ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿರುವುದು ಲಿಂಗಸುಗೂರಿನ ಬನ್ನಿಗೋಳ ಬಳಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಗೋಳ ಗ್ರಾಮದ ಬಳಿ ನಡೆದ ಅವಘಡದಲ್ಲಿ ಶ್ರೀದೇವಿ (19) ಎಂಬ ಯುವತಿ ಮೃತಪಟ್ಟಿದ್ದಾರೆ.
ಬನ್ನಿಗೋಳ ಗ್ರಾಮದ ಕೂಲಿಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ಕೂಲಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಬಸ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ, ಈ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಈ ಅಪಘಾತದಿಂದ ಟ್ರ್ಯಾಕ್ಟರ್ನಲ್ಲಿದ್ದ ಯುವತಿ ಶ್ರೀದೇವಿ ಸ್ಥಳದಲ್ಲೇ ಅಸುನೀಗಿದ್ದಾರೆ. ಡಿಕ್ಕಿಯಾದ ಬಸ್ ಪಕ್ಕದ ಜಮೀನಿಗೆ ಹೋಗಿ ನಿಂತಿದೆ.
ಇನ್ನು ಅವಘಡದಿಂದಾಗಿ ಬಸ್ ಹಾಗೂ ಟ್ರ್ಯಾಕ್ಟರ್ನಲ್ಲಿದ್ದ 18 ಜನರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುರಿಸಲಾಗಿದೆ.
ಅಪಘಾತ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.