Please assign a menu to the primary menu location under menu

CrimeNEWSಸಿನಿಪಥ

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ತಡರಾತ್ರಿ ಮನೆಗೆ ನುಗ್ಗಿ ನಟನಿಗೆ ಇರಿದಿದ್ದ ಹಂತಕನ ಹೆಡೆಮುರಿ ಕಟ್ಟಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದಿದ್ದ ದಾಳಿಕೋರನನ್ನು ನಿನ್ನೆ (ಜ.16) ತಡರಾತ್ರಿ ಮುಂಬೈ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸೈಫ್‌ ಮೇಲಿನ ಅಟ್ಯಾಕ್‌ ಬೆನ್ನಲ್ಲೇ ದಾಳಿಕೋರನ ಹುಡುಕಲು ಪೋಲಿಸರು 20 ತಂಡ ರಚಿಸಿ ಬಲೆ ಬೀಸಿದ್ದರು.

ಕೊನೆಗೂ ದಾಳಿಕೋರ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಕೊಂಡಿದ್ದು, ಈಗ ಈತ ದರೋಡೆ ಮಾಡಲು ಈ ಕೃತ್ಯ ಎಸಗಿದ್ದ ಅಥವಾ ಕೊಲೆ ಮಾಡುವ ಹುನ್ನಾರ ಇತ್ತಾ ಎಂಬುದನ್ನು ತಿಳಿಯಲು ವಿವಿಧ ರೀತಿಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಬಂಧಿತನಾಗಿರುವ ಆರೋಪಿ ಈ ಹಿಂದೆ ಶಾರುಖ್ ಖಾನ್ ಮನೆ ಮುಂದೆ ಕೂಡ ಕಾಣಿಸಿಕೊಂಡಿರೋದು ಗೊತ್ತಾಗಿದೆ. ನಿನ್ನೆ ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು.

ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ, ಬ್ಯಾಗ್‌ವೊಂದನ್ನು ಹಾಕಿಕೊಂಡಿದ್ದು, ಕಿತ್ತಳೆ ಬಣ್ಣದ ಸ್ಕಾಫ್ ಧರಿಸಿ, ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವಾಗ ಸಿಟಿಟಿವಿ ಕ್ಯಾಮೆರಾ ನೋಡಿದ್ದು, ವಿಡಿಯೋನಲ್ಲಿ ಸೆರೆಯಾಗಿದೆ.

ಸೈಫ್ ಅಲಿಖಾನ್ ಮನೆಯಲ್ಲಿ ಅಡುಗೆ ಮಾಡುವವರಲ್ಲಿ ಒಬ್ಬರಾದ ಎಲಿಯಾಮಾ ಫಿಲಿಪ್ಸ್ ಅಲಿಯಾಸ್ ಲಿಮಾ, ಶಂಕಿತನನ್ನು ಮೊದಲು ನೋಡಿದ್ದರಂತೆ. ದುಷ್ಕರ್ಮಿಯನ್ನು ನೋಡಿದ ಕೂಡಲೇ ಭಯದಲ್ಲಿ ಜೋರಾಗಿ ಕಿರುಚಿದ್ದಾರೆ. ಇದರಿಂದ ಎಚ್ಚರಗೊಂಡ ಸೈಫ್, ಹಂತಕನನ್ನ ಒಳ ನುಗ್ಗದಂತೆ ತಡೆಯಲು ಹೋರಾಡಿದ್ದಾರೆ.

ಈ ವೇಳೆ ಹಂತಕ 6 ಬಾರಿ ಇರಿದು, ಎಡಗೈ ಮತ್ತು ಗುತ್ತಿಗೆ ಭಾಗವನ್ನು ಗಾಯಗೊಳಿಸಿದ್ದಾನೆ. ಹಂತಕ ಒಳ ನುಗ್ಗಲು ಪ್ರಯತ್ನಿಸಿದಾಗ ನಿನಗೇನು ಬೇಕು ಎಂದು ಕೇಳಲಾಗಿತ್ತಂತೆ. ಆಗ 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಇಬ್ಬರು ಮನೆಯ ಸಹಾಯಕರೂ ಕೂಡ ಗಾಯಗೊಂಡಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...