NEWSಕೃಷಿನಮ್ಮಜಿಲ್ಲೆ

ಚೆಕ್ ಫೋಸ್ಟ್‌ಗಳಲ್ಲಿ ರೈತರ ತಡೆದರೆ ಕ್ರಮ

ಅಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರುವ ವೇಳೆ ಯಾವುದೇ ಚೆಕ್‌ಫೋಸ್ಟ್‌ಗಳಲ್ಲಾದರೂ ಅವರನ್ನು ತಡೆದರೆ ಅಂಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹತ್ತಿ ಮಾರುಕಟ್ಟೆ, ಕಡಲೆ ಖರೀದಿ ಕೇಂದ್ರ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಪರಿಶೀಲನೆ ವೇಳೆ ಮಾತನಾಡಿದರು.

ರೈತರು ಯಾವುದೇ ಬೆಳೆ ಬೆಳೆಯಲಿ, ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಯಾವುದೇ ರೀತಿಯ ಸಮಸ್ಯೆಯಾಗಬಾರದು. ಮಾರುಕಟ್ಟೆಗೆ ಆಗಮಿಸುವ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಪ್ರತಿಯೊಬ್ಬರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ನಡೆಸಬೇಕು ಎಂದರು.

ಊಟೋಪಾಚಾರ ವ್ಯವಸ್ಥೆ; ಎಪಿಎಂಸಿ ಬರುವ ರೈತರು ಹಾಗೂ ಹಮಾಲರಿಗೆ ಉಪಾಹಾರ, ಊಟದ ವ್ಯವಸ್ಥೆಯನ್ನು ಮಾಡಬೇಕು. ಕ್ಯಾಂಟಿನ್ ತೆರೆದು ಇಲ್ಲಿ ಪಾರ್ಸಲ್ ವ್ಯವಸ್ಥೆ ಮಾಡಿ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ತಿಳಿಸಿ ಕ್ಯಾಂಟಿನ್ ತೆರೆಯದಿದ್ದಲ್ಲಿ ಸಮಿತಿಯಿಂದ ಪಾರ್ಸಲ್ ವ್ಯವಸ್ಥೆ ಮಾಡಲು ಸೂಚಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಚಿತ್ರದುರ್ಗ ಎಪಿಎಂಸಿಗೆ 02 ಕೋಲ್ಡ್ ಸ್ಟೋರೆಜ್ ಹಾಗೂ ಶಾಸಕ ಟಿ.ರಘುಮೂರ್ತಿ  ಚಳ್ಳಕೆರೆಗೆ 01 ಕೋಲ್ಡ್ ಸ್ಟೋರೇಜ್ ಅಳವಡಿಕೆ ಮಾಡುವಂತೆ ಮನವಿ ಮಾಡಿದ್ದು, ಅಗತ್ಯವಿರುವ ಕಡೆ ಕೋಲ್ಡ್ ಸ್ಟೋರೇಜ್ ಅಳವಡಿಕೆಗೆ ಪ್ರಸ್ತಾವನೆ ಕಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹೊಸ ಸಾಲ ವಿತರಣೆಗೆ ಕ್ರಮ

ಪೂರ್ವ ಮುಂಗಾರು ಹಂಗಾಮು ಆರಂಭವಾಗಿದ್ದು ಬಿತ್ತನೆ ಚಟುವಟಿಕೆಗಳು ಆರಂಭಿಕ ಹಂತದಲ್ಲಿರುವುದರಿAದ ಏಪ್ರಿಲ್ ತಿಂಗಳಿAದನಿAದಲೇ ನಿಯಾಮಾನುಸಾರ ಹೊಸ ಸಾಲ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಸಹಕಾರ ಸಂಸ್ಥೆಗಳ ಮೂಲಕ ಕಳೆದ ವರ್ಷ 13 ಸಾವಿರ ಕೋಟಿ ಸಾಲ ನೀಡಲಾಗಿದ್ದು ಈ ಬಾರಿಯು ಅಷ್ಟೇ ಪ್ರಮಾಣದ ಸಾಲವನ್ನು ನೀಡಲು ತೀರ್ಮಾನಿಸಲಾಗಿದೆ. ಲಾಕ್ ಡೌನ್ ಇರುವ ಕಾರಣದಿಂದಾಗಿ ಜೂನ್ ವರೆಗೆ ಹಳೆ ಸಾಲ ಕಟ್ಟಲು ಸಮಯ ನಿಗದಿಪಡಿಸಲಾಗಿದೆ.  ಜೂನ್ ತಿಂಗಳಿಗಿಂತ ಮುಂಚಿತವಾಗಿ ಯಾರು ಮೊದಲು ಸಾಲ ಕಟ್ಟುತ್ತಾರೋ ಅವರಿಗೆ ಸಾಲದ ನವೀಕರಣ, ಹೊಸ ಸಾಲ ನೀಡಲಾಗುವುದು ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಸಹಕಾರ ಸಂಘದ ನಿರ್ದೇಶಕ ಎಸ್.ಆರ್.ಗಿರೀಶ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಟಿ.ಎ.ಮಹೇಶ್ ಸಿಬ್ಬಂದಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ