Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು ಈ ಮೂಲಕ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ.

ಅಲ್ಲದೆ ಇದು ಸಂಕಷ್ಟದಲ್ಲಿದ್ದ ಅತಿಥಿ ಶಿಕ್ಷಕರಿಗೆ ಖುಷಿ ನೀಡಿದಂತಾಗಿದೆ. ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂದು ತಿಳಿಸಿದ್ದಾರೆ.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ.

ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು ರೂ.18,150ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆ: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮೂಲಸೌಲಭ್ಯ ವಲಯದ ಪಿಪಿಪಿ ಯೋಜನೆಗಳ ನೀತಿ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ಸಂ: 3 ರ ಬದಲಿಗೆ ರಸ್ತೆ ಮೇಲ್ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 44.50 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ತಾಲೂಕು, ಬಿಡದಿ ಹೋಬಳಿಯ ವಿವಿಧ ಗ್ರಾಮಗಳು ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಬಾಗಶಃ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ” ಯೋಜನೆಯನ್ನು ಅನುಷ್ಟಾನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Leave a Reply

error: Content is protected !!
LATEST
ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ