುಕ್ತರ ಸಮ್ಮುಖದಲ್ಲಿ ಆಡಳಿತ ಮಂಡಳಿ ಹಾಗೂ ಸಂಘಟನೆಗಳ ನಡುವೆ ಸಭೆ ನಡೆಯಬೇಕಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿರುವುದರಿಂದ ಸಭೆಯನ್ನು ಡಿ.30ಕ್ಕೆ ಮುಂದೂಡಿದೆ.
Related
1 Comment
Leave a Reply Cancel reply
You Might Also Like
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು
ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ...
ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ....
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್- ಚಾಲಕರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ...
ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್
ಬೆಂಗಳೂರು: ಕಂಟ್ರ್ಯಾಕ್ಟರ್ಗೆ ಬಲೆ ಬೀಸಿ ಹನಿ ಟ್ರ್ಯಾಪ್ ಮಾಡಿರೋ ಸುಂದರಿಯ ಗ್ಯಾಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಂಟ್ರ್ಯಾಕ್ಟರ್ ರಂಗನಾಥ್ ಎಂಬುವರು ಯುವತಿ ನಯನಾ...
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ಥು ಬೇವರ್ಸಿಗಳ, ನವಂತೂ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ, ನಮಗೆ ಸಾಕಾಗಿದೆ, ಆದರೆ ನಿಮ್ಮ ಕಾಂಗ್ರೆಸ್ ಸರ್ಕಾರದ ನಮಕ್ ಹರಾಮ್ ಕೆಲಸ ಇದೆಯಲ್ಲ ಮುಷ್ಕರವನ್ನ ನಿಷೇದಿಸಿರುವುದು ಖಂಡಿತ ನೀವು ಸಹ ಬಿಜೆಪಿ ಅವರ ಹಾದಿ ಹಿಡಿದಿರುವುದನ್ನು ನೋಡಿದರೆ ಖಂಡಿತ ನಿಮ್ಮ ಮೇಲಿನ ಆಶಭಾವನೆ ಕೂಡ ಹೊರಟು ಹೋಯಿತು. ನೀವು ವಿರೋಧ ಪಕ್ಷದಲ್ಲಿದ್ದಾಗ ಇದನ್ನೆಲ್ಲ ವಿರೋಧಿಸಿದರಲ್ಲವೇ?. ಈಗ ಏನು ತಿನ್ನೋ ಬಾಯಲ್ಲಿ ಈ ಆಜ್ಞೆ ಮಾಡಿದ್ದೀರಿ, ಚುನಾವಣೆಗೆ ಮುಂದೆ, ಲಕ್ಷ್ಮಿ ಹೆಬ್ಬಾಳ್ಕರ್, hk ಪಾಟೀಲ್ ಮತ್ತು ಲಕ್ಷ್ಮಣ್ ಸವದಿ ಏನು ಹೇಳಿದ್ರಿ ಈಗ ಜ್ಞಾಪಿಸಿಕೊಳ್ಳಿ ಪರಮೇಶ್ವರ್ ಅವರೆ ನೀವು ಏನು ಹೇಳಿದ್ರಿ ಈಗ ನಿಮ್ಮ ಬಾಯಿಗೆ ಏನು ಬಿದ್ದಿದೆ, ಸ್ವಲ್ಪ ಯೋಚಿಸಿ