Please assign a menu to the primary menu location under menu

CrimeNEWSನಮ್ಮರಾಜ್ಯ

ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಜಿಲ್ಲೆಯ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ.

ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್, ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಹಾಗೂ ಬಿಬಿಎಂಪಿ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದಿಷ್ಟೇ ಅಲ್ಲದೆ ಬೆಳಗಾವಿ, ಬಾಗಲಕೋಟೆ, ರಾಯಚೂರು ಹಾಗೂ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿದಂತೆ ಸಚಿನ್ ಮಂಡೇದ್‌ಗೆ ಸಂಬಂಧಿಸಿದ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಸಂಜಯ್ ನಿವಾಸದ ಮೇಲೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.

ಬೆಂಗಳೂರಿನಲ್ಲಿಯೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಬಿಬಿಎಂಪಿ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ