Please assign a menu to the primary menu location under menu

NEWSನಮ್ಮಜಿಲ್ಲೆ

110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಇರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫೆಬ್ರವರಿ ಅಂತ್ಯದೊಳಗಾಗಿ ನೀರು ಒದಗಿಸಿ: ಥಣಿಸಂದ್ರ ಹಾಗೂ ಹೆಗ್ಡೆ ನಗರಕ್ಕೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಕಾವೇರಿ ನೀರು ಎಲ್ಲಾ ಕಡೆ ಸಿಗುವಂತೆ ಮಾಡಬೇಕು. ಈ ಸಂಬಂಧ ಕಮಿಷನ್ ಮಾಡಿ ಟೆಸ್ಟಿಂಗ್ ಮಾಡಬೇಕು. ನೀರು ಸೋರಿಕೆಯಾಗುವುದನ್ನು ಗುರುತಿಸಿ ಫೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ನೀಡಲು ಸೂಚನೆ ನೀಡಲಾಯಿತು. ಅಲ್ಲದೇ ಸದರಿ ಪ್ರದೇಶಗಳಿಗೆ ವೇಳಾ ಪಟ್ಟಿ ಸಿದ್ದಪಡಿಸಿ ನಿಗದಿತ ಸಮಯದಲ್ಲಿ ನೀರು ಸರಬರಾಜು ಮಾಡಲು ಸೂಚಿಸಿದರು.

ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ: ಟೆಲಿಕಾಂ ಲೇಔಟ್ ಬಳಿ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಲು ಕೇಳಿದ್ದಕ್ಕೆ, ಖಾಲಿ ಜಾಗಗಳಿಗೆ ನೋಟೀಸ್ ನೀಡಿ ಸ್ವಚ್ಛ ಮಾಡಬೇಕು. ನಂತರ ಸಂಬಂಧಪಟ್ಟ ಮಾಲೀಕರಿಂದ ಹಣ ವಸೂಲಿ ಮಾಡಲು ಸೂಚಿಸಿದರು. ಅದಲ್ಲದೆ ರಾಜಕಾಲುವೆಯ ಸೈಡ್ ಡ್ರೈನ್ಸ್ ಗಳಲ್ಲಿ ಹೂಳೆತ್ತುವ ಹಾಗೂ ಜಲಮಂಡಳಿಯ ಒಳ ಚರಂಡಿಗಳಲ್ಲಿ ಕಾಲಕಾಲಕ್ಕೆ ಸಕ್ಕಿಂಗ್ ಮಾಡುತ್ತಿರಲು ಸೂಚಿಸಿದರು.

ಒಂದು ಬಾರಿ ಸ್ವಚ್ಛತೆಗೆ ಪ್ರಸ್ತಾವನೆ ಸಲ್ಲಿಸಿ: ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಸುಮಾರು 13 ಕಿ.ಮೀ ಕಚ್ಚಾ ಡ್ರೈನ್ ಬರಲಿದ್ದು, ಅದರಲ್ಲಿ ಒಂದು ಬಾರಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಸಲು ಪ್ರಸ್ತಾವನೆ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಕ್ಕುಪತ್ರ ನೀಡಲು ಕ್ರಮವಹಿಸಲು ಸೂಚನೆ: ದೊಡ್ಡಬೆಟ್ಟಹಳ್ಳಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಯೋಜನೆಯಡಿ 30 ಮಂದಿಗೆ ಹಕ್ಕುಪತ್ರ ನೀಡಬೇಕಿದೆ. ಆದರೆ ಈವರೆಗೆ 17 ಮಂದಿಗೆ ನೀಡಿದ್ದು, ಇನ್ನೂ 13 ಮಂದಿಗೆ ಹಕ್ಕುಪತ್ರ ನೀಡಬೇಕಿದೆ. ಈ ಪೈಕಿ ಹಕ್ಕು ಪತ್ರ ನೀಡಲು ಕೂಡಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

17 ದೂರುಗಳ ಸ್ವೀಕಾರ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದಂತಹ ಬಹುತೇಕ ದೂರುಗಳನ್ನು ಇತ್ಯರ್ಥ ಪಡಿಸಲಾಗಿದೆ. ಇಂದು 17 ದೂರುಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯೊಳಗಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು: 1. ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಮನವಿ.
2. ಸರ್ಕಾರಿ ಶಾಲೆಯ ಬಳಿ ಸ್ವಚ್ಛತೆ ಕಾಪಾಡಲು ಮನವಿ. 3. ರಾಮಕೃಷ್ಣ ಹೆಗ್ಡೆ ನಗರದಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಲು ಮನವಿ. 4. ರಾಜಕಾಲುವೆ ಬಫರ್ ವಲಯದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಯಲು ಮನವಿ. 5. ರಾಜಕಾಲುವೆಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಲು ಮನವಿ.

ಈ ವೇಳೆ ವಲಯ ಆಯುಕ್ತ ಕರೀಗೌಡ, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತರಾದ ಮಮತಾ, ಮುಖ್ಯ ಅಭಿಯಂತರರಾದ ರಂಗನಾಥ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ