NEWSದೇಶ-ವಿದೇಶ

ಸರ್ಕಾರಿ ನೌಕರರ ನಿವೃತ್ತಿ ವೇತನದಲ್ಲಿ ಕಡಿತವಿಲ್ಲ

ಕೆಲ ಮಾಧ್ಯಮಗಳಲ್ಲಿ ಬಂದ ವರಿದಿಯಲ್ಲಿ ಸತ್ಯವಿಲ್ಲl ಕೇಂದ್ರ ವಿತ್ತ ಸಚಿವಾಲಯ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವಮಾರಿ ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ, ಸರ್ಕಾರದ ಬೊಕ್ಕಸಕ್ಕೆ ಉಂಟಾಗುತ್ತಿರುವ ನಷ್ಟವನ್ನು ಸ್ವಲ್ಪ ಮಟ್ಟಿಗೆ ಇಳಿಸಿಕೊಳ್ಳಲು  ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ) ಕಡಿತಗೊಳಿಸಲಿದೆ ಎಂಬುವುದು ಶುದ್ಧಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸರ್ಕಾರಿ ನೌಕರರ ಪಿಂಚಣಿ ಕಡಿತ ಮಾಡುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದುದು ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವಾಲಯ,ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು  ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ. ನಮ್ಮ ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲಎಂದು ಹೇಳಿದೆ.

ಎನ್‌ಎಸ್‌ಎಪಿ ಪ್ರಕಾರ, 80 ವರ್ಷ ಮೇಲ್ಪಟ್ಟವರಿಗೆ ಸಿಗಲಿರುವ ಪಿಂಚಣಿ ಮೊತ್ತದಲ್ಲಿ ಕಡಿತ ಮಾಡಲಾಗಿದೆ. ಉಳಿದವರಿಗೂ ಇದು ಅನ್ವಯವಾಗಬಹುದು, ಜವಾನ(peon) ನಿಂದ ಮಾಜಿ ರಾಷ್ಟ್ರಪತಿಗಳ ತನಕ ಎಲ್ಲರ  ಪಿಂಚಣಿ ಮೊತ್ತವೂ ಕಡಿತ ಎಂಬ ಸುದ್ದಿಯನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದ್ದರಿಂದ ಗೊಂದಲ ಉಂಟಾಗಿತ್ತು. ಏಪ್ರಿಲ್ 6ರಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಂಸದರ ಸಂಬಳದಲ್ಲಿ ಶೇ. 30ರಷ್ಟು ಕಡಿತಗೊಳಿಸುವ ಬಗ್ಗೆ ಮಾತ್ರ ನಿರ್ಣಯ ಕೈಗೊಳ್ಳಲಾಯಿತು ಎಂದು ಪಿಐಬಿ  ಕೂಡಾ ಸ್ಪಷ್ಟಪಡಿಸಿದೆ.

ಹೀಗಾಗಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವೇತನದಲ್ಲಿ ಕಡಿತವಾಗಬಹುದು ಎಂಬ ಆತಂಕದಲ್ಲಿರುವ ಉದ್ಯೋಗಿಗಳು ಭಯಪಡದೇ ನಿರಾಳರಾಗಿರಿ ಎಂದು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್‌ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ