NEWSನಮ್ಮಜಿಲ್ಲೆ

ಆತಂಕ ತಂದೊಡ್ಡಿದೆ ಪಾದರಾಯನಪುರ ಘಟನೆ

 ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಎಎಪಿ ಬೆಂಗಳೂರು ಘಟಕಾಧ್ಯಕ್ಷ ಮೋಹನ್ ದಾಸರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾದರಾಯನಪುರದಲ್ಲಿ ಭಾನುವಾರ (ಏ.19) ರಾತ್ರಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಕರೆದುಕೊಂಡು ಹೋಗಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು  ಹಲ್ಲೆ ನಡೆಸಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ಅಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ‌.

ಯಾವುದೇ ರೋಗಗಳಿಗೆ ಧರ್ಮ, ಜಾತಿ, ಭಾಷೆಯ ಭೇದ-ಭಾವವಿಲ್ಲ ಎನ್ನುವುದು ಈಗಾಗಲೇ ಸಾಬೀತಾಗಿದೆ. ಅಲ್ಲದೇ ಇದು ಕೇವಲ ನಮ್ಮ ದೇಶದ ಸಮಸ್ಯೆಯಲ್ಲ ಪ್ರಪಂಚದ ಬಹುತೇಕ ದೇಶಗಳು ಕೊರೊನಾ ಕೈಗೆ ಸಿಲುಕಿ ನಲುಗಿ ಹೋಗಿವೆ. ಇಂತಹ ಸಂದರ್ಭದಲ್ಲಿ ನಾಗರಿಕರು ‘ಕೊರೊನಾ ವಾರಿಯರ್ಸ್‌ಗೆ’ ಅಸಹಕಾರ ನೀಡುವುದು ದೇಶದ ಪ್ರಜೆಗಳಾದ ನಮ್ಮ ಗೌರವಕ್ಕೆ ತಕ್ಕುದಾದ ಸಂಗತಿ ಅಲ್ಲ.  ಅಲ್ಲದೇ ಈ ನೆಲದ ಕಾನೂನನ್ನು ಗೌರವಿಸಬೇಕಾಗಿರುವುದು ಎಲ್ಲರ ಕರ್ತವ್ಯವೂ ಆಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲೆ ಅತಿ ಹೆಚ್ಚು ಪ್ರಕರಣಗಳು ಅಂದರೆ ಸುಮಾರು 18 ಸೋಂಕಿತರು ಪಾದರಾಯನಪುರ ಪ್ರದೇಶದಲ್ಲಿ ಕಂಡು ಬಂದಿದ್ದಾರೆ. ಅವರ ಸಂಪರ್ಕದಲ್ಲಿ ಸುಮಾರು 56 ಮಂದಿ ಇದ್ದಾರೆ. ಇಂತಹ ವೇಳೆಯಲ್ಲಿ ಸ್ವಲ್ಪವೇ ಎಡವಿದರೂ ಸಹ ಸೋಂಕಿತರ ಸಂಖ್ಯೆ ಹೆಚ್ಚಾಗುವುದಲ್ಲದೆ. ಅಮಾಯಕರ ಪ್ರಾಣಕ್ಕೂ ಇದು ಎರವಾಗುತ್ತದೆ ಎನ್ನುವುದನ್ನು ಮನಗಾಣಬೇಕಿದೆ ಎಂದು ಹೇಳಿದ್ದಾರೆ.

ಇದರೊಟ್ಟಿಗೆ ಸುಮಾರು 56 ಮಂದಿಯನ್ನು ಕ್ವಾರಂಟೈನ್‌ಗೆ ಕರೆ ತರಲು ಹೋಗಿದ್ದ  ಆರೋಗ್ಯ ಇಲಾಖೆ ಸಿಬ್ಬಂದಿ, ಬಿಬಿಎಂಪಿ ಅಧಿಕಾರಿ, ಆಶಾ ಕಾರ್ಯಕರ್ತರಿಗೆ, ಸ್ವಯಂ ಸೇವಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಕೆಲಸ. ಜನರಲ್ಲಿ ವಿಶ್ವಾಸ ಬರುವಂತೆ ನೋಡಿಕೊಳ್ಳುವುದು ಧಾರ್ಮಿಕ ಮುಖಂಡರು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖ ಕರ್ತವ್ಯ. ಇಂತಹ ಆತಂಕಕಾರಿ ವಿಚಾರದಲ್ಲಿ ರಾಜಕೀಯವನ್ನು ಎಳೆದು ತರುವುದು ವೈರಸ್ಸಿಗಿಂತಲೂ ಭಯಾನಕ ಮನಸ್ಥಿತಿ ಎಂದು ತಿಳಿಸಿದ್ದಾರೆ.

ಈ ಘಟನೆಯ ಕುರಿತಾಗಿ ಸ್ಥಳೀಯ ಶಾಸಕ ಜಮೀರ್ ಅಹಮದ್ ಅವರು ನೀಡಿರುವ ‘ನನ್ನನ್ನು ಕೇಳಿಕೊಂಡು ಹೋಗಬೇಕಿತ್ತು’ ಎನ್ನುವ ಹೇಳಿಕೆ ಅವರ ಸ್ಥಾನಕ್ಕೆ ತಕ್ಕುದಾದುದಲ್ಲ ಹಾಗೂ ಇಂತಹ ವಿಚಾರದಲ್ಲಿ ಪಕ್ಷ ರಾಜಕೀಯವನ್ನು ಬಿಟ್ಟು ರೋಗದ ವಿರುದ್ದ ಹೋರಾಡುವ ಮನಸ್ಥಿತಿಯನ್ನು ಶಾಸಕರು ತಾವೂ ಬೆಳೆಸಿಕೊಳ್ಳಬೇಕು ಹಾಗೂ ಜನರಿಗೂ ಮನದಟ್ಟು ಮಾಡಿಸಬೇಕು ಅದನ್ನು ಬಿಟ್ಟು ಉಡಾಫೆಯ ಉತ್ತರ ನೀಡಿರುವುದು ಶಾಸಕರ ಅವಿವೇಕತನ ಹಾಗೂ ದುರಹಂಕಾರದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಈ ರೋಗದಿಂದ ಪಾರಾಗಲು ಸಂಘರ್ಷ ನಡೆಸುತ್ತಿದೆ‌ ಇಂತಹ ಸಂದರ್ಭದಲ್ಲಿ ಎಲ್ಲರು ಒಗ್ಗಟ್ಟಾಗಿ ಕೈ ಜೋಡಿಸಿದರೆ ಮಾತ್ರ ಮುಂದಿನ ದಿನಗಳು ಆಶಾದಾಯಕವಾಗಿರಲು ಸಾಧ್ಯ ಇಲ್ಲದಿದ್ದರೆ ಆತಂಕದಲ್ಲೆ ನಾವೆಲ್ಲರೂ ದಿನದೂಡಬೇಕಾಗುತ್ತದೆ. ಆದ ಕಾರಣ ವೈದ್ಯರಿಗೆ, ಪೊಲೀಸರಿಗೆ, ಸ್ವಯಂಸೇವಕರಿಗೆ ಸಮಾಜದ ಎಲ್ಲಾ ನಾಗರಿಕರು ಸಹಕರಿಸಬೇಕು ಎಂದು ಪಕ್ಷದ ಪರವಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ