Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ. ದೇಶದ ರೈತರೆಲ್ಲ ಅವರ ಪ್ರಾಣದ ಬಗ್ಗೆ ಆತಂಕಗೊಂಡಿದ್ದರು ಎಂದು ರೈತರತ್ನ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.

ಇಂದು (ಜ.20) ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆ ರಾಷ್ಟ್ರೀಯ ಸಂಚಾಲಕ ಜಗಜಿತ್ ಸಿಂಗ್ ದಲೈವಾಲ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ, ಈ ನಡುವೆಯೂ ನಮ್ಮ ಬೇಡಿಕೆ ಈಡೆರುವ ತನಕ ಚಳವಳಿ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು ಅಧಿಕಾರಿಗಳ ತಂಡ ಚಳವಳಿ ನಡೆಯುತ್ತಿರುವ ಕನೋರಿ ಬಾರ್ಡರ್‌ಗೆ ಮೂರು ದಿನಗಳ ಹಿಂದೆ ತೆರಳಿ ಫೆಬ್ರವರಿ 14 ರಂದು ಚಂಡಿಗಡದಲ್ಲಿ ರೈತರ ಸಮಸ್ಯೆಗಳಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ಕೇಂದ್ರ ಸರ್ಕಾರದ ಲಿಖಿತ ಪತ್ರ ನೀಡಿ 3 ಗಂಟೆಗಳ ಕಾಲ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗಿದೆ.

ಇದು ಉಪವಾಸ ನಿರತ ದಲೈವಾಲ ನಿರ್ಧಾರ ರೈತರ ಹೋರಾಟದ ಶಕ್ತಿ ಹೆಚ್ಚಿಸಿದೆ. ಕಳೆದ ಮೂರು ದಿನಗಳಿಂದ 124 ರೈತರು ದಲೈವಾಲ ಉಪವಾಸ ಬೆಂಬಲಿಸಿ ನಾವು ಪ್ರಾಣ ತ್ಯಾಗಕ್ಕೆ ಸಿದ್ದ ಎಂದು ಉಪವಾಸ ಆರಂಭಿಸಿದರು. ಅವರು ಸಹ ಉಪವಾಸವನ್ನು ನಿನ್ನೆಯಿಂದ ಕೈಬಿಟ್ಟಿದ್ದಾರೆ. ಆದರೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ಮುಂದುವರಿಯುತ್ತದೆ ಎಂದರು.

ಜನವರಿ 26 ರಂದು ದೇಶಾದ್ಯಂತ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಕರೆ ನೀಡಲಾಗಿದೆ, ಅದರಂತೆ ರಾಜ್ಯದಲ್ಲಿಯೂ ತಾಲೂಕು ಜಿಲ್ಲಾ ಮಟ್ಟದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಾಗುವುದು. ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ಕಳೆದುಕೊಂಡ ಸ್ವತಂತ್ರ ಹೋರಾಟಗಾರರ ದೇಶದ ಗಡಿಯಲ್ಲಿ ಗಡಿ ರಕ್ಷಣೆಗಾಗಿ ಹುತಾತ್ಮರಾದ. ದೇಶದ ಜನರ ಆಹಾರ ಭದ್ರತೆಯಾಗಿ ದುಡಿದು ಹುತಾತ್ಮರಾದ ರೈತರ ನೆನಪಿನ ದಿನ ರಾಜ್ಯಮಟ್ಟದಲ್ಲಿ 30 ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ವಿಶ್ವ ಕಪ್ ಗೆದ್ದು ಜಯಭೇರಿ: ವಿಶ್ವಕಪ್ ಖೋ ಖೋ ಪಂದ್ಯದಲ್ಲಿ ವಿಶ್ವ ಕಪ್ ಗೆದ್ದು ಜಯಭೇರಿ ಬಾರಿಸಿದ ಪುರುಷ. ಮಹಿಳೆಯರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಮಹಿಳೆಯರ ಭಾರತ ತಂಡದಲಿ ಉತ್ತಮ ಆಟ ಆಡುವ ಮೂಲಕ ಪ್ರಶಸ್ತಿಗೆ ಬಾಜನರಾಗಿರುವ ನಮ್ಮ ರಾಜ್ಯದ ಹಿರಿಮೆ ಹೆಚ್ಚಿಸಿದ ನಮ್ಮ ಊರಿನ ಚೈತ್ರಳಿಗೆ ಅಭಿನಂದನೆ ಸಲ್ಲಿಸುತ್ತೇನೆ.

ರಾಜ್ಯ ಸರ್ಕಾರ ಅಭಿನಂದನೆ ಹೇಳಿದರೆ ಸಾಲದು. ಇಂಥ ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡಲು ಮುಂದಾಗಬೇಕು. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಲ್ಲಿನ ಕ್ರೀಡಾಪಟುಗೆ 3 ಕೋಟಿ ರೂಪಾಯಿ ಪ್ರೋತ್ಸಾಹ ಧನ ನೀಡುವ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ತಿ.ನರಸೀಪುರ ತಾಲೂಕಿನ ಸರ್ವ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ನಾಳೆ ಚೈತ್ರಳನ್ನು ಅಭೂತಪೂರ್ವ ಸ್ವಾಗತ ನೀಡಿ ಅಭಿನಂದನಾ ಸಮಾರಂಭ ನಡೆಸಲಾಗುತಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವನೂರು ವಿಜಯೇಂದ್ರ, ಸಾತಗಳ್ಳಿ ಬಸವರಾಜು, ಹಳ್ಳಿಕೆರೆಹುಂಡಿ ಪ್ರಭುಸ್ವಾಮಿ, ಕುರುಬೂರ್ ಪ್ರದೀಪ್, ವಾಜಮಂಗಲ ನಾಗೇಂದ್ರ ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ