Please assign a menu to the primary menu location under menu

CrimeNEWSಸಿನಿಪಥ

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.

ವಿಜಿ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು, ಹೀಗಾಗಿ ಅವರನ್ನು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಾಳೆ ಅಂದರೆ ಜನವರಿ 16 ಬೆಳಗ್ಗೆ ಚಾಮರಾಜಪೇಟೆಯ ಟಿಆರ್‌ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ಖಚಿತೊಪಡಿಸಿವೆ.

ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಎಂಬ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪಾದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡ ನಟರಾಗಿದ್ದಾರೆ.

ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ಸರಿಗಮ ವಿಜಯ್​ ಅವರು ನಟರಾಗಿ ಎಂಟ್ರಿ ಕೊಟ್ಟರು.

ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಸಾಗಿದ ವಿಜಿ ಅವರು 2018ರ ಹೊತ್ತಿಗೆ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ವಿಜಿ ನಿವಾಸಕ್ಕೆ ಪಾರ್ಥಿವಾ ಶರೀರವವನ್ನು ತೆಗೆದುಕೊಂಡು ಬರಲಾಗುತ್ತದೆ. ಮಹಾಲಕ್ಷ್ಮೀಪುರಂನಲ್ಲಿರುವ ವಿಜಿ ನಿವಾಸಕ್ಕೆ ತಲಾಗುತ್ತಿದೆ. ಕುಟುಂಬಸ್ಥರು, ಸಂಬಂಧಿಕರು ಅಂತಿಮ ದರ್ಶನ ಪಡೆದ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಸಂಬಂಧ ಫಿಲಂ ಛೇಂಬರ್ ಅಧ್ಯಕ್ಷ ನರಸಿಂಹಲು ಕುಟುಂಬಸ್ಥರ ಜತೆ ಮಾತುಕತೆ ನಡೆಸಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ