Please assign a menu to the primary menu location under menu

NEWSನಮ್ಮಜಿಲ್ಲೆ

ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ ಫೆಬ್ರವರಿ 2025 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ನಗರದ ಎಲ್ಲ ನಾಗರೀಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(RWAs) ಹಾಗೂ ಸಂಘ-ಸಂಸ್ಥೆಗಳು ತಮ್ಮ ಸಲಹೆ/ಸೂಚನೆಗಳನ್ನು ಪಾಲಿಕೆಗೆ ಸಲ್ಲಿಸಲು ಅನುಕೂಲವಾಗುವಂತೆ ಪಾಲಿಕೆ ಕೇಂದ್ರ ಕಛೇರಿಯ ಮುಖ್ಯ ದ್ವಾರದ ಬಳಿ ಸಲಹಾ ಪೆಟ್ಟಿಗೆ(ಬಾಕ್ಸ್) ಅನ್ನು ಇರಿಸಿದ್ದು, ಸದರಿ ಸಲಹಾ ಪೆಟ್ಟಿಗೆಯ ಮೂಲಕ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.

ಮುಂದುವರಿದು, 2025-26ನೇ ಸಾಲಿನ ಕರಡು ಆಯವ್ಯಯಕ್ಕಾಗಿ ನಗರದ ಎಲ್ಲಾ ನಾಗರೀಕರು, ಸಂಘ-ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ/ಸೂಚನೆಗಳನ್ನು ಇ-ಮೇಲ್ ಆದ [email protected] ಮೂಲಕವೂ ಸಲ್ಲಿಸಬಹುದಾಗಿದೆ.

ಈ ನಿಟ್ಟಿನಲ್ಲಿ ಬಿಬಿಎಂಪಿ ಆಯವ್ಯಯಕ್ಕಾಗಿ ಸಲಹೆಗಳನ್ನು ನೀಡಲು ಬಯಸುವವರು 10.02.2025ರ ಒಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ನಾಗರೀಕರು/ಸಂಘ-ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ/ಸೂಚನೆಗಳನ್ನು ನೀಡಲು ತಿಳಿಯಪಡಿಸಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ...