ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲೇ ಬೇಕು ಎಂದು ಕ್ರಿಯಾ ಸಮಿತಿ ಒತ್ತಾಯಿಸುತ್ತಿದೆ.
ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿ ಮುಷ್ಕರ ತಡೆಗಟ್ಟುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
ಆರ್ಥಿಕ ಸವಾಲುಗಳು ಮತ್ತು ನೌಕರರ ಬೇಡಿಕೆಗಳು, ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆಯಾಯಿತು. ಆದಾಗ್ಯೂ, ಮುಷ್ಕರದ ಕರೆಯನ್ನು ಹೇಗೆ ಪರಿಹರಿಸಬೇಕು ಎಂಬುದರ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಮುಷ್ಕರಕ್ಕೆ ಕರೆ ಕೊಟ್ಟಿರುವ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೆಚ್ಚಿನ ಚರ್ಚೆ ನಡೆಸಿ ಎಂದು ಸೂಚಿಸಲಾಯಿತು.
ಈ ನಡುವೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಯನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿ ಆದೇಶ ಹೊರಡಿಸಿರುವ ಸರ್ಕಾರ ಈಗಾಗಲೇ ಜನವರಿ 1 ರಿಂದ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸುವುದನ್ನು ತಡೆಯುವುದಕ್ಕೆ ಯತ್ನಿಸಿದೆ. ಇನ್ನೊಂದೆಡೆ ಮುಷ್ಕರದ ಅವಧಿಯಲ್ಲಿ ನಿರಂತರವಾಗಿ ಬಸ್ ಸೇವೆ ಒದಗಿಸುವ ಗುರಿಯನ್ನು ಬಿಎಂಟಿಸಿ ಹೊಂದಿದೆ.
ಮುಷ್ಕರ ತಡೆಗಟ್ಟಲು ಮುಂದಾಯಿತು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ನಾಲ್ಕು ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಮುಷ್ಕರದಿಂದ ಹಿಂದೆ ಸರಿಯುವಂತೆ ನಾನು ಈಗಾಗಲೇ ನೌಕರರ ಸಂಘಟನೆಗಳಿಗೆ ಮನವಿ ಮಾಡಿದ್ದೇನೆ. ನಿಗಮಗಳ ಆರ್ಥಿಕ ಪರಿಸ್ಥಿತಿಯ ಬಗ್ಗೆಯೂ ಅವರಿಗೆ ತಿಳಿದಿದೆ. ಆದ್ದರಿಂದ, ಮುಷ್ಕರ ಮಾಡದಂತೆ ನಾನು ಅವರನ್ನು ವಿನಂತಿಸಿದ್ದೇನೆ ಮತ್ತು ಮುಷ್ಕರವನ್ನು ತಡೆಯಲು ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಈ ಹಿಂದೆ ಅನಿರ್ದಿಷ್ಟಾವಧಿ ಮುಷ್ಕರದ ಉದ್ದೇಶದ ಬಗ್ಗೆ ಕಾರ್ಮಿಕ ಇಲಾಖೆಗೆ ತಿಳಿಸಿತ್ತು. ಇದರ ಪರಿಣಾಮವಾಗಿ, ಡಿಸೆಂಬರ್ 30 ರಂದು ಸಮಿತಿ ಮುಖಂಡರು ಮತ್ತು ನಿಗಮದ ಅಧಿಕಾರಿಗಳ ನಡುವೆ ರಾಜೀಸಂಧಾನ ಸಭೆಯನ್ನು ನಿಗದಿಪಡಿಸಿದೆ.
ಒಂದು ಹಂತದಲ್ಲಿ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳಲ್ಲಿ 3 ನಿಗಮಗಳ ಎಂಡಿಗಳು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಕೆಎಸ್‌ಆರ್‌ಟಿಸಿ ಎಂಡಿ ಮಾತ್ರ ನೀವು ದುಡುಕಬೇಡಿ ಸರ್ಕಾರ ಯಾವ ನಿರ್ದಾರ ತೆಗೆದುಕೊಳ್ಳುತ್ತದೋ ಆ ನಿಟ್ಟಿನಲ್ಲಿ ನಾವು ಸಾಗೋಣ ಎಂದು ಹೇಳಿರುವುದಾಗಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇಲ್ಲಿ ಕೆಎಸ್‌ಆರ್‌ಟಿಸಿ ಎಂಡಿಯವರ ನಡೆ ಭಾರಿ ಕುತೂಹಲ ಮೂಡಿಸಿದೆ. ಇತ್ತ ಸರ್ಕಾರ ನಡೆಯೂ ನಿಗೂಢವಾಗಿದೆ. ಹೀಗಾಗಿ ಜಂಟಿ ಕ್ರಿಯಾ ಸಮಿತಿಯ ಮುಂದಿನ ನಡೆಕೂಡ ಯಾವ ರೀತಿ ಇರಲಿದೆ ಎಂಬುದು ತಿಳಿಯಬೇಕಾದರೆ ಡಿ.31ರವರೆಗೂ ಕಾದು ನೀಡಬೇಕಿದೆ.
Related
You Might Also Like
KSRTC 4 ಸಾರಿಗೆ ನಿಗಮಗಳ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಡಿಸೇಲ್, ಅಕ್ಕಿ, ಬಟ್ಟೆಗೆ ಜಾಸ್ತಿ ಆದ್ರೆ ದುಡ್ಡು ಕೊಡ್ತೀರಾ.. ಮಟನ್ 100 ರೂ. ಇದ್ದದ್ದು 500 ರೂ. ಆದ್ರೆ ತಗೋತೀರ ಆದರೆ, ಅದೇ ಒಂದು ಸರ್ಕಾರ...
ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್
ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ...
ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ...
ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ
ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ಆವರಣದಲ್ಲಿ 84ನೇ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆ ಇದೇ ಜನವರಿ 5ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ...
ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ
ಕೊಳ್ಳೇಗಾಲ: ಕೇವಲ ಸೌತೆಕಾಯಿಗಾಗಿ ಅಣ್ಣನೊಬ್ಬ ತನ್ನ ತಂಗಿಯ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲದಲ್ಲಿ ನಡೆದಿದೆ....
ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘದ ಚುನಾವಣೆ ಇದೇ ಜನವರಿ 19 ರಂದು ನಡೆಯಲಿದ್ದು, ಈಗಾಗಲೇ ಚುನಾವಣಾ ಕಾವು ಏರುತ್ತಿದೆ, ನೌಕರರ ಸಂಘಟನೆಗಳ...
ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟಿಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭಟನೆ
ಬನ್ನೂರು: ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆದು ಖರೀದಿ ಮಾಡದೆ ಕೇವಲ ನೋಂದಣಿ ಪ್ರಕ್ರಿಯೆಯಲ್ಲೆ ಕಾಲಹರಣ ಮಾಡಿದ ಕಾರಣ ಭತ್ತ ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿ ನಷ್ಟ...
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ಒಂಟಿ...
KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ನಿಗಮಗಳ 10 ವರ್ಷದ ಮನವಿಗೆ ಸ್ಪಂದಿಸಿದೆ....
KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್...
KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಈ ಕುರಿತು ಸರಕಾರ ಚರ್ಚೆ...