VIJAYAPATHA.IN > ವಿಜಯಪಥ > NEWS > Crime > ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು
ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು
DevaFebruary 2, 2025
ಹಾಸನ: ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರೀಕೆರೆ ತಾಲೂಕಿನ ಯಾದಪುರ ಬೈಪಾಸ್‌ನಲ್ಲಿ ನಡೆದಿದೆ.
ಅಪಘಾತದಲ್ಲಿ ಟಿವಿಎಸ್ ಮೊಪೆಡ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಾವ ಗಂಗಾಧರ ನಾಯಕ (50) ಸೊಸೆ ಪ್ರಿಯಾ (20) ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಶಿಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಅರಸೀಕೆರೆಯಿಂದ ಮುರುಂಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್‌ಗೆ ತಿರುವಿನಲ್ಲಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.
Related
Deva
Leave a reply