ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಬಯಸುವ ವಿದ್ಯಾರ್ಥಿಗಳು ಬಿಬಿಎಂಪಿ ಶಾಲೆ- ಕಾಲೇಜುಗಳಿಗೆ ಪ್ರವೇಶ ಪಡೆದು ಬಿಬಿಎಂಪಿ ಶಿಕ್ಷಣಕ್ಕೆ ನೀಡುವ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮನವಿ ಮಾಡಿದ್ದಾರೆ.
ಬಿಬಿಎಂಪಿ ಒಡೆತನದ ಶಿಶುವಿಹಾರ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಮೇ 29ರಿಂದ ಪ್ರಾರಂಭವಾಗುತ್ತಿವೆ.
2025-26 ನೇ ಶೈಕ್ಷಣಿಕ ಸಾಲಿನ ವಿವಿಧ ತರಗತಿಗಳ ವಿದ್ಯಾಭ್ಯಾಸಕ್ಕಾಗಿ ಈಗಾಗಲೇ ಪ್ರವೇಶಾತಿಗಳು ಪ್ರಾರಂಭವಾಗಿದ್ದು, 20ನೇ ಜೂನ್ 2025 ರವರೆಗೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹತ್ತಿರದ ಪಾಲಿಕೆಯ ಶಾಲಾ, ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಿರಿ ಎಂದು ತಿಳಿಸಿದ್ದಾರೆ.
ಬಿಬಿಎಂಪಿ ಶಾಲಾ, ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ದೊರಕುವ ಸೌಲಭ್ಯಗಳು: ನೋಟ್ ಪುಸ್ತಕಗಳು, ಪಠ್ಯ ಪುಸ್ತಕಗಳು, ಸಮವಸ್ತ್ರಗಳು, ಶೂ ಮತ್ತು ಕಾಲುಚೀಲ, ಬ್ಯಾಗ್ ಗಳು, ಸ್ವೇಟರ್ಗಳು.
* ಮಧ್ಯಾಹ್ನದ ಬಿಸಿಯೂಟ (ಶಿಶುವಿಹಾರ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ) ಬಿಸಿ ಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ (ಶಿಶುವಿಹಾರ ಶಾಲಾ ಮಕ್ಕಳಿಗೆ) * ಮಕ್ಕಳ ಆಟಿಕೆಗಳು (ಶಿಶುವಿಹಾರ ಶಾಲಾ ಮಕ್ಕಳಿಗೆ), ಆಸೀನರಾಗಲು ಮ್ಯಾಟ್ಗಳು (ಶಿಶುವಿಹಾರ ಶಾಲಾ ಮಕ್ಕಳಿಗೆ).
* ಉನ್ನತ ಶಿಕ್ಷಣ ಒದಗಿಸಲು ಸ್ಮಾರ್ಟ್ ತರಗತಿ ಮೂಲಕ ಶಿಕ್ಷಣದ ವ್ಯವಸ್ಥೆ, ಗಣಕಯಂತ್ರ ತರಬೇತಿ (ಕಂಪ್ಯೂಟರ್ ಲ್ಯಾಬ್). * ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಸೌಲಭ್ಯ. * ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿ (ಶೇ. 85%) ಪಡೆದ ವಿದ್ಯಾರ್ಥಿಗಳಿಗೆ ತಲಾ 25,000 ರೂ. ಪ್ರೋತ್ಸಾಹ ಧನ ನೀಡುವುದು.

* ದ್ವಿತೀಯ ಪಿ.ಯು.ಸಿ. ಯಲ್ಲಿ ಅತ್ಯುನ್ನತ ಶ್ರೇಣಿ (ಶೇ. 85%) ಪಡೆದ ವಿದ್ಯಾರ್ಥಿಗಳಿಗೆ ತಲಾ 35,000 ರೂ.ಗಳ ಪ್ರೋತ್ಸಾಹ ಧನ ನೀಡುವುದು. ಸಾರ್ವಜನಿಕರು ತಮ್ಮ ಮಕ್ಕಳಿಗೆ ಬಿಬಿಎಂಪಿ ಶಾಲೆ/ಕಾಲೇಜುಗಳಿಗೆ ಪ್ರವೇಶ ಪಡೆದುಕೊಂಡು ಬಿಬಿಎಂಪಿಯು ಶಿಕ್ಷಣಕ್ಕೆ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದ್ದಾರೆ.
Related


You Might Also Like
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ 34,500 ರೂ.ಗೆ ಏರಿಕೆ!
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8ನೇ ವೇತನ ಆಯೋಗದಲ್ಲಿ (8th Pay Commission) ತಮ್ಮ ಬೇಸಿಕ್ ಸಂಬಳದ ಭಾರಿ ಏರಿಕೆಯ ನಿರೀಕ್ಷೆಯಲ್ಲಿದ್ದಾರೆ. 8ನೇ ವೇತನ ಆಯೋಗದಲ್ಲಿ...
BMTC: 7ತಿಂಗಳಾದರೂ ಇನ್ನೂ ಜಾರಿಗೆ ಬರದ ಎಂಡಿ ಹೊರಡಿಸಿದ 1ರಂದೇ ವೇತನ ಪಾವತಿ ಆದೇಶ- ರಬ್ಬರ್ ಸ್ಟ್ಯಾಂಪಾದ ರಾಮಚಂದ್ರನ್!
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ನೌಕರರಿಗೆ ಪ್ರತಿ ತಿಂಗಳು 1ನೇ ತಾರೀಖಿನಂದು ವೇತನ ಪಾತಿಸಬೇಕು ಎಂದು ಫೆಬ್ರವರಿ ತಿಂಗಳ ವೇತನ ಮಾರ್ಚ್1ರಂದೆ ಜಮಾ ಮಾಡುವುದಾಗಿ ಹೇಳಿದ...
NWKRTC ಬಸ್-ಲಾರಿ ನಡುವೆ ಭೀಕರ ಡಿಕ್ಕಿ: ಇಬ್ಬರೂ ಚಾಲಕರಿಗೂ ಗಂಭೀರ ಗಾಯ
ಕಬ್ಬೂರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಚಾಲಕರು ಸೇರಿದಂತೆ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿರುವ ಘಟನೆ ಕಬ್ಬೂರ...
ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು: ಎರಡು ದಿನಗಳ ಮೈಸೂರು ಭೇಟಿಗಾಗಿ ಸೋಮವಾರ (ಸೆ.1) ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್...
ಕನಿಷ್ಠ 7500 ರೂ. ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: "ನಿಧಿ ಅಪ್ಕೆನಿಕಟ್" ಕಾರ್ಯಕ್ರಮದಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 29ನೇ ಬೃಹತ್ ಪ್ರತಿಭಟನಾ ಸಭೆ ಜರುಗಿತು. ಕನಿಷ್ಠ...
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ನಟಿ ರಾಧಿಕಾ ವಿಚಾರಣೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎರಡು...
ಇಂದು-ನಾಳೆ ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರವಾಸ: ಚಾಮುಂಡಿ ಬೆಟ್ಟಕ್ಕೂ ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದು ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಸ್ಥಳಗಳಿಗೆ ಪ್ರವಾಸ ಮಾಡಲಿದ್ದಾರೆ....
ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ: ಪೆಟ್ರೋಲ್ ಸುರಿದು ತನ್ನ ಲಿವ್ಇನ್ ಗೆಳತಿ ಸುಟ್ಟ ದುರುಳ
ಬೆಂಗಳೂರು: ತನ್ನ ಲಿವ್ ಇನ್ ಗೆಳತಿ ಮತ್ತೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ವ್ಯಕ್ತಪಡಿಸಿ ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ...