ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು.
ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಈ ಸಂಬಂಧ ವೆಂಡಿಂಗ್ ಜೋನ್ ಗುರುತಿಸುವವರೆಗೆ ಯಾವ್ಯಾವ ರಸ್ತೆಗಳಲ್ಲಿ ವ್ಯಾಪಾರ ಮಾಡಬಹುದು ಎಂಬುದನ್ನು ಪರಿಶೀಲಿಸಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾರ್ಕ್ ಮಾಡಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಯಾವ್ಯಾವ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ತರು ವ್ಯಾಪಾರ ಮಾಡಬಹುದು ಎಂಬುದನ್ನು ಗುರುತಿಸಬೇಕು. ಅನಂತರ ಪಾದಚಾರಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ಮಾರ್ಕಿಂಗ್ ಮಾಡಿ(ಗಡಿ ಗುರುತಿಸಿ) ಅವರಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲು ಸೂಚನೆ ನೀಡಿದರು.
ಶಾಶ್ವತ ಪೆಟ್ಟಿಗೆಗಳನ್ನು ತೆರವುಗೊಳಿಸಿ: ಪಾದಚಾರಿ ಮಾರ್ಗದಲ್ಲಿ ಶಾಶ್ವತ ಪೆಟ್ಟಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಕೂಡಲೆ ತೆರವುಗೊಳಿಸಬೇಕು. ಪಾದಚಾರಿಗಳ ಓಡಾಟಕ್ಕೆ ಅವಕಾಶವಿರಬೇಕು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವಂತಿಲ್ಲ. ಇದರ ಜೊತೆಗೆ ಪಾದಚಾರಿ ಮಾರ್ಗದಲ್ಲಿ ಬರುವ ಅಂಗಡಿ/ಮುಂಗಟ್ಟುಗಳ ಮುಂಭಾಗದ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯುತ್ ಚಿತಾಗಾರಕ್ಕೆ ಪ್ರಸ್ತಾವನೆ ಸಲ್ಲಿಸಿ: ಚಾಮರಾಜಪೇಟೆಯ ಟಿ.ಆರ್.ಮಿಲ್ ಬಳಿಯ ರುದ್ರಭೂಮಿಯು ಸುಮಾರು 3 ಎಕರೆ ಪ್ರದೇಶದಲ್ಲಿದ್ದು, ವಿದ್ಯತ್ ಚಿತಾಗಾರ ನಿರ್ಮಾಣ ಮಾಡಿದರೆ ಸ್ಥಳೀಯರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ವಿದ್ಯತ್ ಚಿತಾಗಾರ ಮಾಡುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
90ಕ್ಕೂ ಹೆಚ್ಚು ಅಹವಾಲುಗಳ ಸ್ವೀಕಾರ: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಇಂದು ನಾಗರಿಕರಿಂದ ಒಟ್ಟಾರೆ 90ಕ್ಕೂ ಹೆಚ್ಚು ಅಹವಾಲನ್ನು ಸ್ವೀಕರಿಸಿ, ಎಲ್ಲಾ ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಲಯ ಆಯುಕ್ತರಾದ ಅರ್ಚನಾ, ವಲಯ ಜಂಟಿ ಆಯುಕ್ತ ಸಂಗಪ್ಪ, ಉಪ ಆಯುಕ್ತ ಶ್ರೀನಿವಾಸ್, ಮುಖ್ಯ ಅಭಿಯಂತರ ಶಶಿ ಕುಮಾರ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Related
You Might Also Like
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್ ಸರ್ಕಾರ…!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಮುನ್ನೆಲೆಗೆ ಬಂದಿದ್ದು ಸರಿ ಸಮಾನ ವೇತನ ನಿರ್ಧಾರ ತೆಗೆದುಕೊಳ್ಳುವ...
KSRTC 4 ನಿಗಮಗಳ ಬಸ್ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿ ಇದೇ ಜ.5ರಿಂದ ಜಾರಿಗೆ ಬಂದಿದೆ. ಆದರೆ ಈ ಪರಿಷ್ಕೃತ ದರ...
KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನೌಕರರ ಹಲವಾರು ವರ್ಷಗಳ ಕನಸು ಇಂದು ಅಧಿಕೃತವಾಗಿ ನನಸಾಗಿದ್ದು, ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ...
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ
ಹುಬ್ಬಳ್ಳಿ: ಉದ್ದೇಶ ಪೂರ್ವಕವಾಗಿ ವಾಹನ ತಪಾಸಣೆ ನಡೆಸಿ ನನ್ನನ್ನು ಅಮಾನತು ಮಾಡುವ ಸಂಚು ರೂಪಿಸಲಾಗಿದೆ ಎಂದು ಮನನೊಂದ ನಿರ್ವಾಹಕರೊಬ್ಬರು ಡ್ಯೂಟಿ ಮೇಲೆ ಇದ್ದಾಗಲೇ ವಿಸ ಸೇವಿಸಿ ಆತ್ಮಹತ್ಯೆಗೆ...
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ
ಬೆಂಗಳೂರು: ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದ್ದು, ಡೆಂಗ್ಯೂ, ಉಸಿರಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಕ್ರಿಯಾ ಆಸ್ಪತ್ರೆ ಮತ್ತು ಅದ್ವಿಕಾ...
ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ
ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ...
ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ,...
ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ?
ಆರೋಗ್ಯ ಮಾಹಿತಿ: ಜ್ವರದ ಸಮಯದಲ್ಲಿ ಹೆಚ್ಚು ಬೆವರುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಈ ವೇಳೆ ಎಳನೀರು ಕುಡಿಯುವುದರಿಂದ ನೈಸರ್ಗಿಕವಾಗಿ ದೇಹಕ್ಕೆ ನೀರನ್ನು ಒದಗಿಸಿ, ನಿರ್ಜಲೀಕರಣವನ್ನು ತಡೆಯುತ್ತದೆ....
ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್ ದರ ಹೆಚ್ಚಳ: ಪಟ್ಟಿ ರಿಲೀಸ್ ಮಾಡಿದ ಸಾರಿಗೆ ಸಚಿವ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದನ್ನು ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಖಂಡಿಸಿ ಸರ್ಕಾರದ ವಿರುದ್ಧ...
KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ
ಬೆಂಗಳೂರು: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು. ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ...
APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿಯೋಗ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ‘ಶಕ್ತಿ’ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ತಿಳಿದುಕೊಳ್ಳಲು ಆಂಧ್ರಪ್ರದೇಶ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು...