ಬೆಂಗಳೂರು: ಕನ್ನಡಕ್ಕೆ ಅನೇಕ ಕವಿತೆಗಳು, ನಾಟಕಗಳು, ಸಾಹಿತ್ಯಗಳನ್ನು ಕೊಡುಗೆಯಾಗಿ ನೀಡಿದ್ದ ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ಇವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಎಚ್ಎಸ್‌ವಿ ಅಂತಲೇ ಚಿರಪರಿಚಿತರಾಗಿದ್ದ ಎಚ್.ಎಸ್.ವೆಂಕಟೇಶಮೂರ್ತಿ ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ಎಚ್.ಎಸ್. ವೆಂಕಟೇಶಮೂರ್ತಿ ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿದ್ದರು.
ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ.
ಗಣ್ಯರ ಸಂತಾಪ: ಎಚ್.ಡಿ.ಕುಮಾರಸ್ವಾಮಿ ಸಂತಾಪ: ಕನ್ನಡದ ಸಾರಸ್ವತ ಲೋಕದ ಸುಪ್ರಸಿದ್ಧ ಕವಿಗಳಾದ ಎಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ಗದ್ಯ, ಕಾವ್ಯ, ನಾಟಕ, ಚಿತ್ರಗೀತೆ ಸೇರಿ ಅಕ್ಷರ ಜಗತ್ತಿಗೆ ಅನೇಕ ಆಯಾಮಗಳಲ್ಲಿ ಕನ್ನಡಕ್ಕೆ ಚಿರಸ್ಮರಣೀಯ ಕೊಡುಗೆ ನೀಡಿರುವ ಎಚ್ಎಸ್‌ವಿ ಅವರ ಅಗಲಿಕೆ ಬಹುದೊಡ್ಡ ನಷ್ಟ.
‘ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು..’ ದಂತಹ ಅನನ್ಯ ಭಾವಗೀತೆಯನ್ನು ರಚಿಸಿರುವ ಅವರನ್ನು ಮರೆಯಲು ಸಾಧ್ಯವೇ? ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ: ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಡಿಸಿಎಂ ಡಿಕೆಶಿ ಸಂತಾಪ: ನಗುತ ಹುಟ್ಟಿ ನಗುತ ಮುಗಿವ ನಗುವ ಹೂವೆ ಮಾದರಿ – ಎಚ್ಚೆಸ್ವಿ, ಭಾವಗೀತೆಗಳ ಮೂಲಕ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿದ ಹಿರಿಯ ಕವಿ ಎಚ್ಚೆಸ್ವಿ ಎಂದೇ ಜನಜನಿತರಾಗಿದ್ದ ಎಚ್.ಎಸ್.ವೆಂಕಟೇಶಮೂರ್ತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು.
ಕಾದಂಬರಿ, ಕತೆ, ವಿಮರ್ಶೆ, ಕವನ, ಮಕ್ಕಳ ಸಾಹಿತ್ಯ, ಸಿನಿಮಾ ಸಾಹಿತ್ಯ, ರಂಗಭೂಮಿ ಹೀಗೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲೂ ಎಚ್ಚೆಸ್ವಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಅಪಾರ ಅಭಿಮಾನಿ ವರ್ಗಕ್ಕೆ, ಕುಟುಂಬಕ್ಕೆ, ಆಪ್ತರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಭಾವಗಳ ಕವಿಗೆ ಭಾವಪೂರ್ಣ ವಿದಾಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸಚಿವ ಎಚ್.ಸಿ.ಮಹದೇವಪ್ಪ ಸಂತಾಪ: ಕನ್ನಡದ ಖ್ಯಾತ ಕವಿಗಳು, ನಾಟಕ ರಚನೆಕಾರರು, ಸಾಹಿತಿಯಾಗಳೂ ಆಗಿದ್ದ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರು ನಿಧನ ಹೊಂದಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು.
ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ದೊರೆಯಲಿ ಎಂದು ಈ ವೇಳೆ ಪ್ರಾರ್ಥಿಸುವೆನು ಎಂದು ಸಚಿವ ಎಚ್.ಸಿ.ಮಹದೇವಪ್ಪ ಸಂತಾಪ ಸೂಚಿಸಿದ್ದಾರೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...