KSRTC: ಮಾರ್ಗಮಧ್ಯದಲ್ಲಿ ಬಸ್ಗಳ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಚಾಲಕರು ದಂಡ ಕಟ್ಟಬೇಕಿಲ್ಲ- ಪಿಆರ್ಒ ಸುಮಲತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಯಾಂತ್ರಿಕ ಇಲಾಖೆ ಕೇಂದ್ರ ಕಚೇರಿಯಿಂದ ಅಶೋಕ ಲೈಲ್ಯಾಂಡ್, ಟಾಟಾ ಮತ್ತು ಏಷರ್ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ, ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸುವ ಕುರಿತು ಯಾವುದೇ ಸುತ್ತೋಲೆ/ ಆದೇಶಗಳನ್ನು ಹೊರಡಿಸಿರುವುದಿಲ್ಲ ಎಂದು ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಯಾಂತ್ರಿಕ ಅಭಿಯಂತರರಾದ ಎಚ್.ಸುಮಲತ ತಿಳಿಸಿದ್ದಾರೆ.
ಸಾಮಾನ್ಯವಾಗಿ ಮಾರ್ಗಮಧ್ಯದಲ್ಲಿ ಬಸ್ಗಳ ರಾಡ್ ಅಥವಾ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಅದರ ಎಲ್ಲ ವೆಚ್ಚವನ್ನು ಚಾಲಕರ ಮೇಲೆ ಘಟಕಗಳಲ್ಲಿ ಇರುವ ಅಧಿಕಾರಿಗಳು ಹಾಕಿ ಅವರ ವೇತನದಿಂದ ಹಣವನ್ನು ಕಟ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಸಂಸ್ಥೆಯ ನೌಕರರ ಕೋಲಾರ ನಿವಾಸಿ ಸಿ. ಶಂಕರಪ್ಪ ಎಂಬುವರು ಈ ಬಗ್ಗೆ ಮಾಹಿತಿ ಕೇಳಿದ್ದರು.
ಅವರು ಕೇಳಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕರು ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ವಾಹನದ ಅಂದರೆ ಚಾಲನೆಯಲ್ಲಿರುವ ಅಶೋಕ ಲೈಲಾಂಡ್, ಟಾಟಾ ಮತ್ತು ಏಸರ್ (ASHOK LEYLAND, TATA, EICHER) ಕಂಪನಿಯ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ ಮತ್ತು ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ (HANGER, FIRST AND SECOND BLADE) ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸಬೇಕಾದಂತಹ ಕೇಂದ್ರ ಕಚೇರಿಯಿಂದ ಹೊರಡಿಸಿರುವ ಆದೇಶ ಸುತ್ತೋಲೆ ಅಥವಾ ಸಾಮಾನ್ಯ ಸ್ಥಾಯಿ ಆದೇಶವನ್ನು ದೃಢೀಕರಿಸಿ ಮಾಹಿತಿ ಹಕ್ಕು ಅಧಿನಿಯಮ-2005ರ ಪ್ರಕಾರ ಮಾಹಿತಿ ನೀಡಿ ಎಂದು ಕೇಳಿದ್ದರು.
ಅದಕ್ಕೆ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಯಾಂತ್ರಿಕ ಅಭಿಯಂತರರಾದ ಸುಮಲತ ಅವರು ಈ ರೀತಿ ಉತ್ತರ ನೀಡಿದ್ದಾರೆ. ಅಂದರೆ ಇಲ್ಲಿ ಘಟಕ ಮಟ್ಟದ ಅಧಿಕಾರಿಗಳು ಚಾಲಕರನ್ನು ಹುರಿದು ಮುಕ್ಕುವುದನ್ನೆ ಅಭ್ಯಾಮಾಡಿಕೊಂಡಿದ್ದು, ಇದಕ್ಕೆ ಬಹುತೇಕ ಡಿಸಿಗಳು ಕೂಡ ಸಾಥ್ ನೀಡುತ್ತಿರುವುದು ಗುಟ್ಟಾಗೇನು ಉಳಿದಿಲ್ಲ.
ಆದರೂ ಕೂಡ ಈ ಭ್ರಷ್ಟರ ವಿರುದ್ದ ಮೇಲಧಿಕಾರಿಗಳು ಅಂದರೆ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಭದ್ರತಾ ಜಾಗೃತಾಧಿಕಾರಿಗಳು ಕೂಡ ನಮಗೇನು ಗೊತ್ತಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇನ್ನು ಸಾರಿಗೆ ಸಚಿವರ ಗಮನಕ್ಕೆ ಇಂಥ ವಿಷಯಗಳನ್ನು ಈ ಅಧಿಕಾರಿಗಳೆ ಮುಟ್ಟಿಸಬೇಕಿದೆ. ಆದರೆ ಈ ಭ್ರಷ್ಟ ಅಧಿಕಾರಿಗಳು ಸಚಿವರ ಹತ್ತಿರಕ್ಕೂ ಈ ವಿಷಯ ಸುಳಿಯದ ರೀತಿ ನೋಡಿಕೊಳ್ಳುವುದರಿಂದ ಸಚಿವರು ಕೂಡ ಏನು ಕ್ರಮ ತೆಗೆದುಕೊಳ್ಳಲಾಗುವುದಿಲ್ಲ.
ಒಟ್ಟಾರೆ ಈ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಎಷ್ಟೋ ವಿಷಯಗಳನ್ನು ತಿಳಿಸದೆ ಡಿಪೋಗಳು ಮತ್ತು ವಿಭಾಗೀಯ ಮಟ್ಟದಲ್ಲೇ ನಿಯಮಬಾಹಿರವಾಗಿ ನೌಕರರಿಂದ ಲಂಚ ವಸೂಲಿ ಮಾಡುವುದರಲ್ಲಿ ಈ ರೀತಿ ದಂಡ ಕಟ್ಟಿಸುವುರಲ್ಲೇ ಬಹುತೇಕ ಅಧಿಕಾರಿಗಳು ನಿರತರಾಗಿದ್ದಾರೆ. ಇದು ಸಾಮಾನ್ಯ ನೌಕರರಿಗೆ ಭಾರಿ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ ಸಚಿವರು ಹಾಗೂ ಎಂಡಿಗಳು ಈ ಬಗ್ಗೆ ಗಮನಹರಿಬೇಕಿದೆ.

Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...