Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ₹1.50 ಕೋಟಿ ರೂ. ಅಪಘಾತ ಪರಿಹಾರ- ಜ.26ರಿಂದಲೇ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಅಪಘಾತದಿಂದ ಅಸುನೀಗಿದರೆ ಅವರ ಅವಲಂಬಿತರಿಗೆ ಬರೋಬ್ಬರಿ 1.50 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡುವ ಯೋಜನೆ ಭಾನುವಾರದಿಂದ (ಜ.26) ಜಾರಿಗೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಅವಲಂಬಿತರಿಗೆ 50 ಲಕ್ಷ ರೂಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.

ಈ ಪರಿಹಾರದಲ್ಲಿ ತಾರತಮ್ಯತೆ ಇದೆ ಎಂದು ನಿಮ್ಮ ವಿಜಯಪಥ ಸೇರಿದಂತೆ ಕೆಲ ಮಾಧ್ಯಮಗಳಲ್ಲೂ ಸುದ್ದಿ ಬಿತ್ತರವಾಗಿತ್ತು. ಈ ಎಲ್ಲವುಗಳನ್ನು ಮನಗಂಡು ನಾವು ಇದೀಗ ಬಿಎಂಟಿಸಿ ನೌಕರರಿಗೆ 1.50 ಕೋಟಿ ರೂಪಾಯಿ ಅಪಘಾತ ವಿಮೆ ನೀಡಲು ಸಂಸ್ಥೆಯಿಂದ ತೀರ್ಮಾನ ತೆಗೆದುಕೊಂಡಿದ್ದೇವೆ. ಮುಂದೆ ಇದು ಉಳಿದ ಸಾರಿಗೆಯ ಮೂರು ನಿಗಮಗಳಿಗೂ ಅನ್ವಯವಾಗುವ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ದೇಶದಲ್ಲಿ ಯಾವುದೇ ಸರ್ಕಾರಿ ನೌಕರರಿಗೂ ಈ ಸೌಲಭ್ಯವಿಲ್ಲ, ಸೇನೆಯಲ್ಲಿ ಸೇವೆ ಸಲ್ಲಿಸುವ ಯೋಧರು‌ ಕೂಡ ಪ್ರಾಣ ಕಳೆದುಕೊಂಡರೆ ಅವರ ಕುಟುಂಬದವರಿಗೆ 60 ಲಕ್ಷ ರೂಪಾಯಿ ನೀಡಲಾಗುತ್ತದೆ. ಆದರೆ, ಬಿಎಂಟಿಸಿ ನೌಕರರು ಅಪಘಾತದಲ್ಲಿ ಅಸುನೀಗಿದರೆ ಅವರಿಗೆ ಒಂದೂವರೆ ಕೋಟಿ ರೂ. ನೀಡಲಾಗುತ್ತದೆ. ಇದು ನೌಕರರ ಅವಲಂಭಿತರ ಆರ್ಥಿಕ ಸಮಸ್ಯೆ ನೀಗಿಸಲಿದೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಈ ವಿಮೆ ಸೌಲಭ್ಯ ಜಾರಿ ಮಾಡಲಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಈ ವಿಮಾ ಸೌಲಭ್ಯ ದೊರೆಯಲಿದೆ. ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಅಥವಾ ಇಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ1.50 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ತಿಳಿಸಿದ್ದಾರೆ.

ಸಹಜ ಸಾವಿನ ಪರಿಹಾರದ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ: ಬಿಎಂಟಿಸಿ ಸಿಬ್ಬಂದಿ ಸಹಜವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಈ ಹಿಂದೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಒಟ್ಟಿನಲ್ಲಿ ಹಗಲು ರಾತ್ರಿ ತಮ್ಮ ಪ್ರಾಣದ ಹಂಗು ತೊರೆದು ಡ್ಯೂಟಿ ಮಾಡುವ ಚಾಲಕ, ನಿರ್ವಾಹಕರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದೂವರೆ ಕೋಟಿ ರುಪಾಯಿ ಪರಿಹಾರ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ಸಾರಿಗೆ ನೌಕರರ ಎಲ್ಲ ಸಂಘಟನೆಗಳ ಮುಖಂಡರು ಶ್ಲಾಘಿಸಿದ್ದಾರೆ.

---------------------- -------------------

ವಿಜಯಪಥ  ಸಂಪಾದಕರಾದ ದೇವರಾಜು 

  • ವಿಜಯಪಥ ಕನ್ನಡದ ಜನಪ್ರಿಯ ಸುದ್ದಿ ವೆಬ್‌ಸೈಟ್ ಆಗಿದ್ದು, ರಾಜ್ಯ ಮತ್ತು ದೇಶದಲ್ಲಿ ನಡೆಯುವ ಪ್ರಮುಖ ಸುದ್ದಿಗಳನ್ನು ಒದಗಿಸುತ್ತದೆ. ಈ ವೆಬ್‌ಸೈಟ್‌ನ ಸಂಪಾದಕರಾಗಿರುವ ದೇವರಾಜು ಅವರು ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸ್ಥಾನವನ್ನು ಹೊಂದಿದ್ದಾರೆ.
  • ದೇವರಾಜು  ಅವರ ಕೊಡುಗೆಗಳು:
* ಸುದ್ದಿ ವರದಿಗಾರಿಕೆ: ದೇವರಾಜು ಅವರು ವಿವಿಧ ಕ್ಷೇತ್ರಗಳಲ್ಲಿ ಸುದ್ದಿಗಳನ್ನು ಸಂಗ್ರಹಿಸಿ, ವಿಶ್ಲೇಷಿಸಿ, ಪ್ರಕಟಿಸುವ ಮೂಲಕ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಳೆದ 18 ವರ್ಷಗಳಿಂದಲೂ ಗಣನೀಯ ಕೊಡುಗೆ ನೀಡಿದ್ದಾರೆ. ಮೈಸೂರಿನ ಪ್ರಾದೇಶಿಕ ಪತ್ರಿಕೆಗಾಳಾದ ಮೈಸೂರು ಮಿತ್ರ, ಪ್ರಜಾನುಡಿ ಹಾಗೂ ರಾಜ್ಯ ಪತ್ರಿಕೆಗಳಾದ ಹೊಸದಿಗಂತ, ವಿಜಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಹಾಗೂ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿರುವ ಇವರು 2019ರ ನವೆಂಬರ್‌ 1ರಂದು ವಿಜಯಪಥ ಕನ್ನಡದ ಜನಪ್ರಿಯ ಸುದ್ದಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ನಿರಂತವರಾಗಿ ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಕಾರಣರಾಗಿದ್ದಾರೆ. * ಕನ್ನಡ ಪತ್ರಿಕೋದ್ಯಮದ ಬೆಳವಣಿಗೆ: ವಿಜಯಪಥದ ಮೂಲಕ ಕನ್ನಡ ಭಾಷೆಯಲ್ಲಿ ಗುಣಮಟ್ಟದ ಸುದ್ದಿಗಳನ್ನು ಒದಗಿಸುವ ಮೂಲಕ ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಕಾರಣರಾಗಿದ್ದಾರೆ. * ಸಾಮಾಜಿಕ ಜವಾಬ್ದಾರಿ: ಸಮಾಜದ ವಿವಿಧ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ವಿಜಯಪಥದ ಮೂಲಕ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ KPSC ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜ.31-ಫೆ.2ರಂದು ಹೆಚ್ಚುವರಿ ಸರ್ಕಾರಿ ಬಸ್‌ ಬಿಡಲು ಮನವಿ ಮೈಕ್ರೋ ಫೈನಾನ್ಸ್ ಹಾವಳಿಗೆ ಹೆದರಿ ಜನ ಆತ್ಮಹತ್ಯೆಗೆ ಶರಣು: ವಿಪಕ್ಷ ನಾಯಕ ಅಶೋಕ್ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ FIR ದಾಖಲಿಸಿ: ತುಷಾರ್ ಗಿರಿನಾಥ್