Please assign a menu to the primary menu location under menu

CrimeNEWSನಮ್ಮಜಿಲ್ಲೆ

ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೀದರ್: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್‌ ಸಿಬ್ಬಂದಿ ಮೇಲೆ ಫೈರಿಂಗ್‌ ಮಾಡಿ   ಸಿಬ್ಬಂದಿಯನ್ನು ಹತ್ಯೆಮಾಡಿ, ಜತೆಗೆ ಹಾಡಹಗಲೇ ಸುಮಾರು 93 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಹೈದರಾಬಾದ್‌ನಲ್ಲಿ ಪೊಲೀಸರಿಗೆ ಬಂಧಿಸಿದ್ದಾರೆ.

ಗುರುವಾರ ಬೆಳಗ್ಗೆ ಬೀದರ್‌ನಲ್ಲಿ ಇಬ್ಬರು ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಗುಂಡುಹಾರಿಸಿ,  93 ಲಕ್ಷ ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಅವರಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟಿದು ಮತ್ತೊಬ್ಬ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಗುಂಡಿನ ದಾಳಿಗೆ ಒಳಗಾದ  ಶಿವಾ ಎಂಬಾತನನ್ನು ಹೈದ್ರಾಬಾದ್ ಕೇರ್‌  ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನು ಬೀದರ್ ರೀತಿಯಲ್ಲೇ ಹೈದ್ರಾಬಾದ್‌ನಲ್ಲೂ ಫೈರಿಂಗ್‌ ಮಾಡಿ ಅಟ್ಟಹಾಸ ಮೆರೆದಿದ್ದರು. ಈ ವೇಳೆ ಇಬ್ಬರೂ ಆರೋಪಿಗಳನ್ನು ಹೈದರಾಬಾದ್‌ನ ಅಫ್ಜಲ್‌ಗಂಜ್‌ ಪೊಲೀಸರು ಬಂಧಿಸಿದ್ದಾರೆ.

ಖದೀಮರು ಛತ್ತೀಸಗಢಗೆ ಹೋಗುವ ತಯಾರಿಯಲ್ಲಿದ್ದರು. ಖಾಸಗಿ ಟ್ರಾವೆಲರ್‌ ಬಳಿಯೂ ಗುಂಡು ಹಾರಿಸಿದ್ದರು. ಹೈದರಾಬಾದ್‌ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಖಾಸಗಿ  ಟ್ರಾವೆಲ್‌  ಸಂಸ್ಥೆಯಲ್ಲಿ ವ್ಯವಸ್ಥಾಪಕನಿಗೆ ಗುಂಡುಹಾರಿಸಿ ಪರಾರಿಯಾಗಲು ಎತ್ನಿಸಿದ ವೇಳೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ಇನ್ನು ಖದೀಮರ ಗುಂಡೇಟಿನಿಂದ  ಗಾಯಗೊಂಡಿರುವ ಖಾಸಗಿ  ಟ್ರಾವೆಲ್‌  ಸಂಸ್ಥೆಯಲ್ಲಿ ವ್ಯವಸ್ಥಾಪಕರಿಗೆ  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...