NEWSಕೃಷಿನಮ್ಮರಾಜ್ಯ

ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ – ಜಿಲ್ಲಾ ಮಂತ್ರಿಗಳು, ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ಇಂದು ಖಡಕ್‌ ಸೂಚನೆ ನೀಡಿದರು.

ಅಲ್ಲದೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು. ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು, ಮೇ 30, 31 ರಂದು DC, CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ತಿಳಿಸಿದರು.

ಸದ್ಯ ತೆಗೆದುಕೊಂಡಿರುವ ಕ್ರಮಗಳು: ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.

ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ ಎಂದು ವಿವರಿಸಿದರು.

Megha
the authorMegha

Leave a Reply

error: Content is protected !!
Latest news
KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ...