ಸಾರಿಗೆ ನೌಕರರು ಸರ್ಕಾರಿ ನೌಕರರಾಗಿ ಮಾಡ್ತಾರೆ ಅಂತ ನಿಮ್ಮನ್ನು ಆಸೆಗಣ್ಣಿನಿಂದ ನೋಡ್ತಿದ್ದಾರೆ ಇದು ನಿಮ್ಮ ಕಾಲದಲ್ಲೇ ಆಗಬೇಕು
ಬೆಂಗಳೂರು: ಸಾರಿಗೆ ನೌಕರರು ಕಾಂಗ್ರೆಸ್ಗೆ ಮತಹಾಕಿ ನಮ್ಮನ್ನು ಸರ್ಕಾರಿ ನೌಕರರಾಗಿ ಮಾಡ್ತಾರೆ ಅಂತ ನಿಮ್ಮನ್ನು ಆಸೆಗಣ್ಣಿನಿಂದ ನೋಡುತ್ತಿದ್ದಾರೆ ಸ್ವಾಮಿ, ದಯವಿಟ್ಟು ಇದು ಬಹಳ ದೊಡ್ಡಬೇಡಿಕೆ ಇದು ನಿಮ್ಮ ಕಾಲದಲ್ಲೇ ಆಗಬೇಕು ಸ್ವಾಮಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ನೌಕರರ ಪರವಾಗಿ ಸಂಘಟನೆ ಮುಖಂಡರೊಬ್ಬರು ಮನವಿ ಮಾಡಿದ್ದಾರೆ.
ಇಂದು ಮೇ 27ರ ಮಂಗಳವಾರ ಸಾಯಂಕಾಲ ನಗರದ ಪುರಭವನದಲ್ಲಿ ಸಾರಿಗೆಯ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ-ಪಂಗಳ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆಗಬೇಕು, ಬೇರೆಯವರ ಕಾಲದಲ್ಲಿ ಅದು ಆಗಲಿಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ತಮ್ಮ ಮುಂದೆ ಈ ಬೇಡಿಕೆಯನ್ನುಡುತ್ತಿದ್ದೇವೆ ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಸಾರಿಗೆ ಸಚಿವರನ್ನು ಒತ್ತಾಯಿಸಿದರು.
ಇನ್ನು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರನ್ನು ಸಂಪೂರ್ಣವಾಗಿ ಸರ್ಕಾರಿ ನೌಕರರಿಗೆ ಸಮಾನವಾಗಿ ಕಾಣಬೇಕು, ವೇತನ ಸೇರಿ ಎಲ್ಲ ಸೌಲಭ್ಯಗಳು ದೊರೆಯಬೇಕು ಎಂದು ಈ ಸಮಾರಂಭದಲ್ಲಿ ಮನವಿ ಮಾಡುತ್ತಿರುವುದಾಗಿ ಮುಖಂಡರು ತಿಳಿಸಿದರು.
ಬಹಳ ಪ್ರಮುಖವಾಗಿ ಶಕ್ತಿ ಯೋಜನೆ ಜಾರಿಯಿಂದ ಸಾರಿಗೆ ನಿಗಮಗಳಿಗೆ ಶಕ್ತಿ ಬಂದಿದೆ. ಅಲ್ಲದೆ ಈವರೆಗೂ 576 ರಾಷ್ಟ್ರ ಪ್ರಶಸ್ತಿಗಳನ್ನು ನಮ್ಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಪಡೆದುಕೊಂಡಿವೆ. ಇದು ಹೆಮ್ಮೆಯ ವಿಷಯ. ಜತೆಗೆ ನಿಮ್ಮ ಕಾಲದಲ್ಲಿ 4 ಸಾವಿರ ಹೊಸ ಬಸ್ಗಳು ಬಂದಿವೆ. ಅಲ್ಲದೆ 4500 ಇ-ಬಸ್ಗಳು ಬರಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇನ್ನು ನೀವು ಈ ಬಸ್ಗಳಿಗೆ ನಮ್ಮ ಸಂಸ್ಥೆಯ ಚಾಲಕರನ್ನೇ ನೇಮಕ ಮಾಡುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೀರಿ. ಇದು ಸಂಸ್ಥೆಯ ಉಳಿವೆ ಒಳ್ಳೆ ಪ್ರಯತ್ನವಾಗಿದೆ. ನಿಮ್ಮ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿದರೆ ಹೊರಗಿನವರ ಅಗತ್ಯವಿರುವುದಿಲ್ಲ ಎಂದು ಅಭಿಪ್ರಾಯಪಟ್ಟರು.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...