Please assign a menu to the primary menu location under menu

CrimeNEWSದೇಶ-ವಿದೇಶಸಿನಿಪಥ

ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು ಈಗಾಗಲೇ ಶಂಕಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಅವರು ಮನೆಯಲ್ಲಿ ಮಲಗಿದ್ದಾಗ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಸೈಫ್‌ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್‌ ಮತ್ತು ಇಬ್ಬರೂ ಮಕ್ಕಳು ಸೇಫ್‌ ಆಗಿದ್ದಾರೆ.

ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಲೇ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನಟನ ನಿವಾಸಕ್ಕೆ ತಡರಾತ್ರಿ ದುಷ್ಕರ್ಮಿಗಳು ನುಗ್ಗಿದ್ದು, ಈ ವೇಳೆ, ದರೋಡೆಕೋರನಿಗೆ ಪ್ರತಿರೋಧ ತೋರುವಾಗ ಚಾಕುವಿನಿಂದ ಇರಿದಿದ್ದಾರೆ. ಸೈಫ್ ಕುತ್ತಿಗೆ, ಕೈ ಸೇರಿ 6 ಕಡೆ ಗಾಯವಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಹೆಚ್ಚು ರಕ್ತಸ್ರಾವ ಆಗಿರುವ ಹಿನ್ನೆಲೆ ಕೂಡಲೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ನಡೆದಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿ ಕರೀನಾ ಕಪೂರ್ ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ?: ದುಷ್ಕರ್ಮಿಗಳು ಚಾಕುವಿನಿಂದ ಇರಿದ ವೇಳೆ ಪತ್ನಿ ಕರೀನಾ ಕಪೂರ್ ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಜ.15ರಂದು ಮನೆಯಲ್ಲಿ ಸೈಫ್ ಅಲಿ ಖಾನ್ ಮತ್ತು ಕೆಲಸಗಾರರು ಅಷ್ಟೇ ಮನೆಯಲ್ಲಿದ್ದರು. ದುಷ್ಟರ್ಮಿಗಳು ನಟನ ಮೇಲೆ ಅಟ್ಯಾಕ್ ಮಾಡಿದ ಸಂದರ್ಭದಲ್ಲಿ ಕರೀನಾ ಕಪೂರ್ ಮತ್ತು ಮಕ್ಕಳು ಮನೆಯಲ್ಲಿ ಇರಲಿಲ್ಲ.

ಈ ಸಂದರ್ಭದಲ್ಲಿ ಕರೀನಾ ಕಪೂರ್ ಅವರು ಸಹೋದರಿ ಕರೀಷ್ಮಾ ಕಪೂರ್ ಹಾಗೂ ರಿಯಾ, ಸೋನಂ ಜತೆ ಪಾರ್ಟಿಗೆ ತೆರಳಿದ್ದರು. ಪಾರ್ಟಿ ಮಾಡುತ್ತಿರುವ ಫೋಟೋವನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ‘ಗರ್ಲ್ಸ್ ನೈಟ್ ಇನ್’ ಎಂದು ಅಡಿಬರಹ ನೀಡಿದ್ದಾರೆ. ಹಾಗಾಗಿ ದರೋಡೆಕೋರರ ಹಲ್ಲೆಯಿಂದ ಅವರು ಬಚಾವ್ ಆಗಿದ್ದಾರೆ. ಕರೀನಾ ಮತ್ತು ಮಕ್ಕಳಿಬ್ಬರು ಹೀಗೆ ಸೇಫ್‌ ಆಗಿದ್ದಾರೆ.

Leave a Reply

error: Content is protected !!
LATEST
ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ...